ನೀರಿನ ಕರ ವಸೂಲಿಗೆ ಕ್ರಮ ಕೈಗೊಳ್ಳಿ
ಅಕ್ರಮ ನಳ ಸಂಪರ್ಕ ಪರಿಶೀಲನೆ ನಡೆಸಿ ಕ್ರಮ
Team Udayavani, Mar 23, 2022, 12:44 PM IST
ಮುಧೋಳ: ನಗರದಲ್ಲಿ ನೀರಿನ ಕರವನ್ನು ಸೂಕ್ತ ರೀತಿಯಲ್ಲಿ ವಸೂಲಿ ಮಾಡಿದರೆ ನಗರಸಭೆಗೆ ಹೆಚ್ಚಿನ ಆದಾಯ ಹರಿದುಬರುತ್ತದೆ. ಈ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ನಗರಸಭೆ ಸದಸ್ಯರು ಒಕ್ಕೊರಲಿನಿಂದ ಒತ್ತಾಯಿಸಿದರು.
ನಗರದ ನಗರಸಭೆ ಸಭಾಭವನದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನೀರಿನ ಕರವಸೂಲಿ ವಿಷಯ ಚರ್ಚೆಗೆ ಗ್ರಾಸವಾಯಿತು. ನಗರಸಭೆ ಸದಸ್ಯ ಡಾ| ಸತೀಶ ಮಲಘಾಣ ನಗರದಲ್ಲಿ ನೀರಿನ ಕರ ವಸೂಲಿ ಯಾವ ಮಟ್ಟದ ಸಂಗ್ರಹ ಮಾಡಲಾಗುತ್ತಿದೆ ಎಂದು ಪ್ರಶ್ನಿದರು, ಅವರ ಮಾತಿಗೆ ಉತ್ತರ ಉತ್ತರಿಸಿದ ಅಧಿಕಾರಿಗಳು ಶೇ. 15 ಕರ ವಸೂಲಿಯಾಗುತ್ತಿದೆ ಎಂದರು. ಈ ವೇಳೆ ಒಕ್ಕೊರಲಿನಿಂದ ಧ್ವನಿಗೂಡಿಸಿದ ಸದಸ್ಯರು, ನಗರದಲ್ಲಿನ ಅಕ್ರಮ ನಳ ಸಂಪರ್ಕದ ಬಗ್ಗೆ ಪರಿಶೀಲನೆ ನಡೆಸಿ ಅವುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನೀರಿನ ಕರ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಬೇಕು ಎಂದರು. ಸದಸ್ಯರ ಮಾತಿಗೆ ಉತ್ತರಿಸಿದ ನಗರಸಭೆ ಆಯುಕ್ತ ಶಿವಪ್ಪ ಅಂಬಿಗೇರ ನಾನು ಅಧಿಕಾರಕ್ಕೆ ಬರುವ ಮುನ್ನ ನೀರಿನ ಕರ ಸಂಗ್ರಹ ಶೇ. 4ರಷ್ಟಿತ್ತು ನಾನು ನೋಟಿಸ್ ನೀಡಿ ಹಲವು ಕ್ರಮ ಕೈಗೊಂಡ ಮೇಲೆ 15ಕ್ಕೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕರ ಸಂಗ್ರಹಕ್ಕೆ ಮುಂದಾಗುವುದಾಗಿ ತಿಳಿಸಿದರು. ನಗರದಲ್ಲಿನ ಮನೆ, ವಾಣಿಜ್ಯ, ಕೈಗಾರಿಕೆ ತೆರಿಗೆಯನ್ನೂ ಸಹ ಹೆಚ್ಚಿನ ಪ್ರಮಾಣದಲ್ಲಿ ವಸೂಲಿ ಮಾಡುವಂತೆ ತಿಳಿಸಿದರು.
ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ನಗರದ ಶಿವಾಜಿ ವೃತ್ತದಿಂದ ಉತ್ತೂರ ಗೇಟ್‌ವರೆಗೆ ಹದಗೆಟ್ಟಿರುವ ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಅಧ್ಯಕ್ಷ ಗುರುಪಾದ ಕುಳಲಿ ತಿಳಿಸಿದರು. ರಸ್ತೆ ದುರಸ್ಥಿಗೆ 1.60 ಕೋಟಿ ಅಂದಾಜು ಮೊತ್ತ ತಯಾರಿಸಲಾಗಿದೆ. ನಗರೋತ್ಥಾನದಡಿ ಶೀಘ್ರವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಸದಸ್ಯ ಮಲಘಾಣ ಮಾತನಾಡಿ, ನಗರವನ್ನು ಸ್ವಚ್ಛವಾಗಿಡಲು ದಿನಂಪ್ರತಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಪ್ರತಿ ತಿಂಗಳು ಸೂಕ್ತ ಸಮಯ ದಲ್ಲಿ ಸಂಬಳ ನೀಡಿ ಎಂದು ಹೇಳಿದರು. ಈ ವೇಳೆ ಮಾತನಾಡಿದ ಆಯುಕ್ತ ಅಂಬಿಗೇರ, ಪೌರಕಾ ರ್ಮಿಕರ ಹಿತ ಕಾಯುವುವನ್ನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.
ಸದಸ್ಯ ಕುಮಾರ ಪಮ್ಮಾರ ಮಾತನಾಡಿ, ಬೇಸಿಗೆ ಕಾಲದಲ್ಲಿ ನಗರ ವಿವಿಧ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ನಗರಸಭೆಯ ನೀರಿನ ಟ್ಯಾಂಕ್‌ಗಳೊಂದಿಗೆ ಬಾಡಿಗೆ ಟ್ಯಾಂಕರ್‌ಗಳನ್ನು ಪಡೆದುಕೊಂಡು ನಗರದ ನಿವಾಸಿಗಳಿಗೆ ನೀರು ಒದಗಿಸಲು ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.
ಬರೀ ಬಿಜೆಪಿ ಸದಸ್ಯರ ಕೆಲಸ ಮಾಡಿದರೆ ಹೇಗೆ ?: ನಗರಸಭೆ ಉಳಿತಾಯ ಅನುದಾನದಲ್ಲಿ ನಗರಸಭೆಯ ಬಿಜೆಪಿ ಅಭ್ಯರ್ಥಿಗಳ ವಾರ್ಡ್‌ಗಳಲ್ಲಿಯೇ ಹೆಚ್ಚಿನ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ ನಗರಸಭೆ ಸದಸ್ಯ ಸಂತೋಷ ಪಾಲೋಜಿ, ಕಾಂಗ್ರೆಸ್ ಪಕ್ಷದ ಸದಸ್ಯರ ವಾರ್ಡ್ ಗಳಲ್ಲಿ ಹೆಚ್ಚಿನ ಕಾರ್ಯಗಳಾಗುತ್ತಿಲ್ಲ. ಅಧಿಕಾರಿಗಳು ತಾರತಮ್ಯ ಧೋರಣೆಯಿಂದ ಕಾರ್ಯ ನಿರ್ವಹಿಸುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಬಿಜೆಪಿ ಸದಸ್ಯ ಸುನೀಲ ನಿಂಬಾಳ್ಕರ, ಕುಸ್ತಿ ಕಣ ದುರಸ್ತಿಗೊಳ್ಳುತ್ತಿದೆ. ಅದು ಕಾಂಗ್ರೆಸ್ ಸದಸ್ಯರ ವಾರ್ಡ್‌ನಲ್ಲಿದೆ ಎಂದು ಎದುರುತ್ತರ ಕೊಟ್ಟರು. ಈ ವೇಳೆ ಮಧ್ಯ ಪ್ರವೇಶಿಸಿದ ಆಯುಕ್ತ ಎಲ್ಲ ವಾರ್ಡ್ ಗಳಲ್ಲಿಯೂ ಕಾರ್ಯಗಳಾಗುತ್ತಿವೆ ಎಂದು ಸಮಜಾಯಿಷಿ ನೀಡಿದರು.
