ಸರ್ಕಾರ ಪತನಗೊಂಡ್ರೆ ಬಿಜೆಪಿ ಸರ್ಕಾರ
•ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಮತ •ಬಾಗಲಕೋಟೆ -ಕುಡಚಿ ರೈಲು ಮಾರ್ಗ ಪೂರ್ಣಗೊಳಿಸುವೆ
Team Udayavani, Jun 9, 2019, 10:06 AM IST
ಬನಹಟ್ಟಿ: ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಶಾಸಕ ಸಿದ್ದು ಸವದಿ ಅವರನ್ನು ಕಾರ್ಯಕರ್ತರು ಸನ್ಮಾನಿಸಿದರು.
ಬನಹಟ್ಟಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ. ಅದು ತಾನಾಗಿಯೇ ಬೀಳಲಿದೆ. ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಶನಿವಾರ ಸ್ಥಳೀಯ ಈಶ್ವರಲಿಂಗ ಮೈದಾನದಲ್ಲಿ ತೇರದಾಳ ಮತಕ್ಷೇತ್ರದ ಕಾರ್ಯಕರ್ತರು ಹಮ್ಮಿಕೊಂಡ ಪಿ.ಸಿ. ಗದ್ದಿಗೌಡರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದ್ಯ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಿಸಲಿದೆ ಎಂದರು.
ದೇಶದ ಪ್ರಧಾನಿ ನರೇಂದ್ರ ಮೋದಿ ಪ್ರಪಂಚದ ನಾಯಕರಾಗಿದ್ದಾರೆ. 2019ರ ಚುನಾವಣೆಯಲ್ಲಿ ದೇಶದ ಜನತೆ ಯಾವುದೆ ಜಾತಿ ಧರ್ಮದ ಆಧಾರದ ಮೇಲೆ ಮತ ಚಲಾಯಿಸಿಲ್ಲ. ದೇಶದ ಅಭಿವೃದ್ಧಿ ಕಾರ್ಯ ನೋಡಿ ಮತ ಹಾಕಿದ್ದಾರೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲು ಪೇಸ್ ಮತ್ತು ಬೂತ್‌ಮಟ್ಟದ ಕಾರ್ಯಕರ್ತರು ಶ್ರಮಿಸಬೇಕು ಎಂದು ಈಶ್ವರಪ್ಪ ಹೇಳಿದರು.
ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮುಂಬರುವ ದಿನಗಳಲ್ಲಿ ಬಾಗಲಕೋಟೆ -ಕುಡಚಿ ರೈಲು ಮಾರ್ಗವನ್ನು ಪೂರ್ಣಗೊಳಿಸುವೆ. ಈ ಭಾಗದ ನೀರಾವರಿ ಕುರಿತು ಗಮನನೀಡುತ್ತೇನೆ. ನಾನು ಪ್ರಚಾರ ರಾಜಕಾರಣಿಯಲ್ಲ. ರಾಜಕಾರಣದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಈ ಬಾರಿಯ ಚುನಾವಣೆ ನನಗೆ ಪುನರ್‌ಜನ್ಮ ನೀಡಿದೆ. ಜಿಲ್ಲೆಯ ಕಾರ್ಯಕರ್ತರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದರಿಂದ ಭಾರೀ ಅಂತರದ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.
ಶಾಸಕ ಸಿದ್ದು ಸವದಿ ಮಾತನಾಡಿ, ನಾಲ್ಕು ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಗದ್ದಿಗೌಡರ ಅವರಿಗೆ ತೇರದಾಳ ಕ್ಷೇತ್ರ ಹೆಚ್ಚು ಮತ ನೀಡಿದೆ. ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಅಭಿವೃದ್ಧಿಗಾಗಿ ಶ್ರಮಿಸಬೇಕು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರ ಸಮ್ಮಿಶ್ರ ಸರ್ಕಾರ ಜನಪ್ರಿಯ ಸರ್ಕಾರವಲ್ಲ, ಅದು ಜನದ್ರೋಹಿ ಸರ್ಕಾರವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಕಾರ್ಯಕರ್ತರು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂಸದ ಪಿ.ಸಿ.ಗದ್ದಿಗೌಡರ, ಕೆ.ಎಸ್.ಈಶ್ವರಪ್ಪ ಮತ್ತು ಶಾಸಕ ಸಿದ್ದು ಸವದಿ ಅವರನ್ನು ಸನ್ಮಾನಿಸಿದರು.
ನಗರ ಬಿಜೆಪಿ ಘಟಕದ ಅಧ್ಯಕ್ಷ ರಾಜು ಅಂಬಲಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಮಾಜಿ ವಿಧಾನ ಪರಷತ್ ಸದಸ್ಯ ಜಿ. ಎಸ್. ನ್ಯಾಮಗೌಡ, ನಾರಾಯಣಸಾ ಭಾಂಡಗೆ, ದೇವಲ ದೇಸಾಯಿ, ಮನೋಹರ ಶಿರೋಳ, ಬಸನಗೌಡ ಪಾಟೀಲ, ಸಿದ್ದಣ್ಣ ಪಾಟೀಲ, ಪ್ರಭು ಪೂಜಾರಿ, ಪುಂಡಲೀಕ ಪಾಲಭಾವಿ, ಪರಶುರಾಮ ಬಸವ್ವಗೋಳ, ಬಸವರಾಜ ತೆಗ್ಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.