ಮತದಾರರ ಪಟ್ಟಿ ಪರಿಷ್ಕರಣೆ ಸಹಕಾರ ಅಗತ್ಯ: ಕಳಸದ
ನಮೂನೆ 6, 7, 8 ಹಾಗೂ 8ಎ ಮೂಲಕ ಅರ್ಜಿಗಳನ್ನು ಪಡೆಯಲಾಗಿದೆ.
Team Udayavani, Nov 19, 2021, 3:25 PM IST
ಬಾಗಲಕೋಟೆ: ಮತದಾರರ ಪಟ್ಟಿ ಪರಿಷ್ಕರಣಕ್ಕೆ ವಿವಿಧ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆಗಿರುವ ಮತದಾರರ ಪಟ್ಟಿ ವೀಕ್ಷಕ ಶಿವಯೋಗಿ ಕಳಸದ ಹೇಳಿದರು.
ಜಿಪಂ ಸಭಾ ಭವನದಲ್ಲಿಂದು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜರುಗಿದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಕಾರ್ಯಕ್ಕೆ ವಿವಿಧ ರಾಜಕೀಯ ಮುಖಂಡರ ಸಹಕಾರ ಅಗತ್ಯವಾಗಿದೆ. ಜಿಲ್ಲೆಯಲ್ಲಿ 1719 ಮತಗಟ್ಟೆಗಳು ಇದ್ದು, ರಾಜಕೀಯ ಪಕ್ಷದ ಮುಖಂಡರು ಪ್ರತಿಯೊಂದು ಮತಗಟ್ಟೆಗಳಿಗೆ ಬೂತ್ ಮಟ್ಟದ ಏಜೆಂಟರ್‌ನ್ನು ನೇಮಿಸಿ ಪಟ್ಟಿ ನೀಡುವಂತೆ ತಿಳಿಸಿದರು.
ಜನವರಿ 1, 2022ನ್ನು ಅರ್ಹತಾ ದಿನಾಂಕವನ್ನು ಆದರಿಸಿ ಈ ದಿನಾಂಕಕ್ಕೆ 18 ವರ್ಷ ಪೂರೈಸುವವರ ಹೆಸರನ್ನು ನೋಂದಾವಣಿ, ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಮತ್ತೂಂದು ಮತಕ್ಷೇತ್ರಕ್ಕೆ ವರ್ಗಾವಣೆ, ಅವಕಾಶ ಕಲ್ಪಿಸಿ ನಮೂನೆ 6, 7, 8 ಹಾಗೂ 8ಎ ಮೂಲಕ ಅರ್ಜಿಗಳನ್ನು ಪಡೆಯಲಾಗಿದೆ. ಡಿ. 8ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಪಡೆಯಲಾಗುತ್ತಿದೆ.
ಅವುಗಳ ಪರಿಶೀಲನೆ ಡಿ. 27ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಜನವರಿ 13, 2022ರಂದು ಪ್ರಕಟಿಸಲಾಗುತ್ತಿದೆ ಎಂದರು. ಹಕ್ಕು ಮತ್ತು ಆಕ್ಷೇಪಣೆ ಹಂತದಲ್ಲಿ ಯಾವುದೇ ತರಹದ ನ್ಯೂನ್ಯತೆಗಳ ಬಗ್ಗೆ ಗಮನಕ್ಕೆ ಬಂದಲ್ಲಿ ಸಂಬಂಧಿಸಿದ ಆಯಾ ತಾಲೂಕಿನ ತಹಶೀಲ್ದಾರ್ ಗೆ ಆಕ್ಷೇಪಣೆ ಸಲ್ಲಿಸಲು ತಿಳಿಸಿದರು. ಪ್ರತಿ ಹಂತದಲ್ಲಿ ರ್‍ಯಾಂಡಮ್ ಆಗಿ ಪರಿಶೀಲನೆ ಮಾಡುವುದಾಗಿ ತಿಳಿಸಿದ ಅವರು, ಈ ಕಾರ್ಯಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಲಹೆಗಳನ್ನು ಪಡೆಯಲಾಯಿತು. ಹೊಸದಾಗಿ ಸೇರ್ಪಡೆಗೊಂಡು ಒಂದು ಕುಟುಂಬದ ಸದಸ್ಯರ ಹೆಸರನ್ನು ಒಂದೇ ಕಡೆ ಬರುವಂತೆ ಆಗಬೇಕು. ಒಂದು ಮತದಾರರ ಹೆಸರು ವಿವಿಧ ಮತಗಟ್ಟೆಗಳಲ್ಲಿ ಬರುತ್ತಿದ್ದು, ಅವುಗಳ ಬಗ್ಗೆ ಗಮನ ಹರಿಸಿ ತೆಗೆದುಹಾಕಲು ಕ್ರಮ ವಹಿಸಲು ಸಭೆಗೆ ತಿಳಿಸಿದರು. ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.