ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಕಾರ್ಮಿಕರ ಮುಷ್ಕರ

Team Udayavani, Mar 27, 2021, 3:32 PM IST

ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಕಾರ್ಮಿಕರ ಮುಷ್ಕರ

ತೇರದಾಳ: ಒಂದು ವರ್ಷದ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಕಳೆದ ಎಂಟುದಿನಗಳಿಂದ ಪುರಸಭೆ ನೀರು ಸರಬರಾಜುವಿಭಾಗದ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನೀರು ಸರಬರಾಜು ಸ್ಥಗಿತಗೊಂಡಿದೆ.

ಪುರಸಭೆ ಅಧಿಕಾರಿಗಳು ಸ್ಪಂದಿಸದ ಕಾರಣ ಆಡಳಿತ ಪಕ್ಷದ ಬಿಜೆಪಿ ಸದಸ್ಯರು ಸಾರ್ವಜನಿಕರೊಂದಿಗೆ ಖಾಲಿ ಕೊಡಗಳಸಮೇತ ಪುರಸಭೆಗೆ ಶುಕ್ರವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಪುರಸಭೆ ನೀರು ಸರಬರಾಜು ಕಾರ್ಮಿಕರ 12 ತಿಂಗಳ ವೇತನ ನೀಡದಕಾರಣ ಕಾರ್ಮಿಕರು ಬೇಸತ್ತು ತಮ್ಮಕೆಲಸವನ್ನು ಸ್ಥಗಿತಗೊಳಿಸಿದ್ದಾರೆ. ಆದರೆ,ಪುರಸಭೆ ಮುಖ್ಯಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ನದಿಯಲ್ಲಿನೀರಿದ್ದರೂ ಕೂಡ ಪಟ್ಟಣದಲ್ಲಿ ನೀರಿನಹಾಹಾಕಾರ ಉಂಟಾಗಿದೆ. ಇದರಿಂದಾಗಿಜನತೆ ತಮಗೆ ಹಿಡಿಶಾಪ ಹಾಕುತ್ತಿದ್ದಾರೆಎಂದು ಸದಸ್ಯರಾದ ವಿನಾಯಕ ಬಂಕಾಪುರ,ಲಕ್ಷ್ಮಣ ನಾಯಕ, ಸಚಿನ ಕೊಡತೆ, ಕಾಶಿನಾಥರಾಠೊಡ, ಸಂತೋಷ ಜಮಖಂಡಿ, ಶಂಕರ ಕುಂಬಾರ, ಅಲ್ಲಪ್ಪ ಬಾಬಗೊಂಡ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಪಟ್ಟಣದ ಕೆಲವು ವಾರ್ಡ್‌ಗಳಲ್ಲಿ ಕೊಳವೆಬಾವಿಗಳಿವೆ. ಆದರೆ, ಗುಡ್ಡದ ಪ್ರದೇಶಆಗಿರುವ ದೇವರಾಜ ನಗರದಲ್ಲಿ ಕೊಳವೆ ಬಾವಿಗಳು ಇಲ್ಲ. ಪುರಸಭೆ ನೀರಿನ ಮೇಲೆಅವಲಂಬಿತರಾಗಿದ್ದಾರೆ. ಸಾರ್ವಜನಿಕರುಆಸ್ತಿ ತೆರಿಗೆ ನೀರಿನ ಕರ ಪಾವತಿಸಿದರೂಕೂಡ ಕಾರ್ಮಿಕರಿಗೆ ವೇತನ ನೀಡದೆಕಮಿಷನ್‌ ಸಲುವಾಗಿ ಇನ್ನುಳಿದ ಬೇರೆ ಬೇರೆ ಬಿಲ್‌ ಮಾತ್ರ ತೆಗೆಯುತ್ತಿದ್ದಾರೆಂದುಆರೋಪಿಸಿದರು.

ಆಸ್ತಿ ತೆರಿಗೆಯನ್ನು ಬ್ಯಾಂಕ್‌ ಗೆ ಸಂದಾಯ ಮಾಡಿ ರಜಿಸ್ಟರ್‌ನಲ್ಲಿ ದಾಖಲೆ ಮಾಡಲು ಸಾರ್ವಜನಿಕರು ಬಂದರೆ ಯಾರುಇರುವುದಿಲ್ಲ. ಮತ್ತು ಸಮರ್ಪಕವಾಗಿನಮೂದಿಸುವುದಿಲ್ಲ. ಇದರಿಂದಸಾರ್ವಜನಿಕರು ತೆರಿಗೆ ಪಾವತಿಸಿದರು ಸಹನೋಟಿಸ್‌ ಪಡೆಯುವಂತಾಗಿದೆ ಎಂದುಪುರಸಭೆ ಅವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪುರಸಭೆಯಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ಬರೀ ಸಬೂಬು ಹೇಳಿಕೊಂಡುಇರುವ ಸಿಬ್ಬಂದಿ ಕೆಲಸ ಮಾಡದೆಕಾಲಹರಣ ಮಾಡುತ್ತಿದ್ದಾರೆ. ಮುಖ್ಯಾಧಿಕಾರಿ ಸಮರ್ಪಕವಾಗಿ ಕಚೇರಿಗೆ ಬರುತ್ತಿಲ್ಲ. ಈ ಬಗ್ಗೆ ಶಾಸಕ ಸಿದ್ದು ಸವದಿ ತಾಕೀತು ಮಾಡಿದರೂ ಕೂಡ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಶಾಸಕರ ಮತ್ತು ಸದಸ್ಯರು ಹೆಸರು ಕೆಡಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಆದ್ದರಿಂದ ಜಿಲ್ಲಾ ಧಿಕಾರಿಗಳು ತೇರದಾಳ ಪುರಸಭೆಗೆ ಭೇಟಿ ನೀಡಿ ಅಗತ್ಯ ಸಿಬ್ಬಂದಿ ಒದಗಿಸುವುದರ ಜತೆಗೆ ಈಗಿರುವ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸರಬರಾಜು ವಿಭಾಗದ ಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸನಿರ್ವಹಿಸುತ್ತಿದ್ದಾರೆ. ಮೊದಲಿನ ಗುತ್ತಿಗೆದಾರರ ಬಾಕಿ ವೇತನ ಪಾವತಿಸಲಾಗಿದ್ದು,ಸದ್ಯಕ್ಕೆ ಆರು ತಿಂಗಳ ವೇತನ ನೀಡಲುಕ್ರಮ ಕೈಗೊಳ್ಳಲಾಗುವುದು ಎಂದು ಲೆಕ್ಕಪರಿಶೋಧಕ ಜಯಗೊಂಡ ಮುಷ್ಕರ ನಿರತಕಾರ್ಮಿಕರಿಗೆ ಹಾಗೂ ಪ್ರತಿಭಟನೆನಿರತಸದಸ್ಯರಿಗೆ ಭರವಸೆ ನೀಡಿದರು. ಸದಾಶಿವಹೊಸಮನಿ, ಹನಮಂತ ರೋಡನ್ನವರ,ರಮೇಶ ಧರೆನ್ನವರ ಸೇರಿದಂತೆ ಅನೇಕ ಮುಖಂಡರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.