ಸಿಎಂ ಗ್ರಾಮ ವಾಸ್ತವ್ಯ ಯಾಕೆ, ಬರಗಾಲ ಪೀಡಿತ ಪ್ರದೇಶಕ್ಕೆ ತೆರಳಲಿ: ಬಿಎಸ್ ವೈ
Team Udayavani, Jun 7, 2019, 1:25 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರಗಾಲ ಅಧ್ಯಯನ ಮಾಡುವುದು ಬಿಟ್ಟು ಗ್ರಾಮ ವಾಸ್ತವ್ಯ ಮಾಡುವುದರಲ್ಲಿ ಅರ್ಥವಿಲ್ಲ. ಇದು ಜನರ ಗಮನ ಬೇರೆಡೆ ಸೆಳೆಯುವ ಕುತಂತ್ರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬರಗಾಲ ಪೀಡಿತ ಪ್ರದೇಶಗಳಿಗೆ ತೆರಳಿ ಅಲ್ಲಿನ ಜನರ, ರೈತರ, ಜಾನುವಾರುಗಳ ಸ್ಥಿತಿಗತಿ ಅರಿಯಬೇಕು. ಶಾಲೆಯಲ್ಲಿ ವಾಸ್ತವ್ಯ ಮಾಡಿದರೆ ಏನು ಪ್ರಯೋಜನ. ಇದು ಜನರ ಗಮನ ಬೇರೆಡೆ ಸೆಳೆಯಲು ಮಾಡುತ್ತಿರುವ ರಾಜಕೀಯ ದೊಂಬರಾಟ. ರೈತರ ಸಾಲ ಮನ್ನಾ ಮಾಡಲಿಲ್ಲ. ರಾಜಕೀಯ ಕಚ್ಚಾಟದಲ್ಲಿಯೇ ತೊಡಗಿದ್ದಾರೆ ಎಂದರು.
ಯಾವುದೇ ಕಾರಣಕ್ಕೂ ಚುನಾವಣೆ ನಡೆಸಲು ಬಿಡಲ್ಲ. ನಾವು 105 ಸ್ಥಾನ ಗೆದ್ದಿದ್ದೇವೆ. ಜನ 5 ವರ್ಷ ಆಡಳಿತ ನಡೆಸಲು ಶಾಸಕರನ್ನು ಆರಿಸಿ ಕಳುಹಿಸಿದ್ದಾರೆ. ಚುನಾವಣೆ ಏನಿದ್ದರೂ 5 ವರ್ಷ ನಂತರ ನಡೆಸುವುದು ಎಂದರು.
ಯಡಿಯೂರಪ್ಪ ಅವರು ಇಂದು ಬಾಗಲಕೋಟೆ ಜಿಲ್ಲೆಯ ಬದಾಮಿ ವಿಧಾನ ಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ಮುಸ್ಟಿಗೇರಿ ಮತ್ತು ಹಳಗೇರಿ ಗ್ರಾಮಗಳಲ್ಲಿ ಬರ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ಶಾಸಕ ಹನುಮಂತ ನಿರಾಣಿ, ಮಾಜಿ ಸಚಿವ ಶ್ರೀ ಲಕ್ಷ್ಮಣ ಸೌದಿ ಹಾಗೂ ಮತ್ತಿತರ ಪಕ್ಷದ ಮುಖಂಡ ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.