ಲಕ್ಷಾನಟ್ಟಿ ಗ್ರಾಪಂಗೆ ಮಹಿಳೆಯರ ಮುತ್ತಿಗೆ

ಮೂರು ತಿಂಗಳಿಂದ ಸಮರ್ಪಕವಾಗಿ ನೀರು ಪೂರೈಕೆಯಿಲ್ಲ•ನಿತ್ಯದ ಕೆಲಸ ಬಿಟ್ಟು ನೀರು ತರುವ ದುಸ್ಥಿತಿ

Team Udayavani, Jun 12, 2019, 9:41 AM IST

bk-tdy-3..

ಲೋಕಾಪುರ: ಚೌಡಾಪುರದ ಹರಿಜನ ಕಾಲೋನಿಯ ಮಹಿಳೆಯರು ಲಕ್ಷಾನಟ್ಟಿ ಗ್ರಾಪಂಗೆ ಖಾಲಿ ಕೊಡಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಲೋಕಾಪುರ: ಮೂರು ತಿಂಗಳಿಂದ ಕುಡಿಯುವ ನೀರಿನ ಸರಬರಾಜು ಇಲ್ಲದ್ದನ್ನು ಖಂಡಿಸಿ ಚೌಡಾಪುರ ಗ್ರಾಮದ ಎಸ್‌.ಸಿ ಕಾಲೋನಿ ನಿವಾಸಿಗಳು ಹಾಗೂ ಮಹಿಳೆಯರು ಮಂಗಳವಾರ ಖಾಲಿ ಕೊಡಗಳೊಂದಿಗೆ ಲಕ್ಷಾನಟ್ಟಿ ಗ್ರಾಪಂ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಳೆದ 3 ತಿಂಗಳಿಂದ ಚೌಡಾಪುರ ಎಸ್‌.ಸಿ ಕಾಲೋನಿಯ ಗ್ರಾಮಸ್ಥರು ಕುಡಿಯುವ ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮ ಪಂಚಾಯತಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನಿತ್ಯದ ಕೆಲಸ ಬಿಟ್ಟು ನೀರು ತರುವುದೇ ಒಂದು ಉದ್ಯೋಗವಾಗಿದೆ. ಕೊಡ ನೀರಿಗಾಗಿ 2-3 ಕಿ.ಮೀ ದೂರ ಸಾಗುವ ಅನಿವಾರ್ಯತೆ ಎದುರಾಗಿದ್ದು, ಪಕ್ಕದ ಗ್ರಾಮದಿಂದ ನೀರು ತರಬೇಕಾದ ಅನಿವಾರ್ಯತೆ ಎದುರಾಗಿದೆ. ಕೂಡಲೇ ಸಮರ್ಪಕ ನೀರು ಪೂರೈಸುವಂತೆ ಆಗ್ರಹಿಸಿದರು.

ಕುಡಿಯುವ ನೀರಿನ ಯೋಜನೆ ಮತ್ತು ಕೊಳವೆ ಬಾವಿಗಳಲ್ಲಿ ಅಂತರ್ಜಲ ಪಾತಾಳಕ್ಕೆ ಕುಸಿದಿರುವ ಕಾರಣ ನೀರಿನ ಪೂರೈಕೆ ಬಂದ್‌ ಆಗಿದೆ. ಇದರಿಂದ ಗ್ರಾಮದಲ್ಲಿ ನೀರಿನ ಹಾಹಾಕಾರ ಉಂಟಾಗಿದೆ. ಸಂಬಂಧ ಅಧಿಕಾರಿಗಳು ಕ್ರಮ ವಹಿಸಬೇಕು ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ಹಲವು ವರ್ಷಗಳಿಂದಲೂ ಕುಡಿಯುವ ನೀರಿಗೆ ಅಭಾವ ಉಂಟಾಗಿತ್ತು. ಈ ಬಗ್ಗೆ ಗ್ರಾಪಂಗೆ ಮನವಿ ಮಾಡಿದರೂ ಅಧಿಕಾರಿಯಾಗಲಿ, ಜನಪ್ರತಿನಿಧಿಯಾಗಲಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವಲ್ಲಿ ಗಂಭೀರ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ನೀರಿನ ಕೊರತೆಯಿಂದ ಬಳಲುತ್ತಿದ್ದು, ತಮ್ಮ ಮನೆಯಿಂದ ಕುಡಿಯಲು ದಿನಾಲು ನೀರಿನ ಬಾಟಲಿಗಳನ್ನು ತೆಗೆದುಕೊಂಡು ಬರುವಂತಾಗಿದೆ. ಇದರಿಂದ ಈ ಶಾಲೆಯಲ್ಲಿ ಅಡುಗೆ ಮಾಡಲು ನೀರಿನ ಕೊರತೆ ಇರುವುದರಿಂದ ಬೇರೆ ಕಡೆಯಿಂದ ನೀರು ತಂದು ಮಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮುತ್ತಪ್ಪ ಮಾಳಿ ಮತ್ತು ಈರಪ್ಪ ದೊಡಮನಿ, ಹನಮವ್ವ ಈರಣ್ಣ ಮಾದರ, ಯಲ್ಲವ್ವ ದೊಡಮನಿ, ಗಂಗವ್ವ ಮಾದರ, ಯಮನವ್ವ ದೊಡಮನಿ, ಸುಸಲವ್ವ ದೊಡಮನಿ, ಮಹಾದೇವಿ ಮಾದರ, ಬಸವ್ವ ಮಾದರ, ಹನಮವ್ವ ದೊಡಮನಿ, ರಾಮಣ್ಣ ದೊಡಮನಿ ವೆಂಕಣ್ಣ ದೊಡಮನಿ, ಶಂಕರ ದೊಡಮನಿ, ಹನಮಂತ ದೊಡಮನಿ, ಮಹಾದೇವ ನರಸಾಪುರ, ಪ್ರಜ್ವಲ್ ದೊಡಮನಿ, ಕಾಶಿನಾಥ ದೊಡಮನಿ, ಪುಂಡಲಿಕ ದೊಡಮನಿ, ಮಲ್ಲಪ್ಪ ದೊಡಮನಿ, ಇತರರು ಇದ್ದರು.

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.