ಹಿರಿಯರ ಆಚಾರ-ವಿಚಾರ ಮಕ್ಕಳಿಗೆ ಕಲಿಸಿ

ಸಮುದಾಯ ಭವನಕ್ಕೆ 5 ಲಕ್ಷ ರೂ. ದೇಣಿಗೆ

Team Udayavani, Mar 25, 2022, 1:08 PM IST

8

ಬಾದಾಮಿ: ಆದಿಕಾಲದಿಂದ ಬಂದಂತಹ ಸಂಸ್ಕೃತಿ ಮರೆಯಬಾರದು. ನಮ್ಮ ಹಿರಿಯರ ಸಂಪ್ರದಾಯದಂತೆ ಮೂರು ತಿಂಗಳವಾದರೂ ತಮ್ಮ ಮಕ್ಕಳಿಗೆ ವೈದಿಕ ವೃತ್ತಿಯನ್ನು ಕಲಿಸಬೇಕು. ನಮ್ಮ ಪೂರ್ವಜರ ವೀರಶೈವರ ಆಚಾರ ವಿಚಾರಗಳನ್ನು ಮಕ್ಕಳಿಗೆ ಕಲಿಸಿಕೊಡಬೇಕಿದೆ ಎಂದು ಇಳಕಲ್‌-ಹುನಗುಂದ ಎಸ್‌ಆರ್‌ಇ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌ .ನವಲಿ ಹಿರೇಮಠ ಹೇಳಿದರು.

ಪಟ್ಟಣದ ಅಕ್ಕಮಹಾದೇವಿ ಅನುಭಾವ ಮಂಟಪದಲ್ಲಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವೀರಶೈವ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಂಗಮ ಸಮಾಜದಲ್ಲಿ ಬಹುತೇಕರು ಕಡುಬಡವರಾಗಿದ್ದು, ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜಂಗಮ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸಬೇಕು. ಬಡಜಂಗಮ ಸಮಾಜದವರನ್ನು ಸರಕಾರ ಗುರುತಿಸಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಬೇಕು. ಜಂಗಮ ಸಮಾಜಕ್ಕೆ ಸಾಮಾಜಿಕ, ಶೈಕ್ಷಣಿಕ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದರು. ಸಮಾಜ ಬಾಂಧವರು ವಿವಿಧ ರಂಗಗಳಲ್ಲಿ ಗುರುತಿಸಿಕೊಂಡು ಎಲ್ಲ ರಂಗಗಳಲ್ಲಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಬಾದಾಮಿ ನಗರದಲ್ಲಿ ರೇಣುಕಾಚಾರ್ಯರ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ ರೂ.ದೇಣಿಗೆ ನೀಡಿದರು.

ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಮಾತನಾಡಿ, ಜಂಗಮ ಸಮಾಜದವರು ಸಮಾಜದಲ್ಲಿ ಕಡಿಮೆ ಇದ್ದರೂ ಸಹಿತ ಉತ್ತಮ ಸಂಸ್ಕೃತಿ ರೂಢಿಸಿಕೊಂಡು ಬಂದಿದ್ದಾರೆ. ಜಂಗಮ ಸಮಾಜದ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಯವರು ಅನುಸರಿಸುವಂತೆ ಮಾಡಬೇಕು. ಎಲ್ಲ ಜಂಗಮ ಸಮಾಜದವರು ಒಗ್ಗಟ್ಟಿನಿಂದ ಕಾರ್ಯಕ್ರಮ ಆಯೋಜನೆ ಮಾಡಿ ಸರಕಾರದ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು.

ವೀರಪುಲಿಕೇಶಿ ಸಂಸ್ಥೆಯ ಚೇರಮನ್‌ ಎ.ಸಿ.ಪಟ್ಟಣದ, ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷ ಹನಮಂತ ಮಾವಿನಮರದ, ಜಿ.ಪಂ. ಮಾಜಿ ಸದಸ್ಯ ಎಂ.ಬಿ.ಹಂಗರಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿಯವರು ರೇಣುಕಾಚಾರ್ಯರ ಸಮುದಾಯ ಭವನ ನಿರ್ಮಾಣಕ್ಕಾಗಿ 1 ಲಕ್ಷ ರೂ. ದಾನ ನೀಡಿದರು.

ಬಿಇಒ ಕಚೇರಿಯ ಶಿಕ್ಷಣ ಸಂಯೋಜಕ ವಿ.ಎಸ್‌.ಹಿರೇಮಠ ಜಂಗಮ ಸಮಾಜದ ಆಚಾರ ವಿಚಾರ ಸಂಸ್ಕೃತಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ನವಗ್ರಹ ಹಿರೇಮಠದ ಶಿವಪೂಜಾ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ತಾಲೂಕು ಜಂಗಮ ಸಮಾಜದ ಅಧ್ಯಕ್ಷ ಶಿವುಕುಮಾರ ಹಿರೇಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುದಕಯ್ಯ ಹಿರೇಮಠ, ಪುರಸಭೆ ಅಧ್ಯಕ್ಷ ರಾಜಮಹಮ್ಮದ ಬಾಗವಾನ, ಬಿ.ಡಿ.ಸಿ.ಸಿ.ಬ್ಯಾಂಕ್‌ ನಿರ್ದೇಶಕ ಕುಮಾರಗೌಡ ಜನಾಲಿ, ಕೆಒಎಫ್‌ ನಿರ್ದೇಶಕ ಬಸವರಾಜ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಹಾಜರಿದ್ದರು. ಎಸ್‌ಆರ್‌ಇ ಫೌಂಡೇಶನ್‌ ಅಧ್ಯಕ್ಷ ಎಸ್‌.ಆರ್‌. ನವಲಿಹಿರೇಮಠ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗರಾಜ ಕಾಚೆಟ್ಟಿ, ಆದರ್ಶ ವಿದ್ಯಾಲಯದ ಎಸ್‌ಡಿಎಂಸಿ ಅಧ್ಯಕ್ಷ ಶಿವಯ್ಯ ಹಿರೇಮಠ, ಪುರಸಭೆ ಅಧ್ಯಕ್ಷ ರಾಜಮಹ್ಮದ ಬಾಗವಾನ್‌ ಅವರನ್ನು ಸನ್ಮಾನಿಸಲಾಯಿತು.

ಎಸ್‌.ಎಂ.ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವುಕುಮಾರ ಹಿರೇಮಠ ಸ್ವಾಗತಿಸಿದರು. ದೊಡ್ಡಯ್ಯ ಭೂಸನೂರಮಠ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಂಕರಗೌಡ ಪಾಟೀಲ, ಹೊನ್ನಯ್ಯ ಹಿರೇಮಠ, ಸಿದ್ದಯ್ಯ ಹಿರೇಮಠ, ಅಮರೇಶ ಯಮನೂರಮಠ, ಮುಕ್ಕಣ್ಣ ಜನಾಲಿ, ಸುನೀಲ ಕಾರುಡಗಿಮಠ, ಗುರುಸಿದ್ದಯ್ಯ ಹಿರೇಮಠ, ಉಮೇಶ ಭಿಕ್ಷಾವತಿಮಠ, ಮಲ್ಲಯ್ಯ ಮುಪ್ಪಿನವರ ಹಾಜರಿದ್ದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.