ನಗರದ ಜನರ ಬೇಡಿಕೆಗೆ ತಕ್ಕಂತೆ ನಮ್ಮಲ್ಲಿ ಸೇಫ್ಟಿಕ್ ಟ್ಯಾಂಕ್‌ಗಳು ಇಲ್ಲ ಬೇರೆ ಕಡೆಯಿಂದ ಆಗಮಿಸಿ ಸೇಫ್ಟಿಕ್ ಟ್ಯಾಂಕರ್‌ಗಳು ಬಂದು ನಗರದ ಜನತೆಗೆ ಸೇವೆ ಸಲ್ಲಿಸುತ್ತಿವೆ. ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು ಎಂದು ಸದಸ್ಯರು ಒಕ್ಕರಲಿನಿಂದ ಒತ್ತಾಯಿಸಿದರು.
ನಗರಸಭೆ ಸದಸ್ಯೆ ಅಂಬಿ ಮಾತನಾಡಿ, ಎಸ್‌ಸಿಪಿ-ಟಿಎಸ್‌ಪಿ ಅನುದಾನದಲ್ಲಿ ಎಸ್‌ಸಿ- ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡುವ ಶಿಷ್ಟವೇತನದ ಬಗ್ಗೆ ನಮಗೆ ಸೂಕ್ತ ಮಾಹಿತಿ ನೀಡುತ್ತಿಲ್ಲ. ಇದರಿಂದ ನಮ್ಮ ವಾರ್ಡ್‌ನ ವಿದ್ಯಾರ್ಥಿಗಳು ಶಿಷ್ಯವೇತನದಿಂದ ವಂಚಿತವಾಗುವಂತಾಗಿದೆ. ಅಧಿಕಾರಿಗಳು ಎಲ್ಲ ಸದಸ್ಯರಿಗೂ ಸೂಕ್ತ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.
ಸದಸ್ಯ ವಿನೋದ ಕಲಾಲ ಮಾತನಾಡಿ, ನಗರಸಭೆ ಕಚೇರಿಯಲ್ಲಿ ಗುತ್ತಿಗೆ ಆಧಾರದ ಅದರಲ್ಲೂ ಡಾಟಾ ಎಂಟ್ರಿ ಆಪರೇಟರ್‌ಗಳ ದುವರ್ತನೆ ಹೆಚ್ಚಾಗಿದೆ. ಅಧಿಕಾರಿಗಳು ಅದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಅಂತವರನ್ನು ಬದಲಿಸಬೇಕು ಎಂದು ಆಕ್ರೋಶ ಹೊರಹಾಕಿದರು. ಡಾಟಾ ಎಂಟ್ರಿ ಆಪರೇಟರ್‌ಗಳು ಸದಸ್ಯರಿಗೆ ಸೂಕ್ತ ಮಾಹಿತಿ ನೀಡುವುದಿಲ್ಲ. ಸಾರ್ವಜನಿಕರೊಂದಿಗೆ ಸರಿಯಾಗಿ ವರ್ತಿಸುವುದಿಲ್ಲ ಎಂದು ಆರೋಪಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಆಯುಕ್ತ ಗುತ್ತಿಗೆ ಆಧಾರದ ನೌಕರರಿಗೆ ಈ ಬಗ್ಗೆ ತಿಳಿ ಹೇಳಿ ಅವರ ವರ್ತನೆಯಲ್ಲಿ ತಿದ್ದಿಕೊಳ್ಳಲು ಸೂಚಿಸಲಾಗುವುದು ಎಂದು ಹೇಳಿದರು.
ಸದಸ್ಯರಾದ ಸುರೇಶ ಕಾಂಬಳೆ, ಸದಾಶಿವ ಜೋಶಿ, ಸಂತೋಷ ಪಾಲೋಜಿ, ಪಾರ್ವತಿ ಹರಗಿ, ಸ್ವಾತಿ ಕುಲಕರ್ಣಿ, ಲಕ್ಷ್ಮೀ ಮಾನೆ, ನಾಮನಿರ್ದೇಶಕ ಅನಿಲ ಚವಾಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.