ಜಮಖಂಡಿ ಫಲಿತಾಂಶದ ಬಳಿಕ ಏನಾಗಲಿದೆ? ಶೆಟ್ಟರ್ ಹೇಳಿದ ಭವಿಷ್ಯ
Team Udayavani, Oct 29, 2018, 4:13 PM IST
ಬಾಗಲಕೋಟೆ:ಜಮಖಂಡಿ ವಿಧಾನಸಭಾ ಉಪಚುನಾವಣೆಯ ಫಲಿತಾಂಶದಿಂದ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ನವೆಂಬರ್ 6 ಸಮ್ಮಿಶ್ರ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದಾರೆ.
ಸೋಮವಾರ ಜಮಖಂಡಿಯ ತುಬಚಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡುತ್ತ, ಬಿಜೆಪಿಯ 105 ಸಂಖ್ಯೆ 113ಕ್ಕೆ ಹೇಗೆ ಏರುತ್ತದೆ ಎಂಬುದನ್ನು ಕಾದು ನೋಡಿ ಎಂದರು.
ಜಮಖಂಡಿಯ ಫಲಿತಾಂಶದಿಂದ ಬಿಜೆಪಿ ಒಟ್ಟು ಸ್ಥಾನ 104ರಿಂದ 105ಕ್ಕೆ ಏರಲಿದೆ. ಒಂದು ಸ್ಥಾನದಿಂದ ರಾಜಕೀಯವಾಗಿ ಮಹತ್ವದ ಬದಲಾವಣೆ ಆಗಲಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕಾರಕ್ಕೆ ಏರಬೇಕೆಂಬ ಮಹತ್ವಕಾಂಕ್ಷೆ ಇಲ್ಲ, ಆಪರೇಶನ್ ಕಮಲ ಕೂಡಾ ಮಾಡಲ್ಲ ಎಂದಿರುವ ಅವರು ಉಪಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.