ಪರಿಶ್ರಮ-ಏಕಾಗ್ರತೆಯಿಂದ ಯಶಸ್ಸು ಸಾಧ್ಯ: ಹಾದಿಮನಿ
ಸರ್ಕಾರಿ ಸೌಲಭ್ಯದ ಜತೆಗೆ ದಾನಿಗಳ ನೆರವಿನ ಸದುಪಯೋಗಕ್ಕೆ ಸಲಹೆ
Team Udayavani, Mar 25, 2022, 1:23 PM IST
ಹುನಗುಂದ: ಸತತ ಪರಿಶ್ರಮ ಮತ್ತು ಏಕಾಗ್ರತೆಯಿಂದ ಮಾಡಿದ ಕಾರ್ಯದಲ್ಲಿ ಮಾತ್ರ ಯಶಸ್ಸು ನಿರೀಕ್ಷಿಸಲು ಸಾಧ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ, ನಿವೃತ್ತ ಪ್ರಾಧ್ಯಾಪಕ ಎಸ್. ಎನ್.ಹಾದಿಮನಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಅಮೂಲ್ಯವಾದ ವಿದ್ಯಾರ್ಥಿ ಜೀವನದ ಪ್ರತಿ ಕ್ಷಣ ಸದುಪಯೋಗಪಡಿಸಿಕೊಂಡು ತಮ್ಮ ಬದುಕನ್ನು ರೂಪಿಸಿಕೊಳ್ಳುವುದರತ್ತ ವಿದ್ಯಾರ್ಥಿಗಳು ಗಮನಕೊಡಬೇಕು. ಸಾಧಕರಾದಾಗ ಮಾತ್ರ ಸಮಾಜ ನಮ್ಮನ್ನು ಗೌರವಿಸುತ್ತದೆ. ನಿರಂತರ ಪ್ರಯತ್ನದಿಂದ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಎಂದರು.
ಪತ್ರಕರ್ತ ಅಮರೇಶ ನಾಗೂರ ಮಾತನಾಡಿ, ಸರ್ಕಾರದ ಸೌಲಭ್ಯದ ಜತೆಗೆ ದಾನಿಗಳ ನೆರವನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಬೇಕು ಎಂದರು.
ಸರ್ಕಾರದಿಂದ ಪೂರೈಕೆಯಾದ ಸ್ಮಾರ್ಟ್ ಬೋರ್ಡ್ ಅನಾವರಣ ಮಾಡಿದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶರಣಗೌಡ ಅಮರಣ್ಣವರ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ವಿದ್ಯಾರ್ಥಿಗಳಾದ ಅಪೂರ್ವ ಮಲಗಿಹಾಳಮಠ, ಐಶ್ವರ್ಯ ಮುಳ್ಳೂರ, ಸ್ವಪ್ನಾ ಮೇಟಿ, ಪಾರ್ವತಿ ಹಿರೇಕುರುಬರ, ಅಮರೇಶ ಬಡಿಗೇರ, ಬಸಮ್ಮ ಗೌಡರ, ಸಾವಿತ್ರಿ ಬಸನಗೌಡರ, ಯಲ್ಲವ್ವ ನಡಗಡ್ಡಿ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕರ ಪರವಾಗಿ ಶರಣಪ್ಪ ಹೂಲಗೇರಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗಾಗಿ ಉಚಿತ ನೋಟ್‌ಬುಕ್ ವಿತರಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸುಭಾಸ ಮುಕ್ಕಣ್ಣವರ, ಯಲ್ಲಪ್ಪ ಕರಿಗೌಡರ ಉಪಸ್ಥಿತರಿದ್ದರು. ಪ್ರಾಚಾರ್ಯ ಎ.ಎಚ್. ಮೋಮಿನ್ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.