ಮುದ್ದೇಬಿಹಾಳ: ರಜೆಗೆ ಬಂದಿದ್ದ ಭಾರತೀಯ ಸೇನೆಯ ಯೋಧ ಆತ್ಮಹತ್ಯೆ
Team Udayavani, Dec 30, 2021, 9:50 PM IST
ಮುದ್ದೇಬಿಹಾಳ: ರಜೆಗೆ ಬಂದಿದ್ದ ಭಾರತೀಯ ಸೇನೆಯ ಯೋಧಯೊಬ್ಬ ಜಮೀನಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸರೂರ ಗ್ರಾಮದಲ್ಲಿ ನಡೆದಿದೆ.
ಹಣಮಂತ್ರಾಯ ಶಿವಪ್ಪ ಹೂಗಾರ (30) ಮೃತ ವ್ಯಕ್ತಿ.
ಸಂಜೆಯಾದರೂ ಮನೆಗೆ ಬರಲಿಲ್ಲ ಎಂದು ಕುಟುಂಬದ ಸದಸ್ಯರು ಹೊಲಕ್ಕೆ ನೋಡಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಹಣಮಂತ್ರಾಯ ಭಾರತೀಯ ಸೇನೆಯಲ್ಲಿ ಜನರಲ್ ಡ್ಯೂಟಿ ಸೋಲ್ಜರ್ ಆಗಿ ಕಳೆದ 10-11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ರಾಜಸ್ತಾನದ ಗಡಿಭಾಗ ಉದಯಪುರ ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ರಾಜ್ ರೈಫಲ್ಸ್ ನ 4ನೇ ಯುನಿಟ್ ನಲ್ಲಿ ಕೆಲಸ ಮಾಡುತ್ತಿದ್ದರು. 2 ದಿನಗಳ ಹಿಂದೆ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು.
ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಸೇನೆಯಲ್ಲಿನ ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಇತ್ತೀಚೆಗೆ ಆಗ ಮಾನಸಿಕವಾಗಿ ಖಿನ್ನನಾಗಿರುತ್ತಿದ್ದ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಸಿಪಿಐ ಆನಂದ ವಾಘ್ಮೋಡೆ ತಿಳಿಸಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ಶಿವಪ್ಪ ಹೂಗಾರ ಪ್ರಕರಣ ದಾಖಲಿಸಿದ್ದು ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಪಿಎಸೈ ರೇಣುಕಾ ಜಕನೂರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.