ಬಾದಾಮಿಗೆ ಸಿದ್ದರಾಮಯ್ಯ ಉತ್ತರಾಧಿಕಾರಿ ಯಾರು?ಕ್ಷೇತ್ರದಲ್ಲಿದ್ದಾರೆ 12 ಜನ ಆಕಾಂಕ್ಷಿಗಳು
ಕೊನೆ ಗಳಿಗೆಯಲ್ಲಿ ಬಾದಾಮಿ ಕ್ಷೇತ್ರದಲ್ಲೂ ನಾಮಪತ್ರ ಸಲ್ಲಿಸಿದ್ದರು.
Team Udayavani, Jan 10, 2023, 3:13 PM IST
ಬಾಗಲಕೋಟೆ: ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ, ಅಲ್ಪಮತಗಳ ಅಂತರದಿಂದ ಗೆದ್ದು ರಾಜಕೀಯ ಪುನರ್ ಜನ್ಮ ಪಡೆದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪುನಃ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಸೋಮವಾರ ಘೋಷಿಸಿದ ಬೆನ್ನಲ್ಲೇ ಬಾದಾಮಿ ಕ್ಷೇತ್ರದಲ್ಲಿ ಮುಂದಿನ ಕಾಂಗ್ರೆಸ್ ಅಭ್ಯರ್ಥಿ ಯಾರಾಗ್ತಾರೆ ಎಂಬ ಲೆಕ್ಕಾಚಾರವೂ ಆರಂಭವಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ವೇಳೆ ಅವರು ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು.
ಜತೆಗೆ ಕೊನೆ ಗಳಿಗೆಯಲ್ಲಿ ಬಾದಾಮಿ ಕ್ಷೇತ್ರದಲ್ಲೂ ನಾಮಪತ್ರ ಸಲ್ಲಿಸಿದ್ದರು. ಆಗ ಬಾದಾಮಿ ಕ್ಷೇತ್ರಕ್ಕೆ ಖ್ಯಾತ ವೈದ್ಯ ಡಾ|ದೇವರಾಜ ಪಾಟೀಲರಿಗೆ ಎಐಸಿಸಿ ಟಿಕೆಟ್ ಘೋಷಣೆ ಮಾಡಿತ್ತು.ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದಾಗ, ಸ್ಥಳೀಯ ಕಾಂಗ್ರೆಸ್ ಪ್ರಮುಖರು ಒಗ್ಗಟ್ಟಿನಿಂದ ಅವರ ಪರವಾಗಿ ಶ್ರಮಿಸಿದ್ದರು. ಬಾದಾಮಿ ಜನರು, ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ರಾಜಕೀಯ ಪುನರ್‌ಜನ್ಮ ನೀಡಿದ್ದಾರೆ ಎಂದೇ ರಾಜಕೀಯ ವಲಯದಲ್ಲಿ ಬಹು ಚರ್ಚೆಯಾಗಿತ್ತು.
ಕ್ಷೇತ್ರ ತೊರೆಯಲು ಕಾರಣ ಏನು?: ಸಿದ್ದರಾಮಯ್ಯ ಅವರು ಬಾದಾಮಿಯಿಂದ ಆಯ್ಕೆಯಾದ ಬಳಿಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಆಗಿವೆ. ಹಿಂದೆಂದೂ ಕಾಣದಂತಹ ಯೋಜನೆಗಳನ್ನು ಬಾದಾಮಿ ಕ್ಷೇತ್ರದ ಜನ ಕಂಡಿದ್ದಾರೆ. ಆದರೆ, ಪಕ್ಷ ಸಂಘಟನೆ, ಇಲ್ಲಿನ ನಾಯಕರ ಒಗ್ಗೂಡಿಸುವಿಕೆ, ಇಡೀ ಜಿಲ್ಲೆಗೆ ಅವರ ಕೊಡುಗೆ ವಿಷಯದಲ್ಲಿ ಪಕ್ಷದಲ್ಲಿದ್ದ ಅಸಮಾ ಧಾನ ಜತೆಗೆ ಮುಖ್ಯವಾಗಿ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವ ತಂತ್ರಗಾರಿಕೆಯೊಂದಿಗೆ ಬಾದಾಮಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕೆಲ ಹಿರಿಯ ನಾಯಕರೇ ದೂರ ಸರಿದಿದ್ದು ಮುಂದಿನ ಚುನಾವಣೆಯಲ್ಲಿ ಸಮಸ್ಯೆಯಾಗಬಹುದು ಎಂಬ ಮುಂದಾಲೋಚನೆಯಿಂದ ಕ್ಷೇತ್ರ ತೊರೆದಿದ್ದಾರೆ ಎಂಬ ಮಾತೂ ಕೇಳಿಬಂದಿದೆ. ಆದರೆ, ಬಾದಾಮಿ ಬೆಂಗಳೂರಿನಿಂದ ದೂರ ಇರುವುದು ಹಾಗೂ ರಾಜ್ಯದ ವಿವಿಧೆಡೆ ಪ್ರವಾಸಕ್ಕೆ ಸುಲಭವಾಗುವಂತೆ ಬೆಂಗಳೂರಿಗೆ ಸಮೀಪದ ಕೋಲಾರ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಬಹುತೇಕ ಜನರ ಅಭಿಮತ. ಅದೇನೇ ಇರಲಿ, ರಾಜಕೀಯ ಪುನರ್‌ಜನ್ಮ ನೀಡಿದ ಕ್ಷೇತ್ರ ತೊರೆಯಬಾರದಿತ್ತು ಎಂಬುದು ಕೆಲವರ ಅಭಿಪ್ರಾಯ.
