ನಿಂತಿದ್ದ ಕ್ಯಾಂಟರ್ ಗೆ ಅಪರಿಚಿತ ವಾಹನ ಢಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು
Team Udayavani, Jun 3, 2022, 12:02 PM IST
ಬಾಗಲಕೋಟೆ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾಡಗಂಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ರಸ್ತೆಯಲ್ಲಿ ಕ್ಯಾಂಟರ್ ಪಂಚರ್ ಹಾಕಿಸಲು ನಿಂತಿದ್ದ ವೇಳೆ ಅಪರಿಚಿತ ವಾಹನ ಢೀಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಬೀಳಗಿ ಮೂಲದ ರಜಾಕ್ ತಾಂಬೊಳೆ, ನಾಶಿರ್ ಮುಲ್ಲಾ, ಮಲ್ಲಪ್ಪ ಮಳಲಿ ಹಾಗೂ ರಾಮಸ್ವಾಮಿ ಮೃತಪಟ್ಟವರು.
ಘಟನೆ ಕುರಿತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ನನಗೆ ಬಹಳ ಆಘಾತ ಹಾಗೂ ದುಃಖವಾಯಿತು. ಈ ದುರಂತ ಸಂಭವಿಸಬಾರದಿತ್ತು. ಆಕಸ್ಮಿಕವಾಗಿ ಸಂಭವಿಸಿದೆ. ಮೃತರ ಆತ್ಮಕ್ಕೆ ದೇವರು ಶಾಂತಿ ಕೊಡಲಿ. ಮೃತರ ಕುಟುಂಬಕ್ಕೆ ಆ ದೇವರು ದುಃಖವನ್ನು ಭರಿಸುವಂತಹ ಶಕ್ತಿ ಕೊಡಲಿ ಅಂತ ಸಚಿವ ಮುರುಗೇಶ್ ನಿರಾಣಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಇದನ್ನೂ ಓದಿ:ಎಟಿಎಂಗೆ ಬರುತ್ತಿದ್ದ ವೃದ್ಧರಿಗೆ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದವನ ಬಂಧನ
ಅಲ್ಲದೇ, ಮೃತರ ಕುಟುಂಬಕ್ಕೆ ಹಾಗೂ ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರದಿಂದ ಪರಿಹಾರ ಧನ ಸಿಗುವಂತೆ ಕೆಲಸವನ್ನು ಮಾಡುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.