ನಾಲ್ಕನೇ ದಿನಕ್ಕೆ ಕಾಲಿಟ್ಟ ಸಂತ್ರಸ್ತರ ಧರಣಿ ಸತ್ಯಾಗ್ರಹ
Team Udayavani, Dec 21, 2019, 4:10 PM IST
ಬನಹಟ್ಟಿ: ಪ್ರವಾಹದ ನಂತರವೂ ತೀವ್ರ ಸಮಸ್ಯೆ ಎದುರಿಸುತ್ತಿರುವ ಕುಟುಂಬಗಳಿಗೆ ಸರ್ಕಾರ ಯಾವುದೇ ಪರಿಹಾರ ಒದಗಿಸಿಲ್ಲ ಎಂದು ಆರೋಪಿಸಿ ರಬಕವಿ-ಬನಹಟ್ಟಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ರೈತ ಸಂಘದ ಮುಖಂಡ ಮಾಯಪ್ಪ ತುರಾದಿ ಮಾತನಾಡಿ, ಧರಣಿ ಸ್ಥಳಕ್ಕೆ ಸ್ಥಳೀಯ ತಹಶೀಲ್ದಾರ್ ಬಂದು 86 ಫಲಾನುಭವಿಗಳಲ್ಲಿ 6 ಫಲಾನುಭವಿಗಳಿಗೆ ಪರಿಹಾರ ನೀಡಲಾಗುವುದು, ಉಳಿದವರಿಗೆ ಪರಿಹಾರ ನೀಡಲ್ಲ ಎಂದಿದ್ದಾರೆ. ಉಳಿದವರು ಪ್ರವಾಹ ಸಂತ್ರಸ್ತರಲ್ಲವೇ?, ಎಲ್ಲ ಫಲಾನುಭವಿಗಳಿಗೂ ಪರಿಹಾರ ಸಿಗಬೇಕು. ಅಲ್ಲಿಯವರೆಗೆ ಸತ್ಯಾಗ್ರಹ ನಿಲ್ಲವುದಿಲ್ಲ. ಸತ್ಯಾಗ್ರಹಕ್ಕೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕು. ಇಲ್ಲಿನ ಸಂತ್ರಸ್ತರ ನೈಜ ಪರಿಸ್ಥಿತಿ ಅರಿತು ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ, ಪದ್ಮಜೀತ ನಾಡಗೌಡ ಪಾಟೀಲ, ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ಸಿದ್ದು ಉಳ್ಳಾಗಡ್ಡಿ, ರವಿ ಕೊರ್ತಿ, ಸದಾಶಿವ ಗೊಂದಕರ, ನೇಕಾರ ಸಂಘಟನೆಯ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಸೇರಿದಂತೆ ಅನೇಕರು ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.