ಲಾಕ್‌ಡೌನ್‌ದಿಂದ ಸಂಕಷ್ಟ: ಹೂವು ಬೆಳೆಗಾರರಿಗೆ ಪರಿಹಾರ
Team Udayavani, May 16, 2020, 12:33 PM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಮಾರ್ಚ್ ತಿಂಗಳಿನಿಂದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೂವು ಬೆಳೆಗಾರರ ಬೆಳೆ ನಷ್ಟಕ್ಕೆ ಪರಿಹಾರವಾಗಿ ರಾಜ್ಯ ಸರಕಾರ ಗರಿಷ್ಠ 1 ಹೆಕ್ಟರ್‌ಗೆ 25ಸಾವಿರ ರೂ.ಗಳಂತೆ ಪರಿಹಾರ ಧನ ನೀಡಲು ಸರ್ಕಾರ ಮುಂದಾಗಿದೆ.
1 ಹೆಕ್ಟೇರ್‌ಗಿಂತ ಕಡಿಮೆ ವಿಸ್ತ್ರೀರ್ಣದಲ್ಲಿನ ಹೂ ಬೆಳೆಗಾರರಿಗೆ ಅದರ ಅನುಪಾತದಂತೆ 2019-20ನೇ ಸಾಲಿನಲ್ಲಿ ಕೈಗೊಳ್ಳಲಾದ ಬೆಳೆ ಸಮೀಕ್ಷೆ ಮಾಹಿತಿ ಆಧಾರದ ಮೇಲೆ ಸಹಾಯಧನ ವಿತರಿಸಲಾಗುತ್ತಿದೆ. ಹೂ ಬೆಳೆಗಾರರ ಪಟ್ಟಿಯನ್ನು ಗ್ರಾಪಂ, ರೈತ ಸಂಪರ್ಕ ಕೇಂದ್ರ, ತಾಲೂಕು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ನಾಮಫಲಕದಲ್ಲಿ ಪ್ರಕಟಿಸಲಾಗಿದೆ.
ಒಂದು ವೇಳೆ ರೈತರು ಬೆಳೆದಿರುವ ಹೂ ಬೆಳೆ 2019-20ನೇ ಸಾಲಿನಲ್ಲಿ ಹಿಂಗಾರು, ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಹೂ ಬೆಳೆನಮೂದಾಗದ ರೈತರು ಅರ್ಜಿಯನ್ನು ಆಯಾ ತಾಲೂಕಿನ ತೋಟಗಾರಿಕೆ ಕಚೇರಿಗೆ ಪಹಣಿ ಪತ್ರಿಕೆ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪಾಸ್‌ಬುಕ್ ಝೆರಾಕ್ಸ್ ಪ್ರತಿ, ಸ್ವಯಂ ದೃಢೀಕೃತ ಘೋಷಣೆ ಪತ್ರದೊಂದಿಗೆ ಮೇ 25 ರೊಳಗಾಗಿ ಸಲ್ಲಿಸುವಂತೆ ತೋಟಗಾರಿಕೆ ಉಪ ನಿರ್ದೇಶಕ ಪ್ರಭುರಾಜ ಹಿರೇಮಠ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕ ಕಚೇರಿ ಬಾದಾಮಿ (9986247138), ಬಾಗಲಕೋಟೆ (9845896489), ಬೀಳಗಿ (9886200574), ಹುನಗುಂದ (7353388515, 7019166396), ಜಮಖಂಡಿ (9900002260) ಹಾಗೂ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಮುಧೋಳ (9902906750) ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.