ಭರವಸೆಗಳ ಈಡೇರಿಸಿ ನುಡಿದಂತೆ ನಡೆಯಿರಿ; ಪ್ರಧಾನಿ ಮೋದಿಗೆ ರಾಹುಲ್‌

Team Udayavani, Feb 26, 2018, 6:00 AM IST

180225kpn49.jpg

 ಬಾಗಲಕೋಟೆ: ಮುಂಬೈ ಕರ್ನಾಟಕ ಭಾಗದಲ್ಲಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆಯಲ್ಲಿ ತೊಡಗಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಎರಡನೇ ದಿನವೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ಮುಂದುವರಿಸಿದ್ದು, ಮತ್ತೆ ಬವವಣ್ಣನ ವಚನ ಪ್ರಸ್ತಾಪಿಸುವ ಮೂಲಕ ನುಡಿದಂತೆ ನಡೆಯಿರಿ ಎಂದು ಒತ್ತಾಯಿಸಿದರು.

ಪ್ರಧಾನಿ ಮೋದಿ ಅವರು ರಾಜ್ಯ ಸರ್ಕಾರದ ಬಗ್ಗೆ ಅನಗತ್ಯ ಟೀಕೆ ಮಾಡುವ ಬದಲು ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಭಾನುವಾರ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮುಳವಾಡ, ಬಾಗಲಕೋಟೆ ಜಿÇÉೆಯ ಬೀಳಗಿ, ಮುಧೋಳ್‌ನಲ್ಲಿ ಸಾರ್ವಜನಿಕ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ಪ್ರಧಾನಿ ವಿರುದ್ಧ ವಾಗ್ಧಾಳಿ ಮುಂದುವರಿಸಿದರು.

ಕರ್ನಾಟಕಕ್ಕೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ಬ್ರಷ್ಟಾಚಾರದ ಬಗ್ಗೆ ಅನಗತ್ಯ ಟೀಕೆ ಮಾಡುತ್ತಾರೆ. ಭ್ರಷ್ಟಾಚಾರ ಮಾಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಜೈಲಿಗೆ ಹೋಗಿ ಬಂದಿರುವ ನಾಲ್ಕು ಮಂತ್ರಿಗಳು ಅವರ ಪಕ್ಕದಲ್ಲೇ ಕುಳಿತಿದ್ದರೂ ಆ ಬಗ್ಗೆ ಪ್ರಸ್ತಾಪಿಸುವುದಿಲ್ಲ. 50 ಸಾವಿರ ರೂಪಾಯಿಯನ್ನು ಮೂರೇ ತಿಂಗಳಲ್ಲಿ 3 ಕೋಟಿ ರೂ. ಮಾಡಿಕೊಳ್ಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಗ್ಗೆಯೂ ಅವರು ಮಾತನಾಡುವುದಿಲ್ಲ ಎಂದು ಕಿಡಿ ಕಾರಿದರು.

ಭ್ರಷ್ಟಾಚಾರ ತಡೆಯಲು ನೋಟ್‌ ಬ್ಯಾನ್‌ ಮಾಡಿದೆ ಎಂದು ಹೇಳುವ ಪ್ರಧಾನಿ, ನಾನು ಈ ದೇಶದ ಪ್ರಧಾನಿಯಲ್ಲ. ಪ್ರಧಾನ ಸೇವಕ, ಪ್ರಧಾನ ಚೌಕಿದಾರ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಸಾಮಾನ್ಯ ಜನರು ಬ್ಯಾಂಕ್‌ಗಳಲ್ಲಿ ಇಟ್ಟಿರುವ ಹಣವನ್ನು ನೀರವ್‌ ಮೋದಿ ಕೊಳ್ಳೆ ಹೊಡೆದು ವಿದೇಶಕ್ಕೆ ಪರಾರಿಯಾದರೂ ಈ ಪ್ರಧಾನ ಚೌಕಿದಾರ ಏನೂ ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.

900 ವರ್ಷಗಳ ಹಿಂದೆ ಅನುಭವ ಮಂಟಪವೇ ಕರ್ನಾಟಕದಲ್ಲಿ ಸಂಸತ್‌ ಆಗಿತ್ತು. ದೇಶದ ಸಂಸತ್ತಿಗೆ ಈ ಅನುಭವ ಮಂಟಪವೇ ಪ್ರೇರಣೆ. ಸಂಸತ್‌ ಕಟ್ಟಡ ನಿರ್ಮಾಣವಾಗಿ ಹತ್ತಾರು ವರ್ಷಗಳು ಕಳೆದರೂ ಅಲ್ಲಿ ಬಸವಣ್ಣನ ಚಿಂತನೆಗಳು ಜೀವಂತವಾಗಿವೆ. ಅದೇ ರೀತಿ ಸಾವಿರಾರು ವರ್ಷಗಳ ಇತಿಹಾಸವಿರುವ ಬಸವಣ್ಣನವರ ಆಶಯಗಳು ಕಾಂಗ್ರೆಸ್‌ ಪಕ್ಷದ ಜೀವಾಳವಾಗಿದೆ ಎಂದು ಅವರು ಹೇಳಿದರು.

