ತಾಲೂಕು ಹೋರಾಟಕ್ಕೆ ಉಮಾಶ್ರೀ ಬೆಂಬಲ

ಸರ್ಕಾರದ ಮೇಲೆ ಒತ್ತಡ ಹೇರಲು ಯತ್ನಿಸುವೆ

Team Udayavani, Apr 25, 2022, 3:52 PM IST

20

ಮಹಾಲಿಂಗಪುರ: ಕಳೆದ 11 ದಿನಗಳಿಂದ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ರವಿವಾರ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟದ ವೇದಿಕೆಗೆ ಭೇಟಿ ನೀಡಿ, ತಮ್ಮ ಬೆಂಬಲ ಸೂಚಿಸಿ ಮಾತನಾಡಿ, ಕಳೆದ 30 ವರ್ಷಗಳಿಂದ ನಡೆಯುತ್ತಿರುವ ತಾಲೂಕು ಹೋರಾಟ ಯಶಸ್ವಿಯಾಗಲಿ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಮೂಲಕ ತಾಲೂಕು ಕೇಂದ್ರವನ್ನಾಗಿ ಘೋಷಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕುತ್ತೇವೆ. ಮುಂದೆ ನಮ್ಮ ಸರ್ಕಾರ ಬಂದರೇ ನ್ಯಾಯ ಸಮ್ಮತವಾಗಿ ತಾಲೂಕು ಘೋಷಣೆ ಮಾಡುವ ಭರವಸೆ ನೀಡಿದರು.

ಮತಕ್ಷೇತ್ರದ ರೈತರಿಗೆ ಅನ್ಯಾಯವಾಗ ಬಾರದು: ತೇರದಾಳ ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯಾದ ಸಸಾಲಟ್ಟಿ ಏತ ನೀರಾವರಿ ಯೋಜನೆಯ ಜಾರಿಗಾಗಿ ನಮ್ಮ ಕಾಂಗ್ರೆಸ್‌ ಸರ್ಕಾರದ ಅವ ಧಿಯಲ್ಲಿ 140 ಕೋಟಿ ಮಂಜೂರಿ ಮಾಡಲಾಗಿತ್ತು.ಈಚೆಗೆ ಸಿಎಂ ಬೊಮ್ಮಾಯಿ ಅವರು ಮುಧೋಳದಲ್ಲಿ ಯೋಜನೆಗೆ ಚಾಲನೆ ನೀಡಿದ್ದಾರೆ. ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಎರಡು ಯೋಜನೆಗಳನ್ನಾಗಿ ವಿಂಗಡಿಸಿದ್ದಾರೆ. ಆದರೆ, ತೇರದಾಳ ಮತಕ್ಷೇತ್ರದ 9 ಗ್ರಾಮಗಳನ್ನು ಈ ಯೋಜನೆಯಲ್ಲಿ ಕೈ ಬಿಡಲಾಗಿದೆ ಎಂದು ರೈತರು ಆರೋಪಿಸುತ್ತಿದ್ದಾರೆ. ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿಯವರು ಸಸಾಲಟ್ಟಿ ಏತ ನೀರಾವರಿ ಯೋಜನೆಯಲ್ಲಿ ಯಾವುದೇ ಗ್ರಾಮ ಗಳಿಗೂ ಅನ್ಯಾಯವಾಗದಂತೆ ಮೂಲ ಯೋಜನೆಯಂತೆ ಕಾಮಗಾರಿ ನಡೆಸಿ, ರೈತ ಸಮುದಾಯಕ್ಕೆ ಅನುಕೂಲ ಮಾಡಿ ಕೊಡ ಬೇಕು ಎಂದು ಒತ್ತಾಯಿಸಿದರು.

ಮೊದಲಿದ್ದ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು ಶಿವಲಿಂಗೇಶ್ವರ ಏತನೀರಾವರಿ ಯೋಜನೆ ಎಂದು ಮಾರ್ಪಡಿಸಿದ್ದು ಏಕೆ ಎಂದು ಪ್ರಶ್ನಿಸಿದರು. ರೈತ ಮುಖಂಡ ಗಂಗಾಧರ ಮೇಟಿ ಮಾತನಾಡಿ, ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನೇ ಮೂಲ ಡಿಪಿಆರ್‌ನಂತೆ ಸಸಾಲಟ್ಟಿಯಿಂದ-ಸುಲ್ತಾನಪುರ ಹತ್ತಿರ ಘಟಪ್ರಭಾ ನದಿಗೆ ನೀರು ಹರಿಸಿದರೆ ಉಳಿದ 9 ಗ್ರಾಮಗಳ ನೀರಿನ ಸಮಸ್ಯೆ ಪರಿಹಾರವಾಗುತ್ತದೆ ಎಂದರು.

ಹೋರಾಟ ಸಮಿತಿಯ ಸಂಗಪ್ಪ ಹಲ್ಲಿ, ಜಯರಾಮಶೆಟ್ಟಿ, ಸಿದ್ದು ಶಿರೋಳ ಮಾತನಾ ಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವೆ ಉಮಾಶ್ರೀ ಅವರಿಗೆ ತಾಲೂಕು ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ರಬಕವಿ-ಬನಹಟ್ಟಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ, ನಗರ ಘಟಕ ಅಧ್ಯಕ್ಷ ಈಶ್ವರ ಚಮಕೇರಿ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ, ಪುರಸಭೆ ಸದಸ್ಯರಾದ ಬಲವಂತಗೌಡ ಪಾಟೀಲ, ಮುಸ್ತಾಕ ಚಿಕ್ಕೋಡಿ, ಕಾಂಗ್ರೆಸ್‌ ಮುಖಂಡರಾದ ಸುರೇಶ ಬಿದರಿ, ಹೊಳೆಪ್ಪ ಬಾಡಗಿ, ಮಹಾಲಿಂಗಪ್ಪ ಲಾತೂರ, ಅರವಿಂದ ಮಾಲಬಸರಿ, ಅರ್ಜುನ ದೊಡಮನಿ, ಬಸವರಾಜ ಮರನೂರ, ಸುರೇಶ ಜಾಧವ, ವಿಠ್ಠಲ ಸಂಶಿ, ವಿಠ್ಠಲ ಹೊಸಮನಿ, ಶಂಕರ ಸೊನ್ನದ, ಮಹಾಲಿಂಗ ಮಾಳಿ, ನಾರಾಯಣ ನಿಕ್ಕಂ ಇದ್ದರು.

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.