ಯುವಕರೇ ದೇಶದ ಸಂಪತ್ತು: ಹೇಮಲತಾ
ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ.
Team Udayavani, Jan 18, 2022, 5:43 PM IST
ಬಾಗಲಕೋಟೆ: ಯುವಕರೇ ದೇಶದ ಸಂಪತ್ತಾಗಿದ್ದು, ಅವರನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಭಾಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ವಾರ್ತಾ ಇಲಾಖೆ, ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾನಾಡಿದರು.
ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ. ಯುವ ಸಮೂಹ ನಮ್ಮ ದೇಶದ ಆಸ್ತಿಯಾಗಿದ್ದು, ಅವರನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಸ್ವಾಮಿ ವಿವೇಕಾನಂದರ ಯುವ ಜನತೆಯ ಮೇಲೆ ಅಪಾರ ಕಾಳಜಿ ವಹಿಸುತ್ತಿದ್ದರು. ಅವರ ಆದರ್ಶ ಅಳವಡಿಕೊಳ್ಳಬೇಕು. ಅವರು ಜೀವನದ ಮೌಲ್ಯ ತಿಳಿಸಿಕೊಡುವುದರ ಜತೆಗೆ ದಾರಿದೀಪವಾಗಿದ್ದಾರೆ ಎಂದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅಗತ್ಯವಾಗಿದ್ದು, ಕಾನೂನಿನ ಅರಿವು ಎಲ್ಲ ಪಡೆದುಕೊಳ್ಳಬೇಕು. ಅನ್ಯಾಯಕ್ಕೊಳಗಾದಾಗ ಅಸಹಾಯಕರಿಗೆ ಕಾನೂನು ಸೇವಾ ಪ್ರಾ ಧಿಕಾರದ ಮೂಲಕ ಉಚಿತವಾಗಿ ನೆರವು ನೀಡಲಾಗುತ್ತದೆ.
ನಾವೆಲ್ಲರೂ ಕಾನೂನಿನ ಅಡಿಯಲ್ಲಿ ಜೀವಿಸುತ್ತಿದ್ದು, ಅವುಗಳ ಬಗ್ಗೆ ಅರಿವು ಸಹ ಮುಖ್ಯವಾಗಿದೆ ಎಂದರು. ಸಾಹಿತಿ ಡಾ| ಪ್ರಕಾಶ ಖಾಡೆ ಮಾತನಾಡಿ, ದೇಶ ಕಂಡ ಅಪ್ರತಿಮ ಸಂತ ಸ್ವಾಮಿ ವಿವೇಕಾನಂದರ ಸ್ಫೂರ್ತಿ ಯುವಕರಿಗೆ ಅಗತ್ಯವಾಗಿದೆ. ಸಂಸ್ಕೃತ, ಸುಸಂಸ್ಕೃತರಾಗಿ ಬಾಳಬೇಕೆ ವಿನಃ ವಿಕೃತರಾಗಿ ಬಾಳಬಾರದು. ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಸಂಸ್ಕೃತಿ ನಮ್ಮ ಭಾರತೀಯ ಸಂಸ್ಕೃತಿಯಾಗಿದೆ ಎಂದು ತಿಳಿಸಿದರು. ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎನ್. ವೈ. ಕುಂದರಗಿ ಮಾತನಾಡಿ, ಯುವಕರು ಉತ್ತಮ ಸಾಧಕರಾಗುವುದರ ಜತೆಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು. ನೆಹರು ಯುವ ಕೇಂದ್ರದ ಯುವ ಅಧಿಕಾರಿ ಸುಷ್ಮಾ ಗವಳಿ, ಸೈಕ್ಲಿಂಗ್ ತರಬೇತುಗಾರ್ತಿ ಅನಿತಾ ನಿಂಬರಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.