ಪ್ರವಾಹ ಬಂತು; ಕುಡಿವ ನೀರೇ ಹೋಯ್ತು!
•ಒಂದೆಡೆ ಪ್ರವಾಹ-ಇನ್ನೊಂದೆಡೆ ನೀರಿಗೆ ಹಾಹಾಕಾರ •ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ
Team Udayavani, Aug 20, 2019, 12:14 PM IST
ಅಮೀನಗಡ: ಪ್ರವಾಹ ಬಂದು ಜಿಲ್ಲೆಯ ಹಲವು ಗ್ರಾಮಗಳ ಜನರು ನೀರಿನಲ್ಲಿ ನಿಂತು ಸಂಕಷ್ಟಪಡುತ್ತಿದ್ದರೆ, ಪ್ರವಾಹ ಬಂದಿದ್ದೇ ಅಮೀನಗಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.
ಹೌದು, ಈ ಬಾರಿಯ ಪ್ರವಾಹ ಪಟ್ಟಣಕ್ಕೆ ತೀವ್ರ ಸಮಸ್ಯೆ ಮಾಡಿದೆ. ಪಟ್ಟಣಕ್ಕೆ ಯಾವ ನದಿಯ ನೀರೂ ನುಗ್ಗಿಲ್ಲ. ಜನ ನೀರಲ್ಲಿ ನಿಂತಿಲ್ಲ. ಆದರೆ, ನಿತ್ಯ ಪಟ್ಟಣಕ್ಕೆ ಬರುತ್ತಿದ್ದ ಕುಡಿಯುವ ನೀರು ಪೂರೈಕೆಯ ಪೈಪ್‌ಲೈನ್, ಮಲಪ್ರಭಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ಕಳೆದ 15 ದಿನಗಳಿಂದ ಅಮೀನಗಡಕ್ಕೆ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಟ್ಯಾಂಕರ್ ಬಂದರೆ ಸಾಕು, ಜನರು ಕೈಯಲ್ಲಿ ಕೊಡ ಹಿಡಿದು ಓಡೋಡಿ ನೀರು ಹಿಡಿಯುತ್ತಿದ್ದಾರೆ. ಮಳೆಗಾಲದಲ್ಲೂ ನೀರಿನ ಸಮಸ್ಯೆ ಅಂದರೆ, ವಿಪರ್ಯಾಸವೇ ಸರಿ ಎಂಬ ಪ್ರಜ್ಞಾವಂತರಿಂದ ಕೇಳಿ ಬರುತ್ತಿವೆ.
ಪ್ರವಾಹಕ್ಕೆ ಪೈಪ್‌ಲೈನ್ ಸಮಸ್ಯೆ: ಅಮೀನಗಡ ಪಟ್ಟಣಕ್ಕೆ ಮಲ್ಟಿ ಸಿಟಿ ಸ್ಕೀಮ್ ಯೋಜನೆಯಿಂದ ನೀರು ಪೂರೈಸಲಾಗುತ್ತಿತ್ತು. ಮಲಪ್ರಭಾ ನದಿಯ ಅಬ್ಬರದ ಪ್ರವಾಹದಿಂದ ನೀರು ಪೂರೈಸುವ ಪೈಪ್‌ಲೈನ್‌ಗೆ ಹಾನಿಯಾಗಿದೆ. ವಿದ್ಯುತ ಸಮಸ್ಯೆ ಕೂಡಾ ಉದ್ಭವಿಸಿದೆ. ಇದರಿಂದ ಪಟ್ಟಣಕ್ಕೆ ಬರುವ ನೀರು ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುದ್ಧ ಕುಡಿಯುವ ನೀರಿನ ಸ್ಥಗಿತ: ಪಟ್ಟಣದಲ್ಲಿ ಆರು ಶುದ್ದ ಕುಡಿಯುವ ನೀರಿನ ಘಟಕಗಳಲ್ಲಿ ನಾಲ್ಕು ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ.ಕೇವಲ ಎರಡು ಶುದ್ದ ಕುಡಿಯುವ ನೀರಿನ ಘಟಕಗಲ್ಲಿ ಮಾತ್ರ ನೀರು ಪೂರೈಸಲಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಮತ್ತು ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ಗೊಂದಲ: ಶುದ್ದ ಕುಡಿಯುವ ನೀರಿನ ಘಟಕದ ಕುರಿತು ಅಧಿಕಾರಿಗಳಿಗೆ ವಿವರಣೆ ಕೇಳಿದರೆ ಪಪಂ ಇಂಜಿನಿಯರ್ ವಿ.ಎಚ್. ಚವಡಿ ಆರು ಘಟಕಗಳಲ್ಲಿ ನಾಲ್ಕು ಘಟಕಗಳು ಪ್ರಾರಂಭವಾಗಿವೆ ಎರಡು ಮಾತ್ರ ಸ್ಥಗಿತಗೊಂಡಿವೆ ಎಂದು ಹೇಳಿದರು. ಈ ಕುರಿತು ಪಪಂ ಮುಖ್ಯಾಧಿಕಾರಿಗಳಿಗೆ ವಿವರಣೆ ಕೇಳಿದರೆ ಅದರ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ನಾಳೆ ಬೆಳಗ್ಗೆ ಎಲ್ಲ ಪ್ಲಾಂಟ್‌ಗಳಿಗೆ ಭೇಟಿ ನೀಡಿ ಮಾಹಿತಿ ನೀಡುವುದಾಗಿ ಹೇಳಿದರು.
ತಪ್ಪು ಮಾಹಿತಿ ನೀಡಿದ ಇಂಜಿನಿಯರ್: ಪಟ್ಟಣದ ಪಪಂ ಇಂಜಿನಿಯರ್ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕ ಚಾಲ್ತಿಯಲ್ಲಿವೆ. ಎರಡು ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ. ಆದರೆ, ವಾಸ್ತವದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕ ಮಾತ್ರ ನೀರು ಬರುತ್ತಿದ್ದು, ಉಳಿದ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರಿಲ್ಲದೇ ಬಂದ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.