ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ
ಕಳೆದ ಸಾಲಿನ ಕಾಮಗಾರಿ ಆರಂಭಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ನಿರ್ಣಯ
Team Udayavani, Aug 14, 2019, 3:52 PM IST
ಬಳಗಾನೂರು: ಪಪಂ ಕಾರ್ಯಾಲಯದಲ್ಲಿ ತಹಶೀಲ್ದಾರ್, ಪಪಂ ಆಡಳಿತಾಧಿಕಾರಿ ಬಲರಾಮ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
ಬಳಗಾನೂರು: ಅಭಿವೃದ್ಧಿಗಾಗಿ ಬಂದ ಅನುದಾನ ಸದ್ಬಳಕೆ ಮಾಡಿಕೊಂಡಾಗ ಮಾತ್ರ ಪಟ್ಟಣದ ಅಭಿವೃದ್ಧಿ ಸಾಧ್ಯ. ಈ ದಿಶೆಯಲ್ಲಿ ಸದಸ್ಯರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಪಪಂ ಆಡಳಿತಾಧಿಕಾರಿ, ತಹಶೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.
ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ನಡದ ಪಪಂ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆ ಆರಂಭವಾಗುತಿದ್ದಂತೆ ಸದಸ್ಯೆ ನೂರಜಹಾಬೇಗಂ ಮಾತನಾಡಿ, ಪಪಂ ವತಿಯಿಂದ ಕೈಗೊಂಡ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯರಿಂದ ಅಡೆತಡೆಯಾದಾಗ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಆದರೆ ಇಲ್ಲಿನ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಗುತ್ತಿಗೆದಾರರು ಕಾಮಗಾರಿ ನಡೆಸಲು ಸಮಸ್ಯೆ ಆಗುತ್ತಿದೆ ಎಂದು ಸಭೆ ಗಮನಕ್ಕೆ ತಂದರು.
ಕಳೆದ ಸಾಲಿನಲ್ಲಿ ಗುತ್ತಿಗೆ ಪಡೆದರೂ ಕಾಮಗಾರಿ ಆರಂಭಿಸದ ಗುತ್ತಿಗೆದಾರರ ಎಫ್‌ಡಿ, ಇಎಂಡಿ ಹಣ ಮುಟ್ಟುಗೋಲು ಹಾಕಿಕೊಂಡು ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ 97.60 ಲಕ್ಷಕ್ಕೆ ಕ್ರಿಯಾಯೋಜನೆ ಮಂಜೂರಾಗಿದೆ. ಅಂದಾಜು ಪಟ್ಟಿ ತಯಾರಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಲಾಯಿತು. ಎಸ್‌ಎಫ್‌ಸಿ ಅಭಿವೃದ್ಧಿ ಅನುದಾನ 18.91 ಲಕ್ಷಕ್ಕೆ ಕ್ರಿಯಾಯೋಜನೆ ಮಂಜೂರಾಗಿದ್ದು ಅಂದಾಜುಪಟಇಟ ತಯಾರಿಸಿ ಅನುಮೋದನೆ ಪಡೆಯಲಾಯಿತು. ಶೇ.24.10 ಯೋಜನೆಯಡಿ 19.70 ಲಕ್ಷ ವೆಚ್ಚದ ಕಾಮಗಾರಿಗಳಿಗೆ, ಶೇ.7.25 ಯೋಜನೆಯಡಿ 0.90 ಲಕ್ಷ, ಶೇ.5 ಯೋಜನೆಯಡಿ 0.62 ಲಕ್ಷದ ಕಾಮಗಾರಿಗಳ ಅಂದಾಜು ಪಟ್ಟಿ ಕ್ರಿಯಾಯೋಜನೆಗೆ ಅನುಮೋದನೆ ಪಡೆಯಲಾಯಿತು.
