ಶಾಲೆಯ ಆವರಣವನ್ನು ಹಚ್ಚ ಹಸಿರಾಗಿಸಿದ ಶಿಕ್ಷಕಿ ಮಂಜುಳಾ ಹೂಗಾರ
Team Udayavani, Jul 21, 2023, 6:35 PM IST
ರಬಕವಿ ಬನಹಟ್ಟಿ: ಸಮೀಪದ ಜಗದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಜುಳಾ ಹೂಗಾರ ಒಬ್ಬ ಮಾದರಿ ಶಿಕ್ಷಕಿ. ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ಸರ್ವಾಂಗೀಣ ಅಭಿವೃದ್ಧಿಯತ್ತ ಗಮನ ನೀಡುತ್ತಿದ್ದಾರೆ.
ತಾವು ಸೇವೆ ಸಲ್ಲಿಸಿದ ಸರ್ಕಾರಿ ಶಾಲೆಗಳನ್ನು ಹಚ್ಚ ಹಸಿರನ್ನಾಗಿಸಿದ್ದಾರೆ. ಸದ್ಯ ಜಗದಾಳ ಗ್ರಾಮದ ಹೊರ ವಲಯದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಹಚ್ಚ ಹಸಿರಿನಿಂದ ಕಂಗೋಳಿಸುತ್ತಿರುವುದಕ್ಕೆ ಕಾರಣಿ ವ್ಯಕ್ತಿ ಹೂಗಾರ. ಶಾಲೆಯ ಆವರಣದಲ್ಲಿ 350 ಕ್ಕೂ ಹೆಚ್ಚು ಗಿಡಗಳನ್ನು ಹಚ್ಚಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಶಾಲೆಗೆ ಬಂದು ಹಚ್ಚಿದ ಗಿಡಗಳು ಇಂದು ಫಲವನ್ನು ನೀಡುತ್ತಿವೆ.
ಶಾಲೆಯ ಆವರಣದಲ್ಲಿ ಪೇರಲ, ಮಾವು. ತೆಂಗು, ಡ್ರ‍್ಯಾಗನ್ ಫ್ರುಟ್, ಸೀತಾ ಫಲ, ಪಪ್ಪಾಯಿ, ರಾಮ ಫಲ, ಬಾಳೆ ಹಣ್ಣು, ನುಗ್ಗೆ ಕಾಯಿ ಗಿಡ, ಕರಿಬೇವು ಗಿಡಗಳನ್ನು ಬೆಳೆಸಿದ್ದಾರೆ. ಇಲ್ಲಿಯ ಹಣ್ಣುಗಳನ್ನು ಶಾಲೆಯ ಮಕ್ಕಳಿಗೆ ತಿನ್ನಲು ನೀಡುತ್ತಾರೆ. ಇನ್ನೂ ಭವಿಷ್ಯತ್ತಿನಲ್ಲಿ ಶಾಲೆ ಆರ್ಥಿಕವಾಗಿಯೂ ಪ್ರಗತಿಯಾಗಬೇಕು ಎಂಬ ನಿಟ್ಟಿನಲ್ಲಿ ಹತ್ತಾರು ಹೆಬ್ಬೇವು ಮತ್ತು ಸಾಗಾವಣಿ, ಬೇವು ಹುಣಸೆ ಹಣ್ಣು ಸೇರಿದಂತೆ ಅನೇಕ ಮರಗಳನ್ನು ಬೆಳೆಸುತ್ತಿದ್ದಾರೆ.
ಶಾಲೆಯ ಶಿಕ್ಷಕರ, ವಿದ್ಯಾರ್ಥಿಗಳ ಹುಟ್ಟು ಹಬ್ಬದ ದಿನದಂದು ಅವರ ಹೆಸರಿನಲ್ಲಿ ಸಸಿ ನೆಟ್ಟು ಗಿಡದ ಜವಾಬ್ದಾರಿಯನ್ನು ಅವರಿಗೆ ನೀಡುತ್ತಾರೆ. ಇದರಿಂದಾಗಿ ಶಾಲೆ ಹಸಿರಿನಿಂದ ಕಂಗೊಳಿಸುತ್ತಿದೆ.
ಇನ್ನೂ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಕಲಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಜ್ಞಾನಾರ್ಜನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ರಸ ಪ್ರಶ್ನೆ, ಯೋಗಾಸನ, ಪ್ರಾಣಾಯಾಮ, ಹಾಡು, ನೃತ್ಯಗಳನ್ನು ಕಲಿಸುತ್ತಿದ್ದಾರೆ.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡಿರುವ ಮಂಜುಳಾ ಹೂಗಾರ ರಾಜ್ಯ ಮಟ್ಟದ ಶಾಲಾ ಶಿಕ್ಷಕರ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಮತ್ತು ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಿನನಿತ್ಯ ಶಾಲೆಯ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಂಜುಳಾ ಹೂಗಾರ ಒಬ್ಬ ಮಾದರಿ ಶಿಕ್ಷಕಿಯಾಗಿದ್ದಾರೆ.
-ಕಿರಣ ಶ್ರೀಶೈಲ ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.