ನಿಮ್ಮ ಕ್ಷೇತ್ರದಲ್ಲೇ ನೀರಿನ ಘಟಕ ಬಂದ್ ಆಗೈತ್ರಿ!
Team Udayavani, May 21, 2020, 9:02 AM IST
ಬಾಗಲಕೋಟೆ: ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಸಮಸ್ಯೆ ಆಲಿಸಲು ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಬುಧವಾರ ನಡೆಸಿದ ಪೋನ್‌ಇನ್ ಕಾರ್ಯಕ್ರಮದಲ್ಲಿ ತಮ್ಮ ಸ್ವಕ್ಷೇತ್ರವಾದ ಐಹೊಳೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿರುವ ಕುರಿತು ವ್ಯಕ್ತಿಯೊಬ್ಬರು ಗಮನ ಸೆಳೆದರು.
ಕುಡಿಯುವ ನೀರಿನ ಸಂಬಂಧಿಸಿದ ಅಧಿಕಾರಗಳೊಂದಿಗೆ ಬಾಗಲಕೋಟೆ ಜಿಪಂ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಆಗುತ್ತಿರುವ ಕುಡಿಯುವ ನೀರಿನ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಪೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಒಟ್ಟು 20 ಕರೆಗಳು ಬಂದಿದ್ದು, ಎಲ್ಲ ಕರೆಗಳನ್ನು ಆಲಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಜಿಪಂ ಅಧ್ಯಕ್ಷರು ತಿಳಿಸಿದರು.
ಹುನಗುಂದ ತಾಲೂಕಿನ ಐಹೊಳೆ ಮತ್ತು ಮಂಗಳಗುಡ್ಡ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿಯಾಗದೆ ತೊಂದರೆ ಆಗುತ್ತಿರುವುದಾಗಿ ತಿಳಿಸಿದರೆ, ಇತ್ತ ಜಮಖಂಡಿ ತಾಲೂಕಿನ ಹುಲ್ಯಾಳ ಮತ್ತು ಕಲ್ಲಬೀಳಗಿಯಲ್ಲಿ 4-5 ದಿನಕ್ಕೊಮ್ಮೆ ನೀರು ಬಿಡುತ್ತಿರುವುದಾಗಿ ತಿಳಿಸಿದರು.
ಇವೆಲ್ಲ ಸಮಸ್ಯೆಗಳನ್ನು ಸರಿಪಡಿಸುವಂತೆ ಫೋನ್‌ಇನ್ ಕಾರ್ಯಕ್ರಮದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಪೋನ್ ಇನ್ ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಆರ್.ಎನ್. ಪುರೋಹಿತ, ಮುಧೋಳ ತಾಲೂಕಿನ ಇಒ ಕೆ.ಜೆ. ಘೋರ್ಪಡೆ, ಬೀಳಗಿ ಸಬ್‌ಡಿವಿಜನ್ ಎಇಇ ವಿ.ಎಸ್. ರಾಠೊಡ, ಆರ್.ಡಬ್ಲೂ.ಎಸ್‌ನ ಎಇ ಪಿ.ಎಚ್. ಮ್ಯಾಗಿನಮನಿ, ಹುನಗುಂದ ತಾಲೂಕಿನ ಇಒ ಮ್ಯಾಗೇರಿ, ಬಾಗಲಕೋಟೆ ತಾ.ಪಂ ಇಒ ಎನ್.ವೈ. ಬಸರಿಗಿಡದ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.