ದೈಹಿಕ-ಮಾನಸಿಕ ಆರೋಗ್ಯಕ್ಕೆ ಯೋಗ ಅಗತ್ಯ
| ಸಸಿಗೆ ನೀರುಣಿಸಿ ಯೋಗಾ ದಿನಕ್ಕೆ ಚಾಲನೆ | ಮನೆಯಲ್ಲಿಯೇ ಯೋಗಾಭ್ಯಾಸ ಮಾಡಿದ ಜನಪ್ರತಿನಿಧಿಗಳು-ಅಧಿಕಾರಿಗಳು
Team Udayavani, Jun 22, 2021, 5:03 PM IST
ಬಾಗಲಕೋಟೆ: ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗದೊಂದಿಗೆ ಮನೆಯಲ್ಲಿರಿ ಎಂಬ ಘೋಷವಾಕ್ಯದೊಂದಿಗೆ ಆನ್‌ಲೈನ್‌ನಲ್ಲಿ ಮೂಲಕ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 2015 ರಿಂದ ಪ್ರತಿ ವರ್ಷವು ಜೂನ್ -21 ರಂದು ಅಂತಾರಾಷ್ಟೀಯ ಯೋಗ ದಿನಾಚರಣೆಯನ್ನು ಪ್ರಧಾನ ಮಂತ್ರಿಗಳು ವಿಶ್ವ ಯೋಗ ದಿನವನ್ನಾಗಿ ಭಾರತ ದೇಶವಲ್ಲದೆ ಇಡಿ ಜಗತ್ತಿಗೆ ಯೋಗದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ವಯ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ|ಮಲ್ಲಣ್ಣ ತೋಟದ ಮಾತನಾಡಿದರು. ವಿಶ್ವ ಯೋಗ ದಿನಾಚರಣೆ ಅಂಗವಾಗಿ ಭಾರತ ಸೇವಾದಳದ ಸಹಯೋಗದೊಂದಿಗೆ ಜೂನ್ 17ರಿಂದ 21ವರೆಗೆ 5 ದಿನಗಳ ಕಾಲ ಆನ್‌ಲೈನ್ ಮೂಲಕ ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ನಂತರ ಜಿಲ್ಲಾ ಸಂಘಟಕ ಮಹೇಶ ಪತ್ತಾರ, ಕಾಮನ್ ಯೋಗಾ ಪ್ರೊಟೊಕಾಲ್ ಪ್ರಕಾರ ಆನ್‌ಲೈನ್‌ನಲ್ಲಿ ಭಾಗವಹಿಸಿದ ಎಲ್ಲರಿಗೂ ಯೋಗಾಭ್ಯಾಸ ಮಾಡಿಸಿದರು.
ಮನೆಯಲ್ಲಿಯೇ ಯೋಗಾಭ್ಯಾಸ: ಯೋಗದೊಂದಿಗೆ ಮನೆಯಲ್ಲಿರಿ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿರುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆಯುಷ ಅಧಿಕಾರಿ ಡಾ|ಮಲ್ಲಣ್ಣ ತೋಟದ ಹಿರಿಯ ವೈದ್ಯಾಧಿಕಾರಿ ಡಾ|ಚಂದ್ರಕಾಂತ ರಕ್ಕಸಗಿ, ವೈದ್ಯಾಧಿಕಾರಿ ಡಾ|ಶಿವಾನಂದ ನಿಡಗುಂದಿ, ಆಯುಷ ಇಲಾಖೇಯ ಅಧೀಕ್ಷಕರು ಗಿರೀಶ ಕಂಬಳಿ, ವಿನಾಯಕ ಅವ್ವಣ್ಣವರ ಸೇರಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಮನೆಯಲ್ಲಿಯೇ ಯೋಗಾಭ್ಯಾಸ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.