ಕೆಬಿಜೆಎನ್ನೆಲ್‌ ಎಂಡಿ ಕಚೇರಿ ಸ್ಥಳಾಂತರ ಎಂದು?


Team Udayavani, Feb 19, 2020, 11:34 AM IST

bk-tdy-1

ಸಾಂಧರ್ಬಿಕ ಚಿತ್ರ

ಆಲಮಟ್ಟಿ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕೆಲ ಕಚೇರಿಗಳನ್ನು ಅತೀ ಹಿಂದುಳಿದ ಜಿಲ್ಲೆಗಳಿಗೆ ವರ್ಗಾಯಿಸಿದ್ದರೂ ಕೂಡ ಅಧಿಕಾರಿಗಳು ಲಾಬಿಯಿಂದ ತಾವಿರುವ ಸ್ಥಳದಲ್ಲೇ ಕಾರ್ಯ ಮುಂದುವರಿಸಿದ್ದು, ಇದರಿಂದ ಅಭಿವೃದ್ಧಿ ಆಗುವುದಾದರೂ ಯಾವಾಗ ಎಂದು ಜನರು ಆಸೆಗಣ್ಣಿನಿಂದ ನೋಡುವಂತಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ.ಭಾಸ್ಕರರಾವ್‌ 2020 ಫೆ.2ರಂದು ಆದೇಶ ಹೊರಡಿಸಿ ವರ್ಗಾವಣೆಯಾಗಿರುವ ಕಚೇರಿಗಳು 2020 ಫೆ.17ರೊಳಗೆ ಸ್ಥಳಾಂತರಿಸುವಂತೆ ಹಾಗೂ ಪಾಲನೆಯಾದ ಕ್ರಮ ಕುರಿತು ತಿಳಿಸಲು ಸೂಚಿಸಿದ್ದರು. ಆದರೆ ಸರ್ಕಾರದ ಆದೇಶದಂತೆ ಕಚೇರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ.

ಕಚೇರಿ ಸ್ಥಳಾಂತರಿಸಲು ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು 2018ರಲ್ಲಿ ಕೆಲ ಕಚೇರಿಗಳನ್ನು ಹಿಂದುಳಿದ ಪ್ರದೇಶಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ನಂತರ 2019 ಸೆ.18ರಂದು ಸಚಿವ ಸಂಪುಟದಲ್ಲಿ ನಿರ್ಣಯಿಸಿದಂತೆ ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಯನ್ನು ತೀವ್ರಗೊಳಿಸಲು ಹಾಗೂ ಆ ಭಾಗದ ನಾಗರಿಕರಿಗೆ ರಾಜ್ಯಾಡಳಿತ ಹತ್ತಿರವಾಗಲು ರಾಜ್ಯ ಸರ್ಕಾರದ ಕಚೇರಿಗಳಾಗಿರುವ ಆಲಮಟ್ಟಿಗೆ ಕೃಷ್ಣಾ ಭಾಗ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕರ ಕಚೇರಿ, ದಾವಣಗೆರೆಗೆ ಕರ್ನಾಟಕ ನೀರಾವರಿ ನಿಗಮ, ಬೆಳಗಾವಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಸಕ್ಕರೆ ನಿರ್ದೇಶಕ ಕಚೇರಿ, ಹುಬ್ಬಳ್ಳಿಗೆ ನಗರಾಭಿವೃದ್ಧಿ ಇಲಾಖೆ, ಹಂಪಿಗೆ ಪ್ರವಾಸೋದ್ಯಮ ಇಲಾಖೆ, ಧಾರವಾಡಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಜಾಗೃತ ವಿಭಾಗ) ಮತ್ತು ಕಾನೂನು ಇಲಾಖೆ, ಕಲಬುರಗಿ ಹಾಗೂ ಬೆಳಗಾವಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯನ್ನು ಸ್ಥಳಾಂತರಿಸಲು ಆದೇಶಿಸಲಾಗಿತ್ತು.