ಉತ್ತರಾಧಿಕಾರಿ ಯಾರು?:
ಸಿದ್ದರಾಮಯ್ಯ ಕ್ಷೇತ್ರ ತೊರೆಯುವುದು ಖಚಿತವಾಗುತ್ತಿದ್ದಂತೆ ಪಕ್ಷದಲ್ಲಿ ಟಿಕೆಟ್‌ಗಾಗಿ ಪೈಪೋಟಿ ಜೋರಾ ಗುವುದು ಖಚಿತವಾಗಿದೆ. ಕಳೆದ ಬಾರಿ ಇಲ್ಲಿ ಟಿಕೆಟ್ ಘೋಷಣೆಯಾಗಿದ್ದ ಡಾ|ದೇವರಾಜ ಪಾಟೀಲರು, ಈ ಬಾರಿ ಬಾಗಲಕೋಟೆ ಕ್ಷೇತ್ರದಿಂದ ಟಿಕೆಟ್ ಕೇಳಿದ್ದಾರೆ. ಸುಮಾರು 12 ಮಂದಿ ಈಗಾ ಗ ಲೇ ಬಾದಾಮಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ ಕಳೆದ ಹಲವಾರು ವರ್ಷಗಳಿಂದ ಸಿದ್ದರಾಮಯ್ಯ ಅವರ ಪಕ್ಕಾ ಶಿಷ್ಯನಾಗಿ, ಕಳೆದ ನಾಲ್ಕು ವರ್ಷಗಳಿಂದ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಇಡೀ ಕ್ಷೇತ್ರದ ಕೆಲಸ ಕಾರ್ಯ ನೋಡಿಕೊಂಡಿದ್ದ ಯುವ ಮುಖಂಡ ಹೊಳಬಸು ಶೆಟ್ಟರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.
ಅವರೊಂದಿಗೆ ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಅವರ ಪುತ್ರ ಭೀಮಸೇನ ಚಿಮ್ಮನಕಟ್ಟಿ ಮತ್ತು ಮಹೇಶ ಹೊಸಗೌಡರ ಅವರ ಹೆಸರೂ ಮುಂಚೂಣಿಯಲ್ಲಿವೆ. ಕೊನೆಗಳಿಗೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಕಾದು ನೋಡಬೇಕು.
ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಹೇಳಿದ್ದು, ಅಲ್ಲಿನ ಜನರಿಗೆ ತುಂಬಾ ಖುಷಿಯಾಗಿದೆ. ಆದರೆ, ನಮ್ಮ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿ ಎಂದು ಮನವಿ ಮಾಡುತ್ತೇವೆ. ನಮಗೆ ತುಂಬಾ ಬೇಸರವಾಗಿದೆ. ಇಡೀ ಕ್ಷೇತ್ರದ ಪ್ರಮುಖರೊಂದಿಗೆ ಅವರನ್ನು ಮತ್ತೆ ಭೇಟಿ ಮಾಡಿ, ಮನವಿ ಮಾಡುತ್ತೇವೆ. ನಮ್ಮ ಕ್ಷೇತ್ರ ಬಿಡಬೇಡಿ ಎಂದು ಕೇಳಿಕೊಳ್ಳುತ್ತೇವೆ. *ಹೊಳಬಸು ಶೆಟ್ಟರ, ಯುವ ಮುಖಂಡ, ಗುಳೇದಗುಡ್ಡ-ಬಾದಾಮಿ
*ಶ್ರೀಶೈಲ ಕೆ. ಬಿರಾದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.