ವಿದ್ಯಾರ್ಥಿನಿ ನಿಗೂಢ ಆತ್ಮಹತ್ಯೆ: ಸಿಐಡಿ ತನಿಖೆಗೆ ಒತ್ತಾಯ
Team Udayavani, Jul 17, 2019, 1:38 PM IST
ಬಾಗಲಕೋಟೆ: ವಿದ್ಯಾರ್ಥಿನಿ ಪ್ರಿಯಾಂಕ ಮೇತ್ರಿ ಸಾವಿನ ಪ್ರಕರಣ ಮರು ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿ ಎಸ್ಪಿಗೆ ಮನವಿ ಸಲ್ಲಿಸಿತು.
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಪಟ್ಟಣದ ರಾಯಲ್ ಪ್ಯಾಲೇಸ್ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿ ಪ್ರಿಯಾಂಕ ಮೇತ್ರಿ ಸಾವಿನ ಪ್ರಕರಣ ಮರುದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.
ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಘಟಕದ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ದ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, ರಾಯಲ್ ಪ್ಯಾಲೇಸ್ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾಂಕ ಸಾವಿನ ಪ್ರಕರಣವನ್ನು ಪೊಲೀಸರು ಅಸಹಜ ಸಾವು ಎಂದು ದಾಖಲಿಸಿಕೊಂಡು ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯ ಪಿಎಸ್‌ಐ ಮತ್ತು ಡಿವೈಎಸ್ಪಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಜಮಖಂಡಿ ಪೊಲೀಸ್ ಠಾಣೆಯ ಪಿಎಸ್‌ಐ, ಡಿವೈಎಸ್‌ಪಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರಕರಣ ಮತ್ತೆ ದಾಖಲಿಸುವ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕಾಲೇಜು ಆಡಳಿತ ಮಂಡಳಿ ಸದಸ್ಯರನ್ನು ವಿಚಾರಣೆ ಒಳಪಡಿಸಲಾಗುವುದು. ಡಿವೈಎಸ್‌ಪಿ ನೇತೃತ್ವದಲ್ಲಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಸ್ಪಿ ಲೋಕೇಶ ಜಗಲಾಸಾರ್ ಭರವಸೆ ನೀಡಿದರು.
ಮಾದಿಗ ಸಮಾಜದ ರಾಜ್ಯ ಉಪಾಧ್ಯಕ್ಷ ಹಣಮಂತ ಮಾದರ, ಜಿಲ್ಲಾಧ್ಯಕ್ಷ ಶಿವಾನಂದ ಬಿಸನಾಳ, ಸಂಚಾಲಕ ಫಕೀರಪ್ಪ ಮಾದರ, ಕೆಎಂಎಎಸ್‌ನ ಅಧ್ಯಕ್ಷ ಲಗಮಪ್ಪಾ ಮಾದರ, ಉಪಾಧ್ಯಕ್ಷೆ ಪ್ರೇಮಾ ಕಲಕೇರಿ, ನ್ಯಾ.ಎ.ಜೆ. ಸದಾಸಿವ ವರದಿ ಜಾರಿಗೆ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಶಿವಾನಂದ ಟವಳಿ, ಮುಖಂಡರಾದ ರಾಜು ಮನ್ನಿಕೇರಿ, ಹನುಮಂತ ಮಾದರ, ವಿಠuಲ ಹೊಸಮನಿ, ಶಿವಾನಂದ ಟವಳಿ, ಹನುಮಂತ ದೊಡ್ಡಮನಿ, ಜಿಲ್ಲಾ ಮಾತಂಗ ಸಮಿತಿ ಜಿಲ್ಲಾಧ್ಯಕ್ಷ ಶ್ರೀಕಾಂತ ಪೂಜಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.