ಟಿಪ್ಪು ಜಯಂತಿ ವೇಳೆ ಘರ್ಷಣೆ: ಕಲ್ಲು ತೂರಾಟ, ಲಾಠಿ ಚಾರ್ಜ್
Team Udayavani, Nov 4, 2017, 9:23 AM IST
ಇಳಕಲ್ಲ(ಬಾಗಲಕೋಟೆ): ಇಲ್ಲಿನ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂಬಂಧ ಪೊಲೀಸ್ ಮತ್ತು ಸಂಘಟಕರ ಮಧ್ಯೆ ನಡೆದ ಮಾತಿನ ಚಕಮಕಿ ಗಲಭೆ ರೂಪಕ್ಕೆ ತಿರುಗಿ ಕಲ್ಲು ತೂರಾಟ ಹಾಗೂ ಲಾಠಿ ಚಾರ್ಜ್ ನಡೆಯಿತು.
ಉಸ್ಮಾನ ಗಣಿ ಹುಮನಾಬಾದ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ನ.3ರಂದು ಮಧ್ಯಾಹ್ನ ನಗರದ ಅಂಬೇಡ್ಕರ್ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಮೆರವಣಿಗೆ ಹಾಗೂ ಸಭೆಯನ್ನು ತಡೆದು, ಶಾಂತಿ ಕಾಪಾಡುವ ದೃಷ್ಟಿಯಿಂದ ಸಂಘಟನೆ ನೇತೃತ್ವ ವಹಿಸಿದ್ದ ಉಸ್ಮಾನಗಣಿ ಹುಮನಾಬಾದ, ಯುನೂಸ್ ಮುದಗಲ್ಲ, ಮಹಮ್ಮದ ಯೂಸೂಫ್ ಬಾಗವಾನ, ಜಬ್ಟಾರ ಕಲಬುರ್ಗಿ, ನಾಸೀರ್ ಕರ್ನೂಲ ಹಾಗೂ ಇತರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಇದರಿಂದ ರೊಚ್ಚಿಗೆದ್ದ ಜನರು ಗಾಂಧಿ ಚೌಕ್‌ದಲ್ಲಿ ಜಮಾಯಿಸಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಇದೇ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ಗಂಭೀರತೆ ಅರಿತ ಎಎಸ್‌ಪಿ ಲಕ್ಷ್ಮೀ ಪ್ರಸಾದ್ ಜನರನ್ನು ನಿಯಂತ್ರಿಸಲು ಲಾಠಿ ಚಾರ್ಜ್‌ಗೆ ಆದೇಶಿಸಿದರು. ಇದರಿಂದಾಗಿ ಇಬ್ಬರು ಪೊಲೀಸರಿಗೆ ಹಾಗೂ ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಇಷ್ಟಾದರೂ ಸಂಘಟಕರು ಅಂಬೇಡ್ಕರ್ ವೃತ್ತದಿಂದ ಟಿಪ್ಪು ವೃತ್ತದವರೆಗೆ ಮೆರವಣಿಗೆ ನಡೆಸಿ ವೃತ್ತಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಸಯ್ಯದ ಮುರ್ತುಜಾ ಖಾದರಿ ದರ್ಗಾದ ಬಯಲಿನಲ್ಲಿ ಸಂಘಟಕರೊಂದಿಗೆ ಪೊಲೀಸ್ ಅಧಿಕಾರಿಗಳು ಶಾಂತಿ ಕಾಪಾಡಲು ಮನವಿ ಮಾಡಿದರು. ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.