ಲಾಕ್‌ಡೌನ್ ಮುಂದುವರಿಸಲು ಆಗ್ರಹ
Team Udayavani, Apr 29, 2020, 3:19 PM IST
ಲೋಕಾಪುರ: ಲಾಕ್‌ಡೌನ್ ಮುಂದುವರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇವಲ 36 ಸಾವಿರ ಜನರ ಗಂಟಲು ಮಾದರಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 8 ಸಾವಿರ ವರದಿಗಳು ಬಾಕಿಯಿವೆ. ಇದರಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾದರೆ, ರಾಜ್ಯದ ಪರಿಸ್ಥಿತಿ ಹದಗೆಡುತ್ತದೆ. ಅದಕ್ಕಾಗಿ ಸರಕಾರ ಗಂಭೀರತೆ ಅರಿತುಕೊಂಡು ಲಾಕ್‌ಡೌನ್ ಮುಂದುವರಿಸಲು ತೀರ್ಮಾನಿಸಬೇಕು ಎಂದರು.
ಉತ್ತರ ಕರ್ನಾಟಕದ ಬೆಳಗಾವಿ ವಿಭಾಗದಲ್ಲಿ ಹೆಚ್ಚು ಸೋಂಕಿತರ ಪ್ರಕರಣ ದಾಖಲಾಗಿವೆ. ಸರಕಾರವು ತ್ವರಿತ ಗತಿಯಲ್ಲಿ ರಕ್ತ ಮತ್ತು ಗಂಟಲು ದ್ರವ ಪರೀಕ್ಷೆ ಪ್ರಯೋಗಾಲಯವನ್ನು ಬಾಗಲಕೋಟೆಯಲ್ಲಿ ಆರಂಭಿಸಲು ಸರಕಾರಕ್ಕೆ ಮನವಿ ಮಾಡಿದರು. ವಿಧಾನ ಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪುರ ಮಾತನಾಡಿ ವಿದೇಶದಿಂದ ಬಂದ ಪಿಪಿಇ ಕಿಟ್ ಗಳು ಕಳಪೆಯಾಗಿವೆ. ಇದರಿಂದ ರಾಜ್ಯದ ವೈದ್ಯರು ಭಯಪಡುವಂತಾಗಿದೆ. ರಾಜ್ಯ ಸರಕಾರ ಅವಶ್ಯಕತೆ ಅನುಗುಣವಾಗಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್ ಮತ್ತು ಹ್ಯಾಂಡ್ ಗ್ಲೌಜ್‌ಗಳನ್ನು ನೀಡಿಲ್ಲ ಎಂದು ಟೀಕಿಸಿದರು.
ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಾನಂದ ಉದಪುಡಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಾನಂದ ಉದಪುಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕಣ್ಣ ಕೊಪ್ಪದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ
MUST WATCH
ಹೊಸ ಸೇರ್ಪಡೆ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.