ನಿರುಪಯುಕ್ತ ಜಾಗ ಈಗ ಉದ್ಯಾನ
ಹಸಿರು ಕಂಗೊಳಿಸುವ ಉದ್ಯಾನ ನಿರ್ಮಾಣ•ಖಾಸಗಿ ವಾಹನಗಳ ಮಾಲೀಕರ ಕಾರ್ಯ
Team Udayavani, May 15, 2019, 11:18 AM IST
ತೇರದಾಳ: ಪಟ್ಟಣದ ಬಸ್ ನಿಲ್ದಾಣ ಬಳಿ ಖಾಸಗಿ ವಾಹನಗಳ ಚಾಲಕರು ಹಾಗೂ ಮಾಲೀಕರು ನಿರ್ಮಿಸಿದ ಉದ್ಯಾನವನ.
ತೇರದಾಳ: ಪಟ್ಟಣದ ಬಸ್ ನಿಲ್ದಾಣ ಬಳಿಯ ಮಹಾತ್ಮ ಗಾಂಧಿ ಕ್ರೀಡಾಂಗಣದ ಕಾಂಪೌಂಡ್‌ಗೆ ಹೊಂದಿಕೊಂಡಿದ್ದ ನಿರುಪಯುಕ್ತ ಜಾಗ ಈಗ ಉದ್ಯಾನವನವಾಗಿ ಮಾರ್ಪಟ್ಟಿದೆ.
ಖಾಸಗಿ ವಾಹನಗಳ ಚಾಲಕರು ಉದ್ಯಾನವನ ನಿರ್ಮಿಸಿ ಸಾಮಾಜಿಕ ಕಾರ್ಯ ಕೈಗೊಂಡಿದ್ದಾರೆ. ಮೂತ್ರವಿಸರ್ಜನೆ, ಸತ್ತ ಪ್ರಾಣಿ ಸೇರಿದಂತೆ ಗಲೀಜು ತಂದು ಹಾಕಿ ಜಾಗವನ್ನು ದುರುಪಯೋಗ ಪಡಿಸಿಕೊಳ್ಳಲಾಗಿತ್ತು. ಇದನ್ನು ಕಂಡ ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘದವರು ಪರಿಸರ ಸ್ವಚ್ಛಗೊಳಿಸುವ ಕಾರ್ಯ ಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ತಮ್ಮ ಸ್ವಂತ ಹಣದಲ್ಲಿಯೇ ಸುಮಾರು ಅರ್ಧ ಕಿ.ಮೀ ದೂರದವರೆಗೆ ಪೈಪ್‌ಲೈನ್ ಅಳವಡಿಸಿ ನೀರಿನ ಅನುಕೂಲ ಮಾಡಿಕೊಂಡ ಚಾಲಕರು ಹಾಗೂ ಮಾಲೀಕರು ಶ್ರಮದಾನದಿಂದ ಸ್ಥಳ ಶುಚಿಗೊಳಿಸಿದರು. ಸಸಿ ನೆಡಲು ಗುಂಡಿತೋಡಿ, ಗೊಬ್ಬರ ಹಾಕಿ ಭೂಮಿ ಸಿದ್ಧಪಡಿಸಿಕೊಂಡರು. ಗೋವಾ, ಬೆಂಗಳೂರು, ಸಾಂಗಲಿ ಸೇರಿದಂತೆ ವಿವಿಧ ಕಡೆಗಳಿಂದ ಮಾವು, ತೆಂಗು, ತುಳಸಿ, ಬೇವು, ಬದಾಮ, ಸಾಗವಾನಿ, ವಿವಿಧ ತೆರನಾದ ಹೂ-ಬಳ್ಳಿ ಸೇರಿದಂತೆ ಅನೇಕ ಸಸಿಗಳನ್ನು ತಂದು ನಾಟಿ ಮಾಡಿದ್ದಾರೆ. ದಿನಂಪ್ರತಿ ಎಲ್ಲರೂ ಸರದಿಯಂತೆ ನೀರುಣಿಸಿದ್ದಾರೆ. ಬೇಸಿಗೆಯಾಗಿದ್ದರಿಂದ ಕೆರೆಯಿಂದ ನೀರು ತಂದು ಹಾಕಿ, ಸಸಿಗಳ ರಕ್ಷಣೆಗೆ ಸ್ವಂತ ಖರ್ಚಿನಿಂದ ತಂತಿ ಜಾಳಿಗೆ ಅಳವಡಿಸಿ ಪೋಷಣೆ ಮಾಡುತ್ತಿದ್ದಾರೆ. ಆಗಾಗ್ಗೆ ಕಳೆ-ಕಸ ತೆಗೆದು ಸ್ವಚ್ಛ ಕಾರ್ಯ ಕೈಗೊಂಡಿದ್ದಾರೆ. ಅನೇಕ ಹೂ, ಗಿಡ, ಬಳ್ಳಿಗಳು ಬೆಳೆದು ನೋಡುಗರನ್ನು ಕೈಬೀಸಿ ಕರೆಯುತ್ತಿವೆ. ಕಲ್ಲಿನ ಆಸನ ನಿರ್ಮಿಸಿದ್ದು, ಬಿಸಿಲಿನ ತಾಪಕ್ಕೆ ಬಸವಳಿದವರಿಗೆ ವಿಶ್ರಾಂತಿಗೆ ಆಹ್ವಾನಿಸುವ ಸುಂದರ ತಾಣವಾಗಿದೆ.
ಚಾಲಕರು ಹಾಗೂ ಮಾಲೀಕರು ಪುರಸಭೆಯವರಿಂದ ನಲ್ಲಿ ಜೋಡಣೆ ಪಡೆದು ವಿವಿಧ ಕಡೆ ಹೋಗಿ ಅನೇಕ ಸಸಿಗಳನ್ನು ಹಾಗೂ ಮಾರ್ಗದರ್ಶನ ಪಡೆದು ಕೈ ದೋಟ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್‌ಕರ್
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.