ಉತ್ತಮ ಆಡಳಿತಕ್ಕೆ ಎಎಪಿ ಬೆಂಬಲಿಸಿ: ಲಕ್ಷಣ್ಣವರ

ಸಾರ್ವಜನಿಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಆಮ್‌ ಆದ್ಮಿ ಪಕ್ಷಕ್ಕೆ ರೈತರು ಬೆಂಬಲ ನೀಡಲಿದ್ದಾರೆ

Team Udayavani, Jul 9, 2022, 1:05 PM IST

ಉತ್ತಮ ಆಡಳಿತಕ್ಕೆ ಎಎಪಿ ಬೆಂಬಲಿಸಿ: ಲಕ್ಷಣ್ಣವರ

ಮುಧೋಳ: ಹೊಸ ಮನ್ವಂತರಕ್ಕೆ ನಾಂದಿ ಹಾಡುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಮ್‌ ಆದ್ಮಿ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಆಮ್‌ ಆದ್ಮಿ ಪಕ್ಷದ ತಾಲೂಕು ಮುಖಂಡ ಡಾ| ರವೀಂದ್ರ ಲಕ್ಷಣ್ಣವರ ಹೇಳಿದರು. ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಆಮ್‌ ಆದ್ಮಿ ಪಕ್ಷ ರಾಜಕೀಯ ಬದಲಾವಣೆಗಾಗಿ ಕಂಕಣಬದ್ಧವಾಗಿದೆ. ಪಕ್ಷಕ್ಕೆ ಜನರು ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರೈತ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, ಮೋದಿ ಅಧಿ ಕಾರಕ್ಕೆ ಬರುವ ಮುನ್ನ ನಾನು ತಿನ್ನುವುದಿಲ್ಲ ನಮ್ಮವರಿಗೆ ತಿನ್ನಲೂ ಬಿಡುವುದಿಲ್ಲ ಎಂಬ ಮಾತು ನಂಬಿದ್ದೆವು. ಆದರೆ ಮೋದಿಯ ಬಣ್ಣ ಬಹುಬೇಗ ಬದಲಾಗಿ ನಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ಬಿಜೆಪಿ ಆಡಳಿತವನ್ನು ಟೀಕಿಸಿದರು. ಹೊಸ ಭರವಸೆಯನ್ನು ಮೂಡಿಸಿ ಸಾರ್ವಜನಿಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಆಮ್‌ ಆದ್ಮಿ ಪಕ್ಷಕ್ಕೆ ರೈತರು ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿನ ಜನರು ಕಾಂಗ್ರೆಸ್‌, ಬಿಜೆಪಿ ಪಕ್ಷದ ಆಡಳಿತದಿಂದ ಬೇಸತ್ತು ಬೇರೆ ಪಕ್ಷಗಳತ್ತ ಮುಖ ಮಾಡಲು ಒಲವು ಹರಿಸುತ್ತಿದ್ದಾರೆ. ಆಮ್‌ ಆದ್ಮಿ ಪಕ್ಷಕ್ಕೆ ಜನರು ಖಂಡಿತ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು. ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ರಮೇಶ ಬದೂ°ರ ಮಾತನಾಡಿ, ರೈತ ಮುಖಂಡರು ನಮಗೆ ಬೆಂಬಲ ನೀಡಿರುವುದು ಆನೆ ಬಲ ಬಂದಂತಾಗಿದೆ.

ತಾಪಂ ಮತ್ತು ಜಿಪಂ ಚುನಾವಣೆ ಸ್ಪರ್ಧೆ ಹಿನ್ನೆಲೆ ಜಿಲ್ಲಾದ್ಯಂತ ಪಕ್ಷ ಸಂಘಟನೆ ಉದ್ದೇಶದಿಂದ ಮುಧೋಳದಲ್ಲಿ ಸಭೆ ನಡೆಸಲಾಗಿದೆ ಎಂದರು. ಯುವಕರನ್ನು ರಾಜಕಾರಣದತ್ತ ಸೆಳೆಯುವ ಉದ್ದೇಶದಿಂದ ತಾಪಂ ಮತ್ತು ಜಿಪಂ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು ರಾಜಕಾರಣದ ಅಮೂಲಾಗ್ರ ಬದಲಾವಣೆ  ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದೇವೆ.

ಭ್ರಷ್ಟಮುಕ್ತ ಆಡಳಿತ, ಕ್ರಾಂತಿಕಾರಿ ಬದಲಾವಣೆಗೆ ಮತದಾರರು ಆಮ್‌ ಆದ್ಮಿ ಪಾರ್ಟಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡರು. ರೈತ ಮುಖಂಡರಾದ ಈರಪ್ಪ ಹಂಚನಾಳ, ಬಸವಂತ ಕಾಂಬಳೆ, ಕಾರ್ಮಿಕ ಮುಖಂಡ ಈರಣ್ಣಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.

ರೈತ ಮುಖಂಡರ ಬೆಂಬಲ : ಮುಧೋಳ ಖಾಸಗಿ ಹೊಟೆಲ್‌ನಲ್ಲಿ ನಡೆದ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು ಒಕ್ಕೊರಲಿನಿಂದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸುವ ನಿರ್ಧಾರ ಕೈಗೊಂಡರು.

ಟಾಪ್ ನ್ಯೂಸ್

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ; ಬೃಹತ್‌ ಮೊತ್ತದತ್ತ ಮುಂಬಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

7-rabakavi

Rabkavi Banhatti: ಮೊಬೈಲ್ ಕಳ್ಳತನ ಪತ್ತೆ: ವಾರಸುದಾರರಿಗೆ ಹಸ್ತಾಂತರ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

arest

Mangaluru: ಮಾದಕ ವಸ್ತು ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣದಲ್ಲಿ ಮೂವರು ವಶಕ್ಕೆ

crime

Puttur: ಕಾರು ತಡೆಬೇಲಿ ಸಹಿತ ಹಲವು ವಾಹನಗಳಿಗೆ ಢಿಕ್ಕಿ

12

Mangaluru: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

fraudd

Puttur: ಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.