ಶಿಕ್ಷಕರೇ ಭವಿಷ್ಯದ ನಿರ್ಮಾಪಕರು: ಬಾಯಕ್ಕ ಮೇಟಿ
Team Udayavani, Jul 7, 2019, 2:32 PM IST
ಬಾದಾಮಿ: ಪಟ್ಟಣದಲ್ಲಿ ನಡೆದ ಶೈಕ್ಷಣಿಕ ಸಮಾವೇಶವನ್ನು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಉದ್ಘಾಟಿಸಿದರು.
ಬಾದಾಮಿ: ದೇಶದ ಭವಿಷ್ಯ ವರ್ಗದ ಕೋಣೆಗಳಲ್ಲಿ ನಿರ್ಮಾಣವಾಗುತ್ತಿದೆ ಎಂಬ ಎಸ್.ರಾಧಾಕೃಷ್ಣನ್ ವಾಣಿಯಂತೆ ಸಮಾಜದ ಎಲ್ಲರನ್ನು ನಿರ್ಮಿಸುವವರೇ ಶಿಕ್ಷಕರು. ಶಿಕ್ಷಕರೇ ಭವಿಷ್ಯದ ನಿರ್ಮಾಪಕರು ಎಂದು ಜಿಪಂ ಅಧ್ಯಕ್ಷೆ ಗಂಗೂಬಾಯಿ (ಬಾಯಕ್ಕ) ಮೇಟಿ ಹೇಳಿದರು.
ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಸಹಶಿಕ್ಷಕರ ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿರುವ ಎಲ್ಲರನ್ನು ನಿರ್ಮಿಸುವವರೇ ಶಿಕ್ಷಕರು. ಶಿಕ್ಷಕರ ಮೇಲೆ ದೊಡ್ಡ ಜವಾಬ್ದಾರಿಯಿದೆ. ಶಿಕ್ಷಕರು ಸಂಘಟಿತರಾಗಿ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ತಾಪಂ ಅಧ್ಯಕ್ಷೆ ರೇಣುಕಾ ಕೊಳ್ಳನ್ನವರ, ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪುರ, ಜಾಲಿಹಾಳ ಸಿದ್ದೇಶ್ವರ ಬ್ಯಾಂಕ್ ಅಧ್ಯಕ್ಷ ಶಾಂತಗೌಡ ಪಾಟೀಲ, ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ, ಡಿಡಿಪಿಐ ಬಿ.ಎಚ್.ಗೋನಾಳ, ಬಿಇಒ ಎ.ಎಸ್.ಹತ್ತಳ್ಳಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ ಎಚ್.ಕೆ, ಉಪಾಧ್ಯಕ್ಷ ರಾಮು ಗುಗವಾಡ, ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ ಪಿ., ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ ಪಟ್ಟಣಶೆಟ್ಟಿ ಹಾಜರಿದ್ದರು.
ಗೋಷ್ಠಿ: ಬಳಿಕ ನಡೆದ ಗೋಷ್ಠಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ(ಕರಡು) ಸಲಹೆಗಳು-ತಿದ್ದುಪಡಿಗೆ ಶಿಫಾರಸುಗಳು ವಿಷಯ ಕುರಿತು ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿದರು. ಶಿಕ್ಷಕರ ಸಮಸ್ಯೆಗಳ ಬಗ್ಗೆ ಸರಕಾರದ ಹಂತದಲ್ಲಿ ಗಮನ ಸೆಳೆದಿದ್ದೇವೆ. ಶಿಕ್ಷಕರಿಗೆ ಅನ್ಯಾಯವಾದರೆ ಸರಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಶೇಗುಣಸಿ ವಿರಕ್ತಮಠದ ಶ್ರೀ ಮಹಾಂತ ದೇವರು ವಿಚಾರಗಳನ್ನು ಮಂಡಿಸಿದರು. ಎಸ್.ಎಸ್.ಪಟ್ಟಣಶೆಟ್ಟಿ, ಎಲ್.ಎಸ್.ಬೀಳಗಿ, ಎಸ್.ಎಂ.ನದಾಫ, ಯು.ಎಸ್.ಪಾಟೀಲ, ಪಿ.ಪಿ. ಹನಮಗೌಡ್ರ, ಎಸ್.ಟಿ.ಬೋನಗೇರ, ಡಿ.ಬಿ.ಹಡಗಲಿ, ಮಹಾಂತೇಶ ಈಳಗೇರ, ಎಸ್.ವೈ. ಮಡಿವಾಳರ, ಎ.ಪಿ. ಮೇಟಿ, ಉಜ್ವಲ ಬಸರಿ ಗೋಷ್ಠಿಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.