ಪ್ರತಿ ಗ್ರಾಪಂನಲ್ಲೂ ಲಸಿಕೆ ವಿತರಣೆ: ಆನಂದ

26 ಗ್ರಾಪಂನಲ್ಲಿ 20,226 ಜನಕ್ಕೆ ಲಸಿಕೆ |1.65 ಕೋಟಿ ವೆಚ್ಚ ದಲ್ಲಿ ಆಕ್ಸಿಜನ್‌ ಪೈಪ್‌ಲೈನ್‌ ನಿರ್ಮಾಣ

Team Udayavani, Jun 7, 2021, 7:12 PM IST

6-jkd-1

ಜಮಖಂಡಿ: ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ 45 ವರ್ಷದ ವಯೋಮಾನದವರಿಗೆ ಗ್ರಾಮೀಣ ಭಾಗದಲ್ಲಿ ಚುನಾವಣೆ ಬೂತ್‌ಗಳಲ್ಲಿ ಕೋವಾಕ್ಸಿನ್‌ ಮತ್ತು ಕೋವಿಶಿಲ್ಡ್‌ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ 26 ಗ್ರಾ.ಪಂ ಮತದಾನ ಮತಗಟ್ಟೆಗಳಲ್ಲಿ ಲಸಿಕೆ ನೀಡುವ ಕ್ರಿಯಾಯೋಜನೆ ಸಿದ್ಧಗೊಂಡಿದೆ. ಕಡಿಮೆ ಪ್ರಮಾಣ ಲಸಿಕೆ ಪಡೆದಿರುವ ಗ್ರಾಮಗಳಲ್ಲಿ ಲಸಿಕೆ ನೀಡುವ ಯೋಜನೆ ರೂಪಿಸಲಾಗಿದೆ. ಸೋಮವಾರ ತುಂಗಳ ಗ್ರಾಮದಲ್ಲಿ ಲಸಿಕೆ ವಿತರಣೆ ನಡೆಯಲಿದ್ದು, ಗ್ರಾಮಸ್ಥರು ಮತದಾನ ಬೂತ್‌ಗಳಲ್ಲಿ ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರದೊಂದಿಗೆ ಸಾಲಾಗಿ ನಿಂತು ಲಸಿಕೆ ಪಡೆದುಕೊಳ್ಳಬೇಕು.

ತುಂಗಳ ಗ್ರಾ.ಪಂ ವ್ಯಾಪ್ತಿಯಲ್ಲಿ ಇನ್ನೂ ಅಂದಾಜು 1800 ಜನರಿಗೆ ಲಸಿಕೆ ನೀಡಬೇಕಾಗಿದೆ. ಅಲ್ಲಿ ಮುಗಿದ ನಂತರ ಬಿದರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನರಿಗೆ ಲಸಿಕೆ ನೀಡಲಾಗುವುದು. ಲಸಿಕೆ ನೀಡುವ ಗ್ರಾಮದಲ್ಲಿ ಎರಡು ದಿನ ಮುಂಚೆ ಗ್ರಾ.ಪಂ ಸದಸ್ಯರು ಮತ್ತು ಪಿಕೆಪಿಎಸ್‌ ಆಡಳಿತ ಮಂಡಳಿ ಸದಸ್ಯರು, ಆಶಾ-ಅಂಗನವಾಡಿ ಕಾರ್ಯಕರ್ತೆಯರಿಂದ ಜಾಗೃತಿ ಜಾಥಾ ನಡೆಯಲಿದ್ದು, ಗ್ರಾಪಂನಿಂದ ಡಂಗೂರ ಸಾರಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು. ಹೊಸದಾಗಿ ಪ್ರಥಮ ಹಂತದ ಲಸಿಕೆ ಪಡೆಯಲು ಆಗಮಿಸುವ ಜನರಿಗೆ ಎರಡು ತರಹದ ಲಸಿಕೆ ಕಾರ್ಡ್‌ ವಿತರಣೆ ಮಾಡಲಾಗುವುದು. ಅದರಲ್ಲಿ ಲಸಿಕೆಯ ಎಲ್ಲ ಸಮಗ್ರ ಮಾಹಿತಿ ನಮೂದಿಸಿ ಮುಂದಿನ ಲಸಿಕೆ ಪಡೆಯುವ ದಿನಾಂಕ, ಲಸಿಕೆ ಹೆಸರು ನಮೂದಿಸಲಾಗುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಯಾವುದೇ ಗೊಂದಲ ಉಂಟಾಗುವುದಿಲ್ಲ.

ಗ್ರಾಮೀಣ ಭಾಗದಲ್ಲಿ ಲಸಿಕೆ ಹಂಚಿಕೆ ಪೂರ್ಣಗೊಂಡ ನಂತರ ನಗರದ 31 ವಾರ್ಡ್‌ಗಳಲ್ಲಿ ಮತದಾನದ ಮತಗಟ್ಟೆಗಳಲ್ಲಿ ಲಸಿಕೆ ಯೋಜನೆ ಸಿದ್ಧವಾಗಲಿದೆ. 45 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಪಡೆದ ನಂತರ ಎರಡು ದಿನ ಜ್ವರ, ಮೈಕೈ ನೋವು ಕಾಣಿಸಿಕೊಳ್ಳತ್ತದೆ ಹೊರತು ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದರು.

