ಅವ್ಯವಸ್ಥೆ ಆಗರ ತೇರದಾಳ ಸರ್ಕಾರಿ ಆಸ್ಪತ್ರೆ
Team Udayavani, Nov 24, 2019, 11:59 AM IST
ತೇರದಾಳ: ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಆಗರವಾಗಿದ್ದು, ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದೆ. ವೈದ್ಯರು, ಸಿಬ್ಬಂದಿ ಸಮಸ್ಯೆ ಎದುರಿಸುತ್ತಿದ್ದು, ಅಧಿ ಕಾರಿಗಳ ನಿರ್ಲಕ್ಷ್ಯದಿಂದ ರೋಗಿಗಳು ಪರದಾಡುವಂತಾಗಿದೆ.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಸಾಲಟ್ಟಿ, ಗೋಲಭಾವಿ, ಯರಗಟ್ಟಿ, ಹನಗಂಡಿ, ಹಳಿಂಗಳಿ, ತಮದಡ್ಡಿ ಕಾಲತಿಪ್ಪಿ ಸೇರಿದಂತೆ ಒಟ್ಟು 7 ಹಳ್ಳಿಗಳಿದ್ದು,70 ಸಾವಿರ ಜನಸಂಖ್ಯೆ ಹೊಂದಿದೆ. ಆಸ್ಪತ್ರೆಗೆ ಬರುವ ರೋಗಿಗಳು, ಗರ್ಭಿಣಿ ಹಾಗೂ ಬಾಣಂತಿಯರ ಸಂಖ್ಯೆ ಹೆಚ್ಚಿದ್ದು, ಉಪಚರಿಸಲು ವೈದ್ಯಾ ಧಿಕಾರಿಗಳಿಲ್ಲದಿರುವುದು ಸಾಕಷ್ಟು ಸಮಸ್ಯೆಗೆ ಕಾರಣವಾಗಿದೆ.
ನಗರ ವ್ಯಾಪ್ತಿಯಲ್ಲಿ ಮೂರು ಆರೋಗ್ಯ ಉಪಕೇಂದ್ರಗಳಿದ್ದರೆ, ಗ್ರಾಮೀಣ ಪ್ರದೇಶಗಳಾದ ಗೋಲಭಾವಿ, ಹನಗಂಡಿ ಹಾಗೂ ಹಳಿಂಗಳಿಯಲ್ಲಿ ಮೂರು ಉಪಕೇಂದ್ರಗಳಿದ್ದು, ಸಿಬ್ಬಂದಿ ಕೊರತೆಯಿದೆ. ಹೀಗೆ ತೇರದಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರಬೇಕಾದ ಮುಖ್ಯ ವೈದ್ಯಾ ಧಿಕಾರಿ, ಔಷಧ ವಿಭಾಗದ ಸಿಬ್ಬಂದಿ, ಸ್ಟಾಫ್ ನರ್ಸ್, ಪುರುಷ ಸಿಬ್ಬಂದಿ, ಗ್ರೂಪ್ ಡಿ. ಹುದ್ದೆಗಳಲ್ಲಿ ಬಹಳಷ್ಟು ಖಾಲಿಯಿದೆ. ಆ್ಯಂಬುಲೆನ್ಸ್ ಇದ್ದರೂ ಚಾಲಕರಿಲ್ಲ. ಹಲವಾರು ಬಾರಿ ಲಿಖೀತ ಹಾಗೂ ಮೌಖೀಕವಾಗಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸಿಬ್ಬಂದಿ ಸಮಸ್ಯೆಯಷ್ಟೇ ಅಲ್ಲದೆ ಸ್ವತ್ಛತೆ ಸಮಸ್ಯೆ ಆಗರವಾಗಿದೆ. ಆಸ್ಪತ್ರೆ ಆವರಣ ಗಲೀಜಿನಿಂದ ಕೂಡಿದೆ. ಆವರಣದ ತುಂಬ ಹಳೆಯ ಕಟ್ಟಡಗಳಿದ್ದು, ಬಳಕೆಗೆ ಯೋಗ್ಯವಾಗಿಲ್ಲ. ಆಸ್ಪತ್ರೆಗೆ ತಲುಪಲು ಉತ್ತಮ ರಸ್ತೆಯಿಲ್ಲ.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾರ್ಯವ್ಯಾಪ್ತಿ ಹೆಚ್ಚಾಗಿರುವುದರಿಂದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು. ಬಡವರಿಗೆ ಉಪಯೋಗಬೇಕಾದ ಆಸ್ಪತ್ರೆ ಮೂಲಸೌಕರ್ಯಗಳ ಕೊರತೆ ಮತ್ತು ವೈದ್ಯರು ಇಲ್ಲದೆ ಬಿಕೋ ಎನ್ನುತ್ತಿದೆ. –ಬಸವರಾಜ ಬಾಳಿಕಾಯಿ, ರಾಜು ನಧಾಪ, ಪುರಸಭೆ ಮಾಜಿ ಅಧ್ಯಕ್ಷರು.
-ಬಿ.ಟಿ. ಪತ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.