ಅದರನ್ವಯ ಕಚೇರಿಗಳು ವರ್ಗಾವಣೆಗೊಂಡ ಸ್ಥಳಕ್ಕೆ ಬಾರದೇ ಇರುವುದರಿಂದ ಸರ್ಕಾರ ಮತ್ತೆ ಆದೇಶ ಹೊರಡಿಸಲಾಗಿದ್ದು, ಹಿರಿಯ ಅಧಿಕಾರಿಗಳು ಈಗಲಾದರೂ ಸರ್ಕಾರದ ಆದೇಶ ಪಾಲನೆ ಮಾಡಿ ವರ್ಗಾವಣೆಗೊಂಡಿರುವ ಕಚೇರಿಗಳಿಗೆ ತೆರಳಿ ಕಾರ್ಯ ನಿರ್ವಹಿಸಬೇಕಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಯ ಹಿತದೃಷ್ಟಿಯಿಂದ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಘೋಷಿಸಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು 10-1-2019ರಂದು ಆದೇಶಿಸಲಾಗಿತ್ತು. ಸಿಎಂ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿರುವ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ಕೃಷ್ಣಾಭಾಗ್ಯ ಜಲನಿಗಮದ ಆಡಳಿತ ಕಚೇರಿಯನ್ನು ನೋಂದಾಯಿತ ಆಡಳಿತ ಕಚೇರಿ ಆಲಮಟ್ಟಿಗೆ ಹಾಗೂ ಕರ್ನಾಟಕ ನೀರಾವರಿ ನಿಗಮವನ್ನು ದಾವಣಗೆರೆಗೆ ಸ್ಥಳಾಂತರಿಸಿದ್ದರು.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ವಿದ್ಯುತ್‌ ಮಗ್ಗಗಳ ಅಭಿವೃದ್ಧಿ ನಿಗಮ) ಹಾಗೂ ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿಗಳನ್ನು ಬೆಳಗಾವಿಗೆ, ನಗರಾಭಿವೃದ್ಧಿ ಇಲಾಖೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕದ ಹುಬ್ಬಳ್ಳಿಗೆ ಪ್ರತ್ಯೇಕವಾಗಿ ಸ್ಥಾಪಿಸುವುದು ಹಾಗೂ ಮೈಸೂರಿನಲ್ಲಿದ್ದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರಾ ಇಲಾಖೆಯನ್ನು ಹಂಪಿಗೆ ಹಾಗೂ ಕಾನೂನು ಇಲಾಖೆಯ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪೈಕಿ ಒಬ್ಬ ಸದಸ್ಯರ ಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರಿಸಲಾಗಿತ್ತು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಪೈಕಿ ಎರಡು ಮಾಹಿತಿ ಆಯುಕ್ತರ ಕಚೇರಿಗಳಲ್ಲಿ ಒಂದು ಪೀಠ ಕಲ್ಬುರ್ಗಿಗೆ ಹಾಗೂ ಒಂದು ಪೀಠ ಬೆಳಗಾವಿಗೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕರ್ನಾಟಕ ಲೋಕಾಯುಕ್ತದಲ್ಲಿರುವ ಎರಡು ಉಪ ಲೋಕಾಯುಕ್ತ ಕಚೇರಿಗಳ ಪೈಕಿ ಒಂದು ಉಪ ಲೋಕಾಯುಕ್ತ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾತರಿಸಿ ಒಟ್ಟು 9 ಕಚೇರಿಗಳನ್ನು ಸ್ಥಳಾಂತರಿಸಿ 2019ರ ಏ. 1ರಂದು ಜಾರಿಗೆ ಬರುತ್ತದೆ ಎಂದು ತಿಳಿಸಲಾಗಿದ್ದರೂ ಕಚೇರಿಗಳು ಬಾರದೇ ಇರುವುದರಿಂದ ಮತ್ತೆ ನೂತನವಾಗಿ 23-9-2019ರಂದು ಸರ್ಕಾರದ ವತಿಯಿಂದ ಮತ್ತೂಮ್ಮೆ ಆದೇಶ ಹೊರಡಿಸಿ ಸ್ಥಳಾಂತರಗೊಳ್ಳದ ಕಚೇರಿಗಳು ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕೆಂದು ಮತ್ತೆ ಆದೇಶ ನೀಡಿತ್ತು.

