19ರಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ
Team Udayavani, Jan 5, 2020, 12:15 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಜ.19 ರಿಂದ 22ವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ತಿಳಿಸಿದರು.
ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪೋಲಿಯೋ ಒಂದು ಮಾರಕ ರೋಗವಾಗಿದ್ದು,
5ವರ್ಷದೊಳಗಿನ ಯಾವುದೇ ಮಗು ಈ ಕಾರ್ಯಕ್ರಮದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಈ ಕುರಿತು ತಾಲೂಕ ಮಟ್ಟದಲ್ಲಿ ಸಭೆ ನಡೆಸಿ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಕೇವಲ ಗುರಿ ಸಾಧನೆಗೆ ಸೀಮಿತಗೊಳಿಸದೇ ಲಸಿಕೆ ಹಾಕಿಸಿಕೊಳ್ಳುವ ಮನೋಭಾವ ಹೊಂದುವಂತೆ ಮಾಡಬೇಕು. ಲಸಿಕಾ ಕಾರ್ಯಕ್ರಮಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಕಾಳಜಿ ವಹಿಸಿ, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಲಸಿಕಾ ಕೇಂದ್ರಗಳಿಗೆ ಕರೆದುಕೊಂಡು ಬರಬೇಕು. ನಗರ ಪ್ರದೇಶಗಳಲ್ಲಿ, ಸ್ಲಂ ಪ್ರದೇಶಗಳಲ್ಲಿ ವಿಶೇಷ ಗಮನ ಹರಿಸಬೇಕು. ಅಲ್ಲದೇ ಜಿಲ್ಲೆಯ ಕಬ್ಬು ಕಡೆಯುವ ಗ್ಯಾಂಗ್‌ನ ಮತ್ತು ಇಟ್ಟಂಗಿ ಭಟ್ಟಿಯಲ್ಲಿನ ಮಕ್ಕಳು ಸಹ ಲಸಿಕೆಯಿಂದ ವಂಚಿತರಾಗಂದತೆ ಕ್ರಮವಹಿಸಿ, ನರ್ಸಿಂಗ್ ವಿದ್ಯಾರ್ಥಿಗಳು, ರೋಟರಿ, ಲಯನ್ಸ್ ಕ್ಲಬ್, ಮಹಿಳಾ ಸಂಘ ಸಂಸ್ಥೆಗಳ ಸಹಕಾರ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್. ದೇಸಾಯಿ ಮಾತನಾಡಿ, ಲಸಿಕಾ ಕಾರ್ಯಕ್ರಮ ಒಟ್ಟು 4 ದಿನಗಳ ಕಾಲ ನಡೆಯಲಿದೆ. ಮೊದಲನೇ ದಿನ ಬೂತ್ ಮಟ್ಟದಲ್ಲಿ ನಂತರ ಮೂರು ದಿನ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತಿದೆ. ಪ್ರತಿ ಬೂತ್ ಮಟ್ಟದ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ತೆರಳಿ ತಪ್ಪದೇ ಪೋಲಿಯೋ ಹನಿ ಹಾಕುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ಬೂತ್‌ಗೆ ಇಬ್ಬರು ಸದಸ್ಯರು, ಐದು ತಂಡಕ್ಕೆ ಒಬ್ಬ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಪಲ್ಸ್ ಪೋಲಿಯೋ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಶಾಲೆಗಳಲ್ಲಿ ಪ್ರಭಾತ ಪೇರಿ ಹಾಗೂ ಪಲ್ಸ್ ಪೋಲಿಯೋ ಕಾರ್ಯಕ್ರಮದ ಒಂದು ದಿನ ಮುಂಚೆ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅದರ ಜತೆಗೆ ಧ್ವನಿವರ್ಧಕ ಮೂಲಕ ಹಾಗೂ ಡಂಗೂರ, ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ದೇಸಾಯಿ ತಿಳಿಸಿದರು.
ಕಳೆದ ವರ್ಷದಲ್ಲಿ ಲಸಿಕಾ ಕಾರ್ಯಕ್ರಮದಲ್ಲಿ ಶೇ.102 ಪ್ರಗತಿ
ಸಾ ಧಿಸಲಾಗಿದೆ ಎಂದು ತಿಳಿಸಿದರು. ಜಿಪಂ ಸಿಇಒ ಗಂಗೂಬಾಯಿ ಮಾನಕರ, ಸಭೆಯಲ್ಲಿ ವಿಶ್ವ ಆರೋಗ್ಯ ಸಂಶೋಧನಾ ಸರ್ವೇಕ್ಷಣಾ ಧಿಕಾರಿ ಡಾ| ಮುಕುಂದ ಗಲಗಲಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಪ್ರಕಾಶ ಬಿರಾದಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|ಕುಸುಮಾ ಮಾಗಿ, ಡಾ|ವಿಜಯ ಕಂಠಿ, ನಿರ್ದೇಶಕ ಗಣಪತಿ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.