ಆಯುಷ್ ಚಿಕಿತ್ಸಾ ಪದ್ದತಿ ಅಳವಡಿಸಿಕೊಳ್ಳಿ: ಗದ್ದಿಗೌಡರ
Team Udayavani, Apr 28, 2020, 4:30 PM IST
ಬಾದಾಮಿ: ಮಾರಕ ಕೋವಿಡ್ 19 ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ದಿನನಿತ್ಯ ಆಯುಷ್ ಚಿಕಿತ್ಸಾ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಸೋಮವಾರ ಪಟ್ಟಣದ ತಾಪಂ ಸಭಾಭವನದಲ್ಲಿ ಜಿಲ್ಲಾ ಆಯುಷ್ ಇಲಾಖೆ, ಸರ್ಕಾರಿ ಆಯುಷ್ಯ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋವಿಡ್-19 ಸಂದರ್ಭದಲ್ಲಿ ವೈದ್ಯರು, ಶುಶ್ರೂಕಿಯರು, ಪೊಲೀಸ್, ಪೌರಕಾರ್ಮಿಕರ ಸೇವೆ ಸ್ಮರಿಸಿ ಅವರ ಸೇವೆ ಶ್ಲಾಘಿಸಿದರು.
ತಹಶೀಲ್ದಾರ್ ಸುಹಾಸ ಇಂಗಳೆ ಮಾತನಾಡಿ, ಕೋವಿಡ್ 19 ತಡೆಗಟ್ಟಲು ಆಯುಷ್ ವೈದ್ಯರ ಸೇವೆ ಸ್ಮರಿಸಿದರು. ಪುರಸಭೆ ಮುಖ್ಯಾಧಿಕಾರಿ ಜ್ಯೋತಿ ಗಿರೀಶ ಮಾತನಾಡಿ, ಕೊರೊನಾ ರೋಗ ತಡೆಗಟ್ಟಲು ಆಯುಷ್ ಪದ್ಧತಿ ಅನುಸರಿಸಬೇಕು ಎಂದು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಎಂ.ಬಿ.ಪಾಟೀಲ ಮಾತನಾಡಿ, ಆಯುಷ್ ಪದ್ಧತಿಯಲ್ಲಿ ನೈಸರ್ಗಿಕವಾಗಿ ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ಮಲ್ಲಣ್ಣ ತೋಟದ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ಪ್ರಕಾಶ ಬಣಕಾರ, ತಾಪಂ ಇಒ ಡಾ| ಪುನೀತ ಹಾಜರಿದ್ದರು. ಇದೇ ಸಂದರ್ಭದಲ್ಲಿ ಸರಕಾರದ ವತಿಯಿಂದ ಹಡಪದ ಸಮಾಜದ 91 ಕುಟುಂಬಗಳಿಗೆ ಆಹಾರದ ಕಿಟ್ ಮತ್ತು ಪುರಸಭೆ ಪೌರಕಾರ್ಮಿಕರಿಗೆ ಸಾನಿಟೈಸರ್ ಕಿಟ್, ಮಾಸ್ಕ್ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.