2019-20ನೇ ಸಾಲಿನ ಸಾಮಾನ್ಯ ಅನುದಾನ 14ನೇ ಹಣಕಾಸು ಯೋಜನೆಯಡಿ 16.40 ಲಕ್ಷಕ್ಕೆ, ಶೇ.7.25 ಯೋಜನೆಯಡಿ 1.35 ಲಕ್ಷಕ್ಕೆ, ಹಾಗೂ ಪಪಂ ನಿಧಿಯಲ್ಲಿ 0.44 ಲಕ್ಷಕ್ಕೆ, ಶೇ.5ಯೋಜನೆಯಡಿ 0.93 ಲಕ್ಷಕ್ಕೆ, ಹಾಗೂ ಪಪಂ ನಿಧಿ 0.18 ಲಕ್ಷಕ್ಕೆ, ಶೇ.24.10ಯೋಜನೆಯಡಿ 0.30 ಲಕ್ಷಕ್ಕೆ, ಹಾಗೂ ಪಪಂ ನಿಧಿ 1.45 ಲಕ್ಷಕ್ಕೆ ಹಾಗೂ ಬಾಕಿ ಉಳಿದ 8.52 ಲಕ್ಷಕ್ಕೆ ಕ್ರಿಯಾಯೋಜನೆ ತಯಾರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಲು ನಿರ್ಣಯಿಸಲಾಯಿತು.
ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೆರೆ ನಿರ್ಮಾಣ, ಬಸ್ ನಿಲ್ದಾಣ, ಚರಂಡಿ ಸ್ವಚ್ಛತೆ ಮತ್ತು ನಿರ್ವಹಣೆ, ಕುಡಿಯುವ ನೀರು ಸರಬರಾಜು, ನಾರಾಯಣ ನಗರ ಕ್ಯಾಂಪ್ ರಸ್ತೆ ದುರಸ್ತಿ, ಅಂಗನವಾಡಿ ಕಟ್ಟಡ ನಿರ್ಮಾಣ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಕಾಮಗಾರಿ ನನೆಗುದಿಗೆ ಬಿದ್ದಿರುವ ಸದಸ್ಯರು ಸಭೆ ಗಮನಕ್ಕೆ ತಂದರು.
ಮಾರುತಿ ನಗರದಲ್ಲಿನ ಆಸ್ತಿಗಳಿಗೆ ಖಾತಾಉತಾರ ಮತ್ತು ಆಸ್ತಿ ಸಂಖ್ಯೆ ನೀಡುವ ಕುರಿತು, ಇತರೆ ವಾರ್ಡ್‌ಗಳಲ್ಲಿ ಎನ್‌ಎ ಆಗದೆ ಇರುವ ಜಾಗದಲ್ಲಿ ಖಾತೆ ಸಂಖ್ಯೆ ನೀಡುವ ಕುರಿತು ಚರ್ಚಿಸಲಾಯಿತು.
ಸದಸ್ಯರಾದ ವೀರನಗೌಡ, ರಾಜಶೇಖರ, ಮಂಜುನಾಥ, ಮುದುಕಪ್ಪ ಯಂಕಪ್ಪ ನಾಯಕ, ಹನುಮಂತ, ವಿಜಯಲಕ್ಷ್ಮೀ, ಗಂಗಮ್ಮ, ನೂರಜಹಾನ್‌ಬೇಗಂ, ಸತ್ಯವತಿ, ನಾಗಲಕ್ಷ್ಮೀ, ರೇಣುಕಮ್ಮ ಆಡಳಿತಾಧಿಕಾರಿ ಬಲರಾಮ ಕಟ್ಟಿಮನಿ, ಪಪಂ ಮುಖ್ಯಾಧಿಕಾರಿ ಫಿರೋಜ್ ಖಾನ್, ಉಪ ತಹಶೀಲ್ದಾರ್ ನಾಗಲಿಂಗ ಪತ್ತಾರ ಇತರರು ಇದ್ದರು.
ನೆರೆ ಸಂತ್ರಸ್ತರಿಗೆ ನೆರವು: ಸಭೆಯಲ್ಲಿ ನೆರೆ ಸಂತ್ರಸ್ತರ ನೆರವಿಗೆ ಪಪಂ ಸದಸ್ಯರ ಒಂದು ತಿಂಗಳ ಗೌರವಧನವನ್ನು ನೀಡಲು ಸರ್ವ ಸದಸ್ಯರು ಸಮ್ಮತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.