ವಿಜ್ಞಾನಿಗಳು, ತತnರು ಕೊರೊನಾ 3ನೇ ಅಪ್ಪಳಿಸುವ ಎಲ್ಲ ಲಕ್ಷಣಗಳಿಗೆ ಎಂದು ತಿಳಿಸಿರುವಂತೆ ಹೆಚ್ಚಿನ ವ್ಯವಸ್ಥೆ ಮಾಡಲಾಗುತ್ತಿದೆ. 65 ಲಕ್ಷ ವೆಚ್ಚದಲ್ಲಿ ನಗರದ ಸರಕಾರಿ ಆಸ್ಪತ್ರೆಯಲ್ಲಿ 100 ಬೆಡ್‌ ಗಳಿಗೆ (ಒಂದು ನಿಮಿಷದಲ್ಲಿ) ಆಕ್ಸಿಜನ್‌ ಪೂರೈಕೆ ಕಾಮಗಾರಿ ಮಂಜೂರಾದ್ದು, ಆಗಸ್ಟ್‌ ತಿಂಗಳಲ್ಲಿ ಪೂರ್ಣಗೊಳ್ಳಲಿದೆ.

ಸಾವಳಗಿ ಮತ್ತು ಕೊಣ್ಣೂರ ಹೋಬಳಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕರ ಅನುದಾನದಲ್ಲಿ 1 ಕೋಟಿ ವೆಚ್ಚದಲ್ಲಿ 100ಕ್ಕೂ ಹೆಚ್ಚು ಬೆಡ್‌ಗಳಿಗೆ ಆಕ್ಸಿಜನ್‌ ಪೈಪ್‌ಲೈನ್‌ ಮಾಡಲಾಗುವದು. ನಮ್ಮ ಗ್ರಾಮೀಣ ಜನತೆಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಇಂದಿನವರೆಗೆ 20226 ಜನರು ಲಸಿಕೆ ಪಡೆದುಕೊಳ್ಳಲಾಗಿದ್ದು, ಒಂದು ತಿಂಗಳ ಒಳಗಾಗಿ ಗ್ರಾಮೀಣ ಭಾಗದ ಜನರಿಗೆ ಲಸಿಕೆ ನೀಡಲಾಗುವದು ಎಂದರು.

ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಮಾತನಾಡಿ, ತಾಲೂಕಿನಲ್ಲಿ ಪ್ರಥಮ ಹಂತದಲ್ಲಿ 25928 ಮತ್ತು ದ್ವಿತೀಯ ಹಂತದಲ್ಲಿ 4842 ಜನರು ಕೋವಿಶೀಲ್ಡ್‌ ಲಸಿಕೆ ಪಡೆದುಕೊಂಡಿದ್ದಾರೆ. ಪ್ರಥಮ ಹಂತದಲ್ಲಿ 5973 ಮತ್ತು ದ್ವಿತೀಯ ಹಂತದಲ್ಲಿ 3736 ಜನರು ಕೋವಾಕ್ಸಿನ್‌ ಲಸಿಕೆ ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಲಸಿಕೆ ಹಂಚಿಕೆಗಾಗಿ 20 ತಂಡಗಳನ್ನು ರಚಿಸಲಾಗಿದೆ. ತಾಲೂಕಿನ 26 ಗ್ರಾಮ ಪಂಚಾಯತಗಳಲ್ಲಿ ಬೂತ್‌ಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯ ಒಂದು ತಂಡ ಒಂದು ದಿನಕ್ಕೆ 100 ಜನರಿಗೆ ಲಸಿಕೆ ನೀಡುವ ಮೂಲಕ ಒಂದು ದಿನಕ್ಕೆ ಕನಿಷ್ಠ 2 ಸಾವಿರ ಜನರಿಗೆ ಲಸಿಕೆ ನೀಡಲಿದ್ದಾರೆ ಎಂದರು.

ತಾ.ಪಂ ಅಧಿ ಕಾರಿ ಅಬೀಬ ಗದ್ಯಾಳ, ಸರಕಾರಿ ಆಸ್ಪತ್ರೆ ವೈದ್ಯಾಧಿ ಕಾರಿ ಡಾ.ವೆಂಕಟರಾಜು, ಸಿಪಿಐ ಶಿವಯ್ಯ ಮಠಪತಿ, ಉಮೇಶ ಜೋಶಿ, ಸಿದ್ದು ಮೀಸಿ, ವರ್ಧಮಾನ ನ್ಯಾಮಗೌಡ, ರವಿ ಯಡಹಳ್ಳಿ, ಬಸವರಾಜ ಹರಕಂಗಿ ಸಹಿತ ಹಲವರು ಇದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.