ಹುಯಿಲೆಬ್ಬಿಸಿದ್ರು ನಡೆಯಲಿಲ್ಲ: ಶಹಾಪುರ
ಟಿಕೆಟ್ ಬೇಡಿಕೆ ಇಟ್ಟವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿರುವೆ
Team Udayavani, Mar 28, 2022, 2:41 PM IST
ಬಾಗಲಕೋಟೆ: ಮುಂಬರುವ ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಪಕ್ಷ ನನ್ನನ್ನು ಮತ್ತೂಮ್ಮೆ ಅಭ್ಯರ್ಥಿ ಎಂದು ಘೋಷಿಸಿದೆ. ಟಿಕೆಟ್ ಬೇಡಿಕೆ ಇಟ್ಟವರು ಕೆಲವೊಂದು ಹುಯಿಲೆಬ್ಬಿಸುವ ಪ್ರಯತ್ನ ಮಾಡಿದರು. ಅದು ನಡೆಯಲಿಲ್ಲ. ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವೆ ಎಂದು ವಿಧಾನಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಳೆದ ಎರಡು ಅವಧಿಗೆ ಒಟ್ಟು 12 ವರ್ಷ, ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಗೆದ್ದು ಶಿಕ್ಷಕರ ಪರವಾಗಿ ಕೆಲಸ ಮಾಡಿದ್ದೇನೆ. ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲು ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದೇನೆ. ನಮ್ಮವರೇ ಕೆಲವರು ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದರು. ಆಗ ಸ್ವಾಭಾವಿಕವಾಗಿ ಕೆಲವು ಹುಯಿಲೆಬ್ಬಿಸುವ ಪ್ರಯತ್ನ ನಡೆಯುತ್ತವೆ. ಎರಡೂ ಅವಧಿಗೆ ವಿಜಯಪುರದ ವ್ಯಕ್ತಿಗೆ ಅವಕಾಶ ದೊರೆತಿದೆ ಎಂಬ ಹುಯಿಲೆಬ್ಬಿಸುವ ಪ್ರಯತ್ನ ನಡೆಯಲಿಲ್ಲ. ಪಕ್ಷ ನನ್ನ ಕ್ರಿಯಾಶೀಲತೆ, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ನಡೆಸಿದ ಪ್ರಯತ್ನ ಗುರುತಿಸಿ ಮತ್ತೆ ಟಿಕೆಟ್ ಘೋಷಿಸಿದೆ ಎಂದರು.
ಒಂದೇ ಜಿಲ್ಲೆಗೆ ಸಿಮೀತವಾಗಿಲ್ಲ: ನಾನು ಕೇವಲ ವಿಜಯಪುರ ಜಿಲ್ಲೆಗೆ ಸಿಮೀತವಾಗಿಲ್ಲ. ವಿಜಯಪುರ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲೂ ಸಾಕಷ್ಟು ಪ್ರವಾಸ ಮಾಡಿ, ಶಿಕ್ಷಕರು, ಉಪನ್ಯಾಸಕರ ಪರವಾಗಿ ಹಲವು ಕೆಲಸ ಮಾಡಿದ್ದೇನೆ. ನಾನಂದುಕೊಂಡಂತೆ ಕೆಲವು ಕೆಲಸ ಮಾಡಲಾಗದಿದ್ದರೂ ಶಿಕ್ಷಕರು, ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ಸರ್ಕಾರ ಹೊರ ತಂದ ರಾಷ್ಟ್ರೀಯ ಶಿಕ್ಷಣ ನೀತಿ ರಚಿಸುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದೇನೆ. ಇದರಿಂದ ಸಾಕಷ್ಟು ಅನುಭವ ಕೂಡ ಪಡೆದಿದ್ದೇನೆ. ಒಂದೇ ಜಿಲ್ಲೆಗೆ ಸೀಮಿತಗೊಂಡಿದ್ದೇನೆ ಎಂಬುದು ಅಪ್ಪಟ ಸುಳ್ಳು. ಬಾಗಲಕೋಟೆ ಜಿಲ್ಲೆಗೆ ನಾನು ಎಷ್ಟು ಬಾರಿ ಬಂದಿದ್ದೇನೆ ಎಂಬುದನ್ನು ಇಲ್ಲಿಯ ಶಿಕ್ಷಕರು, ಸಂಘಟನೆಗಳು ಹಾಗೂ ಮಾಧ್ಯಮದವರು ಕಣ್ಣಾರೆ ಕಂಡಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಮಾ. 28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, 15,387 ಶಾಲೆಗಳ, 8.73 ಲಕ್ಷ ವಿದ್ಯಾರ್ಥಿಗಳು, 3444 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪ್ರತಿಯೊಬ್ಬ ಮಕ್ಕಳೂ ಯಶಸ್ವಿಯಾಗಲೆಂದು ಹಾರೈಸುವೆ. ಪರೀಕ್ಷೆ ಹೀಗೆಯೇ ನಡೆಸಬೇಕೆಂದು ಸರ್ಕಾರ, ಎಸ್‌ಓಪಿ ನೀಡಿದೆ. ಅದೇ ಪ್ರಕಾರ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಲಾಗಿದೆ. ಪರೀಕ್ಷೆ ಕೇಂದ್ರಗಳನ್ನು ಸಾನಿಟೈಜೇಶನ್ ಮಾಡಲಾಗಿದೆ ಎಂದರು.
ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂಬುದು ಮುಖ್ಯ ಘಟ್ಟ. ಪಾಲಕರಿಗೂ ಈ ಕುರಿತು ವಿಶೇಷ ಕುತೂಹಲ ಇರುತ್ತದೆ. ಹೀಗಾಗಿ ಹಿಜಾಬ್ ವಿಷಯದಲ್ಲಿ ಯಾವುದೇ ಪ್ರತಿಷ್ಠೆ ಮಾಡಿಕೊಳ್ಳದೇ ಹೈಕೋರ್ಟ್ ನಿರ್ದೇಶನ ಮತ್ತು ಸರ್ಕಾರದ ನಿಯಮಗಳ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಿದರು.
ವಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬಂತೆ ಕೆಲವರು ಆರೋಪ ಮಾಡುತ್ತಾರೆ. ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಬಿಜೆಪಿಯಿಂದ ನನ್ನನ್ನು ಮತ್ತೂಮ್ಮೆ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ನಾನು 12 ವರ್ಷ ಈ ಕ್ಷೇತ್ರ ಪ್ರತಿನಿಧಿಸಿ, ಅತ್ಯುತ್ತಮ ಅನುಭವ ಪಡೆದಿದ್ದು, ಕ್ರಿಯಾಶೀಲವಾಗಿ ಕೆಲಸ ಮಾಡಿದ ತೃಪ್ತಿ ಇದೆ. ಮುಂಬರುವ ಚುನಾವಣೆಯಲ್ಲಿ ಸಂಘಟನಾತ್ಮಕವಾಗಿ ನಾಲ್ಕು ಜಿಲ್ಲೆ, 33 ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವೆ. ಮತ್ತೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ.
-ಅರುಣ ಶಹಾಪುರ, ವಿಧಾನ ಪರಿಷತ್ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.