ಸಂಭ್ರಮದ ವೀರಭದ್ರೇಶ್ವರ ಅಗ್ಗಿ ಉತ್ಸವ
Team Udayavani, Jan 2, 2020, 11:58 AM IST
ಬಾಗಲಕೋಟೆ: ಕಾರ್ತಿಕೋತ್ಸವದ ಅಂಗವಾಗಿ ಹಳೆ ನಗರದ ಮುಚಖಂಡಿ ಕ್ರಾಸ್‌ದಲ್ಲಿರುವ ವೀರಭದ್ರೇಶ್ವರ ಅಗ್ಗಿ ಉತ್ಸವ ಸಂಭ್ರಮದಿಂದ ಜರುಗಿತು. ಕಾರ್ತಿಕೋತ್ಸವ ಹಾಗೂ ಅಗ್ಗಿ ಉತ್ಸವ ನಿಮಿತ್ತ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದ ಪೂಜಾ ಕೈಂಕರ್ಯ ನಡೆಸಲಾಯಿತು.
ಅಗ್ಗಿ ಉತ್ಸವಕ್ಕೂ ಮುನ್ನ ನಗರದ ವೀರಭದ್ರೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಹಾಗೂ ಕಳಸದ ಮೆರವಣಿಗೆ ನಡೆಯಿತು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಮಹಿಳೆಯರು ಬೆಳಗ್ಗೆಯೇ ರಂಗೋಲಿಯ ಚಿತ್ತಾರವನ್ನು ಬಿಡಿಸಿದ್ದರು.
ಗುಳೇದಗುಡ್ಡ ಮರಡಿಮಠದ ಶ್ರೀಗಳ ಸಾನ್ನಿಧ್ಯದಲ್ಲಿ ಜಾತ್ರಾ ಕಾರ್ಯಕ್ರಮಗಳು ನಡೆದವು. ಹಳೆ ನಗರ, ವಿದ್ಯಾಗಿರಿ, ನವನಗರ ಸೇರಿದಂತೆ ವಿವಿಧ ಭಾಗದಿಂದ ಆಗಮಿಸಿದ್ದ ಭಕ್ತರ ಸಮ್ಮುಖದಲ್ಲಿ ಸಂಜೆ ದೇವಸ್ಥಾನದ ಆವರಣದಲ್ಲಿ ಅಗ್ಗಿ ಉತ್ಸವ ನಡೆಯಿತು. ಪಲ್ಲಕ್ಕಿಯನ್ನು ಹೊತ್ತುಕೊಂಡವರು ಮೊದಲು ಅಗ್ಗಿ ಕುಂಡದಲ್ಲಿ ಹಾಯ್ದ ಬಳಿಕ ನಂತರ ಪುರವಂತರು, ಭಕ್ತರು ಅಗ್ಗಿ ಹಾಯ್ದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ದೇವರಲ್ಲಿ ಪ್ರಾರ್ಥಿಸಿದರು.
ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದ ಅರ್ಚಕ ಪ್ರಭುಸ್ವಾಮಿ ಸರಗಣಾಚಾರಿ,ಬಾಗಲಕೋಟೆ ವೀರಭದ್ರೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಮೀಟಿಯವರು ನೇತೃತ್ವದಲ್ಲಿ ಅಗ್ಗಿ ಉತ್ಸವ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.