ಕಾಯಕವೇ ಕೈಲಾಸ ಎಂದು ಬಸವಣ್ಣ ನುಡಿದಿದ್ದಾರೆ. ಈ ನಿಟ್ಟಿನಲ್ಲಿ 60 ವರ್ಷಗಳ ಆಡಳಿತಾವಧಿಯಲ್ಲಿ ಕಾಂಗ್ರೆಸ್‌ ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಅದೇ ರೀತಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಡವರ ಹಸಿವು ನೀಗಿಸಲು, ರೈತರಿಗಾಗಿ, ಕೂಲಿ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ರೈತರಿಗೆ ಸರ್ವಸ್ವವಾಗಿರುವ ನೀರು ಒದಗಿಸಲು 55 ಸಾವಿರ ಕೋಟಿ ರೂ. ಖರ್ಚು ಮಾಡಿದೆ. ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ  ಐದು ವರ್ಷದಲ್ಲಿ ಖರ್ಚು ಮಾಡಿದ ಮೂರು ಪಟ್ಟು ನಮ್ಮ ಸರ್ಕಾರ ಖರ್ಚು ಮಾಡಿದೆ ಎಂದರು.

ಸಾಲ ಮನ್ನಾ ಮಾಡಿ
ಇತ್ತೀಚಿಗೆ ನಾನು ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ಭೇಟಿ ನೀಡಿದ್ದಾಗ ಸಾಲ ಮನ್ನಾ ಮಾಡುವ ಸಂಬಂಧ ಪ್ರಸ್ತಾಪ ಮಾಡಿ¨ªೆ. ಅನಂತರ ನಾನು ಎಂದೂ ಅವರ ಕಚೇರಿಗೆ ತೆರಳಿಲ್ಲ. ಅವರನ್ನು ಭೇಟಿ ಮಾಡಿ ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದರೆ ಮಾತನಾಡುವುದಿಲ್ಲ. ಆದರೆ, ಬಂಡವಾಳಶಾಹಿ, ಕಾರ್ಪೋರೇಟ… ವ್ಯಕ್ತಿಗಳು, ಉದ್ಯಮಿಗಳಿಗೆ ಸಾವಿರಾರು ಕೋಟಿ ರೂ. ಸಾಲ ನೀಡುತ್ತಾರೆ ಮತ್ತು ಮನ್ನಾ ಮಾಡುತ್ತಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಒಂದೇ ಮಾತಿಗೆ ರಾಜ್ಯದ ರೈತರ ಸಾಲ ಮನ್ನಾ ಮಾಡಿದರು. ಹೀಗಾಗಿ, ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಾಗ ನುಡಿದಂತೆ ನಡೆಯಿರಿ ಎಂದು ಕೇಳುವಂತೆ ರಾಹುಲ್‌ಗಾಂಧಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾಯಕವೇ ಕೈಲಾಸ
ನಾವು ಯಾವುದೇ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಏನು ಹೇಳುತ್ತೇವೆ ಅದನ್ನೇ ಮಾಡುತ್ತೇವೆ. ಚುನಾವಣೆ ಬರುತ್ತಿದೆ. ನೀವು ನಿಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸಂದರ್ಭ ಬಂದಿದೆ. ಕಾಂಗ್ರೆಸ್‌ ಎಲ್ಲ ವರ್ಗದವರ ಏಳಿಗೆಗೆ ಶ್ರಮಿಸುತ್ತಿದೆ. ಕಾಯಕವೇ ಕೈಲಾಸ ಎಂದು ಕೆಲಸ ಮಾಡುತ್ತಿದೆ. ಆದರೆ, ಬಿಜೆಪಿ ಕೇವಲ ಶ್ರೀಮಂತರು ಮತ್ತು ಉದ್ಯಮಪತಿಗಳ ಪರವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದ್ದರಿಂದ ಕಾಂಗ್ರೆಸ್‌ ಪರ ಮತಹಾಕಿ ಎಂದು ಕೋರಿದರು.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.