ಮೊದಲ ದಿನವೇ ಪ್ರವಾಹ ಸಂಕಷ್ಟ ಅನುಭವಿಸಿದ ಕೆಪಿಸಿಸಿ ತಂಡ
Team Udayavani, Aug 10, 2019, 4:03 PM IST
ಬಾಗಲಕೋಟೆ: ಹೊಳೆಆಲೂರಿನಿಂದ ಗದಗ ಶಾಸಕ ಎಚ್.ಕೆ. ಪಾಟೀಲ ಮತ್ತು ಸನದಿ ಅವರು ಬಾಗಲಕೋಟೆಗೆ ಗೂಡ್ಸ್ ರೈಲಿನಲ್ಲಿ ಬಂದಿಳಿದರು.
ಬಾಗಲಕೋಟೆ: ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕಾಗಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ, ರಾಜ್ಯಸಭೆ ಮಾಜಿ ಸದಸ್ಯ ಪ್ರೊ| ಐ.ಜಿ ಸನದಿ ಗೂಡ್ಸ್ ರೈಲಿನಲ್ಲಿ ಬಾಗಲಕೋಟೆಗೆ ಆಗಮಿಸಿದ್ದು, ಹೊಳೆಆಲೂರು ಬಳಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಬಂದಾಗ ಅವರನ್ನು ಸಂಪರ್ಕಿಸಿ ದೂರವಾಣಿ ಯೋಗ ಕ್ಷೇಮವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಚಾರಿಸಿದರು.
ಪ್ರವಾಹ ಅಧ್ಯಯನ ಸಮಿತಿ ಅಧ್ಯಕ್ಷರಾಗಿ ಬಾಗಲಕೋಟೆ, ಬೆಳಗಾವಿ ಜಿಲ್ಲೆ ಪ್ರವಾಸ ಕೈಗೊಳ್ಳಬೇಕಾಗಿದ್ದ ಎಚ್.ಕೆ. ಪಾಟೀಲ, ಪ್ರೊ| .ಐ.ಜಿ. ಸನದಿ ಅವರು ಶುಕ್ರವಾರ ಬೆಳಗ್ಗೆ ಸ್ವಂತ ಜಿಲ್ಲೆ ಗದಗನ ಕೊಣ್ಣೂರು ಪ್ರವಾಹದಲ್ಲಿದೆ ಎಂಬುವುದು ತಿಳಿದ ತಕ್ಷಣ ಅಲ್ಲಿಗೆ ತೆರಳಿ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆ ಬಗ್ಗೆ ಪರಿಶೀಲನೆ ನಡೆಸಿ, ಹೊರಡುವ ಹೊತ್ತಿಗೆ ಬಾಗಲಕೋಟೆ ಜಿಲ್ಲೆ ಸಂಪರ್ಕದ ಮಾರ್ಗಗಳು ಎಲ್ಲವೂ ಸ್ಥಗಿತಗೊಂಡಿದ್ದವು. ಹೊಳೆಆಲೂರು ವರೆಗೆ ಬಂದು ದೋಣಿ ಮೂಲಕ ದಡ ತಲುಪುವ ಯೋಚನೆ ಸುರಕ್ಷಿತ ಅಲ್ಲ ಎಂದು ಗ್ರಾಮಸ್ಥರು ಹೇಳುತ್ತಿರುವಾಗಲೇ ಅಲ್ಲಿಂದ ಪ್ರವಾಹದ ದಾರಿಯಲ್ಲಿ ಹೊರಟ ಎಚ್.ಕೆ. ಪಾಟೀಲ ಪ್ರವಾಹದಲ್ಲಿ ಅವರು ಸಿಲುಕಿಕೊಳ್ಳಬಹುದು ಎಂಬ ಆತಂಕದಲ್ಲಿ ಕೆಲವರು ಈ ಬಗ್ಗೆ ಸಂಸದ ಪಿ.ಸಿ. ಗದ್ದಿಗೌಡರ ಅವರಿಗೆ ಮಾಹಿತಿ ನೀಡಿದರು.
ಮುಖ್ಯಮಂತ್ರಿಗಳ ಜತೆ ಪ್ರವಾಸದಲ್ಲಿದ್ದ ಗದ್ದಿಗೌಡರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ವಿಷಯ ತಿಳಿಸಿದರು. ಕೂಡಲೇ ಕರೆ ಮಾಡಿ ಅವರ ಯೋಗಕ್ಷೇಮ, ಸುರಕ್ಷತೆ ಬಗ್ಗೆ ವಿಚಾರಿಸಿದರು. ಹೊಳೆಆಲೂರಿಗೆ ಬಂದಿದ್ದ ಎಚ್.ಕೆ. ಪಾಟೀಲರು ಅಲ್ಲಿಂದ ರೈಲು ನಿಲ್ದಾಣಕ್ಕೆ ಬಂದು ಬಾಗಲಕೋಟೆ ಕಡೆಗೆ ಹೊರಟಿದ್ದ ಗೂಡ್ಸ್ ರೈಲನ್ನು ಪ್ರೊ| ಸನದಿ ಅವರೊಂದಿಗೆ ಹತ್ತಿ ಬಾಗಲಕೋಟೆ ತಲುಪಿ, ಪ್ರವಾಹ ಪೀಡಿತ ಸ್ಥಳದ ವೀಕ್ಷಣೆಗೆ ತೆರಳಿದರು. ರೈಲು ಮಾರ್ಗದಲ್ಲಿ ಪ್ರವಾಹವನ್ನು ವೀಕ್ಷಿಸುತ್ತಿದ್ದಾಗ ನೀರಿನಲ್ಲಿ ನಡೆದು ಬಂದ ಅನುಭವವಾಯಿತು. ವಿಸ್ತಾರಗೊಂಡಿದ್ದ ನೀರಿನ ಹರಿವು ಕಂಡು ಆತಂಕ ಮೂಡಿತು ಎಂದು ಸುದ್ದಿಗಾರರೊಂದಿಗೆ ಅನುಭವ ಹಂಚಿಕೊಂಡರು. ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸುರಕ್ಷತೆ ಬಗ್ಗೆ ಸ್ವತಃ ಕರೆ ಮಾಡಿ ವಿಚಾರಿಸಿದಕ್ಕೆ ಕೃತಜ್ಞತೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.