ಶಿಕ್ಷಕಿ ಮುಂದುವರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Sep 2, 2018, 5:10 PM IST
ಅಮೀನಗಡ: ಸೂಳೇಭಾವಿ ಸರ್ಕಾರಿ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ಡಾ| ಎಸ್.ಸಿ.ರಂಜಣಗಿ ಅವರನ್ನು ಹೆಚ್ಚುವರಿ ಶಿಕ್ಷಕಿ ಎಂದು ಗುರುತಿಸಿ ವರ್ಗಾವಣೆ ಮಾಡುವ ಕ್ರಮ ಖಂಡಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶನಿವಾರ ಪ್ರತಿಭಟನೆ ನಡೆಸಿದರು.
ಸೂಳೇಭಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ 13 ವರ್ಷಗಳಿಂದ ಶಿಕ್ಷಕಿಯಾಗಿರುವ ಡಾ| ರಂಜಣಗಿ ಅವರನ್ನು ನಿಯಮಾನುಸಾರ ಹೆಚ್ಚುವರಿ ಶಿಕ್ಷಕಿ ಎಂದು ಗುರುತಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ನಮಗೆ ನಮ್ಮ ನೆಚ್ಚಿನ ಶಿಕ್ಷಕಿ ಎಸ್.ಸಿ.ರಂಜಣಗಿ ಅವರು ಬೇಕು ಎಂದು ಕಣ್ಣೀರಿಟ್ಟರು. ಅಧಿಕಾರಿಗಳು ಅವರನ್ನು ವರ್ಗಾವಣೆ ಮಾಡಬಾರದು. ಇದರಿಂದ ನಮ್ಮ ಕಲಿಕೆಗೆ ತೊಂದರೆಯಾಗುತ್ತದೆ. ಶಾಲೆಯಲ್ಲಿಯೇ ಮುಂದುವರಿಸುವಂತೆ ವಿದ್ಯಾರ್ಥಿಗಳು ಶಾಲೆಯ ಹೊರಭಾಗದಲ್ಲಿ ಕಣ್ಣೀರು ಹಾಕುತ್ತಾ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಾತನಾಡಿ, ಡಾ| ರಂಜಣಗಿ ಅವರು ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಕೂಡಾ ಕಲಿಸಿದ್ದಾರೆ. ಮತ್ತು ಎಲ್ಲ ವಿಷಯಗಳ ಕುರಿತು ಮಾಹಿತಿ ಕೂಡಾ ನೀಡುತ್ತಾರೆ. ಯಾವುದೇ ಕಾರಣಕ್ಕೂ ಹೆಚ್ಚುವರಿಯಾಗಿ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದರು. ಇದೇ ವೇಳೆ ಕೆಲವು ವಿದ್ಯಾರ್ಥಿನಿಯರು ಶಿಕ್ಷಕಿ ಡಾ| ಎಸ್.ಸಿ.ರಂಜಣಗಿ ಅವರನ್ನು ತಬ್ಬಿ ಹಿಡಿದುಕೊಂಡು ಗೋಳಿಡುತ್ತಿದ್ದರು. ವಿದ್ಯಾರ್ಥಿಗಳ ದುಃಖಕ್ಕೆ ಶಿಕ್ಷಕಿಯೂ ದು:ಖೀಸುತ್ತಿರುವುದು, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಮಧ್ಯೆ ಇರುವ ಭಾವನಾತ್ಮಕ ಸಂಬಂಧಕ್ಕೆ ಸಾಕ್ಷಿಯಾಗಿತ್ತು.
ಸ್ಥಳಕ್ಕೆ ಆಗಮಿಸಿದ ಯುವ ಮುಖಂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಬಿಸಿ ಉಪಾಧ್ಯಕ್ಷ ನಾಗೇಶ ಗಂಜಿಹಾಳ ಮಾತನಾಡಿ, ಡಾ| ಎಸ್.ಸಿ.ರಂಜಣಗಿ ಶಿಕ್ಷಕಿ ಅವರ ಹೆಚ್ಚುವರಿಯಾಗಿದ್ದು, ನಮಗೂ ಕೂಡಾ ನೋವು ಆಗಿದೆ. ಅವರನ್ನು ಹೆಚ್ಚುವರಿ ಶಿಕ್ಷಕಿಯಂದು ಬೇರೆಡೆ ವರ್ಗಾವಣೆ ಮಾಡುತ್ತಿದ್ದಾರೆ. ದಕ್ಷತೆಯಿಂದ ಸೇವೆ ಸಲ್ಲಿಸುತ್ತಿರುವ ಅವರು ಉತ್ತಮ ಪಾಠ ಮತ್ತು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾ ಎಲ್ಲರ ಹೃದಯ ಗೆದ್ದಿದ್ದಾರೆ. ನಮ್ಮ ಶಾಲೆಯಲ್ಲಿ 466 ವಿದ್ಯಾರ್ಥಿಗಳಿದ್ದಾರೆ ಎಂಟು ವಿಭಾಗಗಳಿಗೆ 2017-18 ಸಾಲಿನ ಮಕ್ಕಳ ಅಂಕಿ ಅಂಶಗಳನ್ನು ನೋಡಿ ಇಲಾಖೆ ಹೆಚ್ಚುವರಿ ಮಾಡಿದೆ. ಆದರೆ 2018-19 ಸಾಲಿನಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದೆ. ಇದರಿಂದ ಹೆಚ್ಚುವರಿ ಮಾಡಲು ಆಗುವುದಿಲ್ಲ. ಮಾಡಿದರೆ ಅದರಿಂದ ಮಕ್ಕಳಿಗೆ ತೊಂದರೆಯಾಗಲಿದೆ. ಇದೇ ಶಾಲೆಯಲ್ಲಿ ಉಳಿಸಲು ಶಾಸಕರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಇಲ್ಲಿಯೇ ಉಳಿಸಲು ಪ್ರಯತ್ನ ಮಾಡುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಸ್ಥಳದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮಹಾಂತಪ್ಪ ಭದ್ರಣ್ಣವರ, ಪ್ರೌಢಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ರಮೇಶ ದುತ್ತರಗಿ, ವಿದ್ಯಾರ್ಥಿಗಳಾದ ರಮೇಶ ಆಲೂರ, ಕಾವ್ಯ ಕಮತಗಿ,ಅಕ್ಷತಾ ಭದ್ರಿ,ವರ್ಷಾ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.