ಬಸವಣ್ಣನ ವಚನಗಳಿಗೆ ಕೂಡಲಸಂಗಮದೇವ ಬಳಸಿ

ವರ್ಷದ ಶರಣ ಮೇಳ ರದ್ದು ಪಡಿಸಿ ಸಾಂಕೇತಿಕವಾಗಿ ಸಮುದಾಯ ಪ್ರಾರ್ಥನೆ, ವಚನ ಪಠಣ ಮಾಡಿದ್ದೇವೆ.

Team Udayavani, Jan 15, 2022, 5:45 PM IST

ಬಸವಣ್ಣನ ವಚನಗಳಿಗೆ ಕೂಡಲಸಂಗಮದೇವ ಬಳಸಿ

ಕೂಡಲಸಂಗಮ: ಕೂಡಲಸಂಗಮ ಬಸವ ಧರ್ಮ ಪೀಠದ ಮಹಾಮನೆಯ ಮುಂಭಾಗದಲ್ಲಿ 35ನೇ ಶರಣಮೇಳದ ಅಂಗವಾಗಿ ಸಾಂಕೇತಿಕ ಧ್ವಜಾರೋಹಣವನ್ನು ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ನೆರವೇರಿಸಿದರು. ಆವರಣದಲ್ಲಿದ ಭಕ್ತರು ಸಾಮಾಜಿಕ ಅಂತರದೊಂದಿಗೆ ಧ್ವಜಾರೋಹಣದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ನೇತೃತ್ವದಲ್ಲಿ ಬಸವ ಧರ್ಮ ಪೀಠದ ಜಂಗಮಮೂರ್ತಿಗಳು ಶರಣ ಲೋಕದ ಗಣಲಿಂಗ ದರ್ಶನ ಪಡೆದು ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿಯವರ ಲಿಂಗೈಕ್ಯ ಸ್ಥಳಕ್ಕೆ ಭೇಟಿ ನೀಡಿ ಜ್ಞಾನ ಮಂಟಪದ ಬಸವಣ್ಣ ಪುತ್ಥಳಿಗೆ ನಮಿಸಿದರು.

ಬಸವ ಭಾರತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಕೊಠಡಿಯಲ್ಲಿ ಸಮುದಾಯ ಪ್ರಾರ್ಥನೆ, ವಚನ ಪಠಣ ಕಾರ್ಯಕ್ರಮ ನಡೆಯಿತು. ನಂತರ ಬಸವ ಧರ್ಮ ಮಹಾಜಗದ್ಗುರು ಪೀಠದ 30ನೇ ಪೀಠಾರೋಹಣ ಸಮಾರಂಭ ನಡೆಯಿತು. 30ನೇ ಪೀಠಾರೋಹಣ ಸ್ವೀಕರಿಸಿ ಮಾತನಾಡಿದ ಜಗದ್ಗುರು ಮಾತೆ ಗಂಗಾದೇವಿ, ಲಿಂಗಾಯತ ಧರ್ಮದ ದೇವರು ಲಿಂಗದೇವ. ಬಸವ ಧರ್ಮ ಪೀಠದ ಭಕ್ತರು ಬಸವಣ್ಣನ ವಚನಗಳಿಗೆ ವಚನಾಂಕಿತವಾಗಿ ಕೂಡಲಸಂಗಮದೇವ ಎಂದೇ ಬಳಸಬೇಕು.

ಲಿಂಗಾನಂದ ಸ್ವಾಮೀಜಿ, ಮಾತಾಜಿ ಪರಿಶ್ರಮದಿಂದ ಕಟ್ಟಿ ಬೆಳೆದ ಸಂಸ್ಥೆ ಬಸವ ಧರ್ಮ ಪೀಠ, ಅವರ ಆಶಯಗಳಿಗೆ ಯಾವುದೇ ರೀತಿಯಲ್ಲಿ ದಕ್ಕೆಯಾಗದಂತೆ ಅವರ ಇಚ್ಛೆಯಂತೆ ಸಂಸ್ಥೆಯನ್ನು ಕಟ್ಟಿ ಬೆಳೆಸುವ ಕಾರ್ಯವನ್ನು ಮಾಡುತ್ತಿರುವೆನು. ಕೋವಿಡ್‌ ಅಧಿಕ ಇದ್ದ ಪರಿಣಾಮ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಈ ವರ್ಷದ ಶರಣ ಮೇಳ ರದ್ದು ಪಡಿಸಿ ಸಾಂಕೇತಿಕವಾಗಿ ಸಮುದಾಯ ಪ್ರಾರ್ಥನೆ, ವಚನ ಪಠಣ ಮಾಡಿದ್ದೇವೆ. ಮುಂದಿನ ವರ್ಷ ನಡೆಯುವ 36ನೇ ಶರಣ ಮೇಳವನ್ನು ಸಂಭ್ರಮದಿಂದ ಆಚರಿಸೋಣ.

ಕೋವಿಡ್‌ ನಿಯಂತ್ರಣಗೊಂಡ ನಂತರ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಕುರಿತು ಚರ್ಚಿಸಿ ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಕಳೆದ ಮೂರು ವರ್ಷದಿಂದ ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷರಾಗಿ ಬಸವರಾಜ ಧನ್ನೂರ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಇನ್ನೂ ಮುಂದೆಯೂ ಅವರೇ ರಾಷ್ಟ್ರೀಯ ಅಧ್ಯಕ್ಷರಾಗಿ ರಾಷ್ಟ್ರೀಯ ಬಸವ ದಳ ಬೆಳೆಸುವ ಕಾರ್ಯ ಮಾಡುವರು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ಬಸವ ಧರ್ಮಿಯರ ಮಹಾಮನೆ ಬಸವ ಧರ್ಮ ಪೀಠವಾಗಿದೆ. ಮಾತಾಜಿಯವರು ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ಮಾಡುವುದಾಗಿ ಹೇಳಿದರು. ಸಮಾರಂಭದಲ್ಲಿ ಬಸವ ಕಲ್ಯಾಣದ ಸಿದ್ಧರಾಮೇಶ್ವರ ಸ್ವಾಮೀಜಿ, ಮಹಾರಾಷ್ಟ್ರ ಅಲ್ಲಮಗಿರಿಯ ಬಸವಕುಮಾರ ಸ್ವಾಮೀಜಿ, ಹೈದ್ರಾಬಾದ ಬಸವ ಮಂಟಪದ ಅನಿಮಿಷಾನಂದ ಸ್ವಾಮೀಜಿ, ಧಾರವಾಡ ಅಕ್ಕಮಹಾದೇವಿ ಅನುಭಾವ ಪೀಠದ ಮಾತೆ ಜ್ಞಾನೇಶ್ವರಿ, ಚಿತ್ರದುರ್ಗ ಬಸವ ಮಂಟಪದ ಮಾತೆ ದಾನೇಶ್ವರಿ, ಮಾತೆ ವಿಜಯಾಂಬಿಕೆ,
ಬೆಂಗಳೂರು ವಿಶ್ವಕಲ್ಯಾಣ ಮಿಷನ್‌ದ ಬಸವಯೋಗಿ ಸ್ವಾಮೀಜಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.