ಮುಖಂಡರ ಭರವಸೆ: ಸತ್ಯಾಗ್ರಹ ಅಂತ್ಯ
Team Udayavani, May 17, 2019, 1:33 PM IST
ಗುಳೇದಗುಡ್ಡ: ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ನೇಕಾರ ಮುಖಂಡ ಶ್ರೀಕಾಂತ ಹುನಗುಂದ ಪಟ್ಟಣದ ಸಾರ್ವಜನಿಕ ಕಟ್ಟೆಯ ಮೇಲೆ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಅಂತ್ಯಗೊಂಡಿದೆ.
ಜೆಡಿಎಸ್ ನೇಕಾರ ಘಟಕದ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಶೇಖಾ ಅವರು ಶ್ರೀಕಾಂತ ಹುನಗುಂದ ಅವರ ಮನವೊಲಿಸಿದರು. ಚಂದ್ರಕಾಂತ ಶೇಖಾ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೃಷ್ಣಪ್ಪ ಬೆಂಗಳೂರಿನಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಅವಮಾನಿಸಿದ್ದು ಉದ್ದೇಶಪೂರ್ವಕವೇನಲ್ಲ. ಕೆಲಸದ ಒತ್ತಡದಲ್ಲಿ ಅಚಾತುರ್ಯ ನಡೆದಿದೆ.ಇಂತಹ ಘಟನೆ ಮರುಕಳಿಸದಂತೆ ನಾವೂ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇವೆ. 18ರಂದು ನಾನು ಹಾಗೂ ಜಿಲ್ಲಾಧ್ಯಕ್ಷ ನವಲಿ ಹಿರೇಮಠ ಅವರು ಸೇರಿ ಶ್ರೀಕಾಂತ ಹುನಗುಂದ ಅವರನ್ನು ಬೆಂಗಳೂರಿಗೆ ಕರೆದೊಯ್ದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ ಈ ಭಾಗದ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದರು.
ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಶ್ರೀಕಾಂತ ಹುನಗುಂದ ಮಾತನಾಡಿ, ಪಕ್ಷದ ಹಿರಿಯ ಮುಖಂಡರು ಭರವಸೆ ನೀಡಿದ್ದಕ್ಕೆ ನಾನು ಒಪ್ಪಿಕೊಂಡು ಉಪವಾಸ ಸತ್ಯಾಗ್ರಹ ಹಿಂದಕ್ಕೆ ಪಡೆದಿದ್ದೇನೆ. ಭರವಸೆ ಈಡೇರದಿದ್ದರೆ ಅಂದೇ ವಿಧಾನಸೌಧದ ಎದುರಿಗೆ ಉಪವಾಸ ಸತ್ಯಾಗ್ರಹ ಮುಂದುವರಿಸುವುದಾಗಿ ಹೇಳಿದರು. ಹುಲಮನಿ ಶಂಕ್ರಪ್ಪ, ಸೋಮಶೇಖರರೆಡ್ಡಿ ಸೋಮನಾಳ, ಅನ್ವರಖಾನ ಪಠಾಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.