ಜನಸಂಖ್ಯೆ ನಿಯಂತ್ರಣ ಅವಶ್ಯ: ರಾಮಚಂದ್ರನ್
ಆರೋಗ್ಯಯುತ ಸುಖೀ ಕುಟುಂಬಕ್ಕಾಗಿ ಚಿಕ್ಕ ಸಂಸಾರ ಅಗತ್ಯ
Team Udayavani, Jul 12, 2019, 2:12 PM IST
ಬಾಗಲಕೋಟೆ: ಜನಸಂಖ್ಯಾ ದಿನ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಎಲ್ಲ ಮೂಲ ಸೌಕರ್ಯಗಳು ಜನಸಾಮಾನ್ಯರಿಗೆ ಸರಳವಾಗಿ ದೊರಕಿ ಸಾಮಾಜಿಕವಾಗಿ, ಆರ್ಥಿಕವಾಗಿ, ಮಾನಸಿಕವಾಗಿ ಪ್ರತಿಯೊಬ್ಬರು ಸದೃಡರಾಗಬೇಕಾಗಿದರೆ ಜನಸಂಖ್ಯೆ ನಿಯಂತ್ರಣ ಅವಶ್ಯ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದರು.
ನವನಗರದ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಸಂಖ್ಯೆ ಹೆಚ್ಚಳದಿಂದ ಕುಟುಂಬದಿಂದ ದೇಶದವರೆಗೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯಯುತ ಸುಖೀ ಕುಟುಂಬಕ್ಕಾಗಿ ಚಿಕ್ಕ ಸಂಸಾರ ಅಗತ್ಯವಿದೆ ಎಂದರು.
ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಹಸಿರು ನಿಶಾನೆ ತೋರುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಜಾಗೃತಿ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ನಾನಾ ಕಡೆ ಸಂಚರಿಸಿ ಕೊನೆಗೆ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು. ಜಾಥಾ ಉದ್ದಕ್ಕೂ ವಿದ್ಯಾರ್ಥಿಗಳು ಜಾಗೃತಿ ಘೋಷಣೆ ಕೂಗಿದರು.
ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಅನಂತ ದೇಸಾಯಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಪ್ರಕಾಶ ಬಿರಾದಾರ, ಕುಟುಂಬ ಕಲ್ಯಾಣಾಧಿಕಾರಿ ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ|ಜಯಶ್ರೀ ಎಮ್ಮಿ, ಡಾ|ಬಿ.ಜಿ. ಹುಬ್ಬಳ್ಳಿ, ಡಾ|ಪಿ.ಎ. ಹಿತ್ನಳ್ಳಿ, ಡಾ|ವಿಜಯ ಕಂಠಿ ಹಾಗೂ ಎಎನ್‌ಎಂ ತರಬೇತಿ ಕೇಂದ್ರದ ಪ್ರಾಚಾರ್ಯ ಸುಮಿತ್ರಾ ಪಾಲ್ಗೊಂಡಿದ್ದರು.
ನಂತರ ಆರೋಗ್ಯ ಇಲಾಖೆಯ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಪವಾಡೆಪ್ಪ ಬಿ.ಸಿ ಮಾತನಾಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ|ಬಿ.ಜಿ. ಹುಬ್ಬಳ್ಳಿ ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಜನಸಂಖ್ಯೆ ನಿಯಂತ್ರಣ ಮತ್ತು ಸ್ಥಿರತೆ ಅವಶ್ಯಕವಾಗಿದೆ. ಈ ಆಚರಣೆ ಪ್ರತಿದಿನವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.