ಯೋಗ ದಿನ: ಸಚಿವರಿಂದ ಪರಿಶೀಲನೆ
ಕಾರ್ಯಕ್ರಮ ಅಚ್ಚುಕ್ಕಟ್ಟಾಗಿ ಆಯೋಜಿಸಲು ಸೂಚನೆ ; ಯೋಗದಲ್ಲಿ 3 ಸಾವಿರ ಜನ ಭಾಗಿ
Team Udayavani, Jun 19, 2022, 1:26 PM IST
ಬಾಗಲಕೋಟೆ: ಜಿಲ್ಲೆಯ ಐತಿಹಾಸಿಕ ಹಾಗೂ ಪಾರಂಪರಿಕ ತಾಣವಾದ ಪಟ್ಟದಕಲ್ಲಿನಲ್ಲಿ ಜೂನ್ 21ರಂದು ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
75ನೇ ಸ್ವಾತಂತ್ರೋತ್ಸವದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಜೂನ್ 21ರಂದು ಜರುಗಲಿರುವ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಭಾರತದಾದ್ಯಂತ 75 ಐತಿಹಾಸಿಕ ಪ್ರಸಿದ್ಧಿ ಹಾಗೂ ಪಾರಂಪರಿಕ ತಾಣಗಳಲ್ಲಿ ಒಂದೇ ಸಮಯದಲ್ಲಿ ಯೋಗ ದಿನಾಚರಣೆ ಆಚರಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಆಯ್ಕೆಯಾದ 75 ತಾಣಗಳಲ್ಲಿ ಪಟ್ಟದಕಲ್ಲು ಸಹ ಒಂದಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಖುದ್ದಾಗಿ ಭೇಟಿ ನೀಡಿ ಸ್ಥಳ ಪರಿಶೀಲಿಸುವುದರ ಜತೆಗೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾರ್ಯಕ್ರಮದ ವೇದಿಕೆ, ಸಾಮೂಹಿಕ ಯೋಗಕ್ಕೆ ಸ್ಥಳ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರೆ ಸಿದ್ದತೆ ಬಗ್ಗೆ ಪರಿಶೀಲನೆ ನಡೆಸಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ಸಚಿವಾಲಯ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ರಾಜ್ಯ ಮಂತ್ರಿ ರಾಜೀವ್ ಚಂದ್ರಶೇಖರ ಅವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಭೇಟಿ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ, ಜಿ.ಪಂ ಸಿಇಒ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ ಜಗಲಾಸರ, ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿಲ್ಲಾ ಆಯುಷ ಅ ಕಾರಿ ಅಕ್ಕಮಹಾದೇವಿ ಗಾಣಗೇರ ಸೇರಿದಂತೆ ಇತರರು ಇದ್ದರು.
ಇದಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಈ ವಿಷಯ ಕುರಿತು ಮಾತನಾಡಿದ ಅವರು, ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಭಾವದಿಂದ ಭಾರತದಲ್ಲೇ ಹುಟ್ಟು ಪಡೆದಂತಹ ಯೋಗದಿಂದ ವಿಮುಖವಾಗುತ್ತಿದ್ದಂತಹ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗದಿನವನ್ನಾಗಿ ಆಚರಿಸುವಂತಾಗಿದೆ. 8ನೇ ಅಂತಾರಾಷ್ಟ್ರೀಯ ಯೋಗದಿನವನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಇತಿಹಾಸ ಪ್ರಸಿದ್ಧ ತಾಣಗಳನ್ನು ಆಯ್ಕೆ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ಜಿಲ್ಲೆಯ ಐತಿಹಾಸಿಕ ಸ್ಥಳಗಳಾದ ಪಟ್ಟದಕಲ್ಲು, ಬಾದಾಮಿ, ಐಹೊಳೆ ಮತ್ತು ಜಮಖಂಡಿಯಲ್ಲಿ ಈ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ಸಾಮೂಹಿಕ ಯೋಗಾಭ್ಯಾಸ ಜರುಗುವದರಿಂದ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಪಟ್ಟದಕಲ್ಲನಲ್ಲಿ ಸಾಮೂಹಿಕ ಯೋಗದಲ್ಲಿ 3 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.