ದುಡಿಯಲು ಹೋದ ಕಾರ್ಮಿಕರು ಮರಳಿ ತವರಿಗೆ
Team Udayavani, May 1, 2020, 5:10 PM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಮಂಗಳೂರು ಮತ್ತು ಉಡುಪಿಯಿಂದ ಬಸ್‌ಗಳ ಮೂಲಕ ಕಳುಹಿಸಲಾದ ಜಿಲ್ಲೆಯ ಕಾರ್ಮಿಕರು ಗುರುವಾರ ಬಾಗಲಕೋಟೆಗೆ ತಲುಪಿದ್ದು, ಅವರೆಲ್ಲರನ್ನು ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಲಾಯಿತು.
ಮಂಗಳೂರಿನಿಂದ 10 ಹಾಗೂ ಉಡುಪಿಯಿಂದ ಮೂವರು ಸೇರಿ ಒಟ್ಟು 13 ಬಸ್‌ಗಳಲ್ಲಿ ಒಟ್ಟು 438 ಕಾರ್ಮಿಕರು ಮರಳಿ ಜಿಲ್ಲೆಗೆ ಆಗಮಿಸಿದ್ದಾರೆ. ಕಾರ್ಮಿಕರು ಬಾಗಲಕೋಟೆ, ಬಾದಾಮಿ, ಇಲಕಲ್ಲ, ಹುನಗುಂದ ತಾಲೂಕಿನವರಾಗಿದ್ದು, ನವನಗರದ ನೂತನ ಬಸ್ ನಿಲ್ದಾಣಕ್ಕೆ ಬಂದಿದ್ದು, ಆಗಮಿಸಿದ ಕಾರ್ಮಿಕರ ಹೆಸರು ಮತ್ತು ಮೊಬೈಲ್ ನಂಬರ್ ಗಳನ್ನು ಪಡೆದುಕೊಂಡು ಅವರನ್ನು ಅದೇ ಬಸ್‌ಗಳ ಮೂಲಕ ಅವರ ಊರುಗಳಿಗೆ ಕಳುಹಿಸಿ ಕೊಡಲಾಯಿತು.
ಬಂದಂತಹ ಕಾರ್ಮಿಕರನ್ನು ಕಡ್ಡಾಯವಾಗಿ 14 ದಿನಗಳ ಹೋಮ್ ಕ್ವಾರಂಟೆ„ನ್ ಮಾಡಿ, ಅವರ ಮನೆಯ ಬಾಗಿಲಿಗೆ ಸ್ಟಿಕರ್ ಸಹ ಅಂಟಿಸಲಾಗುತ್ತಿದೆ. ಅಲ್ಲದೇ 14 ದಿನಗಳ ಕಾಲ ಆರೋಗ್ಯದ ಮೇಲೆ ನಿಗಾ ವಹಿಸಲಾಗುವುದು ಎಂದು ಕೊವಿಡ್ ವಿಶೇಷ ಅಪರ ಜಿಲ್ಲಾಧಿಕಾರಿ ಬಸವರಾಜ ಸೋಮಣ್ಣವರ ತಿಳಿಸಿದರು.
ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಕಾರ್ಮಿಕರ ಮಾಹಿತಿ ಸಂಗ್ರಹಿಸಿಟ್ಟುಕೊಂಡು ನಿಗಾ ವಹಿಸಲು ಸೂಚಿಸಲಾಯಿತು. ಜಿಲ್ಲೆಗೆ ಆಗಮಿಸಿದ ಕಾರ್ಮಿಕರು ಬಾದಾಮಿ ತಾಲೂಕಿನ ಮುಷ್ಟಿಗೇರಿ, ಕರಡಿಗುಡ್ಡ, ತೋಗುಣಸಿ, ಕಬ್ಬಲಗೇರಿ, ಕೆಂದೂರ, ಹೊಸೂರ, ನರೇನೂರ, ಮುತ್ತಲಗೇರಿ, ಇಳಕಲ್ಲ ತಾಲೂಕಿನ ಕಂದಗಲ್ಲ, ಹುನಗುಂದ ತಾಲೂಕಿನ ಬೆನಕನಡೋಣಿ, ಬಲಕುಂದಿ, ಧಮ್ಮೂರ, ಬೀಳಗಿ ತಾಲೂಕಿನ ಗಿರಿಸಾಗರ, ಬಾಗಲಕೋಟೆ ತಾಲೂಕಿನ ಗಂಗೂರ, ಚಿಕ್ಕಕೊಡಗಲಿ, ಗುಳೇದಗುಡ್ಡ ತಾಲೂಕಿನ ಲಾಯದಗುಂದಿ, ನಾಗರಾಳ, ನಾಗರಾಳ ಎಸ್. ಕೆ ಗ್ರಾಮದವರಾಗಿದ್ದಾರೆ.ಮಂಗಳೂರು ಮತ್ತುಉಡುಪಿ ಜಿಲ್ಲಾಡಳಿತದಿಂದ ಬಂದ ಮಾಹಿತಿ ಮೇರೆಗೆ ಬಾಗಲಕೋಟೆ ಜಿಲ್ಲಾಡಳಿತ ನವನಗರದ ಬಸ್ ನಿಲ್ದಾಣಕ್ಕೆ ಆಗಮಿಸದ ಕಾರ್ಮಿಕರ ಮಾಹಿತಿ ಪಡೆದು ಸುರಕ್ಷಿತವಾಗಿ ಮನೆಯಲ್ಲಿಯೇ ಇರುವಂತೆ ತಿಳಿಸಲಾಯಿತು.
ತಾಲೂಕು ವೈದ್ಯಾಧಿಕಾರಿ ಡಾ| ಬಸವರಾಜ ಜಿ.ಹುಬ್ಬಳ್ಳಿ ಕಾರ್ಮಿಕರ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ಮಾಡಿದರು. ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ, ಜಿಲ್ಲಾ ಕಾರ್ಮಿಕ ಅ ಧಿಕಾರಿ ಬಿ.ಆರ್. ಜಾದವ, ಯೋಜನಾ ಸಂಸ್ಥೆ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.