ಇದರಿಂದ ವಿಚಲಿತರಾದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ದಶಕಗಳಿಂದ ರಾಜಧಾನಿಯಲ್ಲಯೇ ಉಳಿದುಕೊಂಡಿದ್ದ ನೌಕರರು ತಮ್ಮ ಕುತಂತ್ರ ಬುದ್ಧಿ ಬಳಸಿ ಆಲಮಟ್ಟಿಯಲ್ಲಿರುವ ಕಚೇರಿಗೆ ಬಾರದೇ ಕಚೇರಿಯ ನಾಮಫಲಕದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರು ನೋಂದಾಯಿತ ಕಚೇರಿ ಆಲಮಟ್ಟಿ ಎಂದು ಬರೆದು ಅದರ ಕೆಳಭಾಗದಲ್ಲಿ ಸಂಪರ್ಕ ಕಚೇರಿ ಪಿಡಬ್ಲ್ಯೂಡಿ ಕಚೇರಿ ಪೂರಕ ಕಟ್ಟಡ 3ನೇಮಹಡಿ, ಕೆ.ಆರ್‌.ವೃತ್ತ ಬೆಂಗಳೂರು ಎಂದು ನಮೂದಿಸಿದ್ದಾರೆ. ಇದರಿಂದ ಮತ್ತೆ ಎಂ.ಡಿ.ಯವರ ಕಚೇರಿಯನ್ನು ಬೆಂಗಳೂರಿನಲ್ಲೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯವರು ಅಧಿವೇಶನದಲ್ಲಿ ನೀಡಿದ ಭರವಸೆಗಳು ಹಾಗೂ ಸರ್ಕಾರದ ಆದೇಶಗಳಿಗೆ ಕವಡೆಕಾಸಿನ ಕಿಮ್ಮತ್ತಿಲ್ಲವೇ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೌಲಭ್ಯಗಳಿದ್ದರೂ ಬಾರದ ಕಚೇರಿ: ಕೋಟ್ಯಂತರ ರೂ.ಗಳನ್ನು ವ್ಯಯ ಮಾಡಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಆಡಳಿತಾತ್ಮಕ ಹಾಗೂ ಆರ್ಥಿಕ ವಿಭಾಗದ ಇಬ್ಬರು ವ್ಯವಸ್ಥಾಪಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿ ಹೀಗೆ ಎಲ್ಲ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಬೃಹತ್‌ ಕಟ್ಟಡ ನಿರ್ಮಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಎಲ್ಲ ಅ ಧಿಕಾರಿಗಳು ವಾಸಿಸಲು ಸುಸಜ್ಜಿತ ಎಲ್ಲ ಸೌಲಭ್ಯ ಹೊಂದಿರುವ ಬಂಗಲೆಗಳು ಇಂದು ಬೂತ ಬಂಗಲೆಗಳಂತೆ ಬಿಕೋ ಎನ್ನುವಂತಾಗಿವೆ.

ಉತ್ತರ ಕರ್ನಾಟಕದವರೇ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನ ಎಂ.ಡಿ.ಕಚೇರಿಯಲ್ಲಿದ್ದಾರೆ. ಅವರು ಅಲ್ಲಿಯೇ ವಾಸಿಸಲು ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದಾರೆ. ದಕ್ಷಿಣದಿಂದ ಉತ್ತರಕ್ಕೆ ಬರಲಾಗದ ಸಿಬ್ಬಂದಿಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಹೆಸರು ಹೇಳಲು ಇಚ್ಚಿಸದ ಕೃಷ್ಣಾ ಭಾಗ್ಯಜಲನಿಗಮದ ಉದ್ಯೋಗಿ

 

-ಶಂಕರ ಜಲ್ಲಿ

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mahadevapura

Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.