12 ಸ್ಥಾನಕ್ಕೆ 13 ನಾಮಪತ್ರ ಸಲ್ಲಿಕೆ
ಬಳಗಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ
Team Udayavani, Dec 29, 2019, 5:12 PM IST
ಬಳಗಾನೂರು: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ 2020ರ ಜನವರಿ 5ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಶನಿವಾರ 12 ಸ್ಥಾನಗಳಿಗೆ 13 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಬಸವರಾಜ ನಾವಿ ತಿಳಿಸಿದ್ದಾರೆ.
ಸಾಲಗಾರರ ಕ್ಷೇತ್ರ ಸಾಮನ್ಯ ಮೀಸಲು 5 ಸ್ಥಾನಗಳಿಗೆ ಶರಣೇಗೌಡ
ಶಂಕರಬಂಡಿ, ಸಿದ್ದಯ್ಯ ಗುಣಾರಿ, ಶರಣಪ್ಪ ಮರೆಡ್ಡಿ, ಅಮರಪ್ಪ ಮೊದ್ಲಾಪುರ, ಮರೇಗೌಡ ಮಾಲಿ ಪಾಟೀಲ, ವೀರನಗೌಡ ಶಂಕರಬಂಡಿ ಸೇರಿ 6 ಜನ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಹಿಂದುಳಿದ ವರ್ಗ ಎ, ಮೀಸಲು 2 ಸ್ಥಾನಗಳಿಗೆ ಮಲ್ಲಪ್ಪ ಅನ್ವರಿ, ಹುಸೇನಬಾಷಾ ಬೂದಗುಂಪ ನಾಮಪತ್ರ ಸಲ್ಲಿಸಿದ್ದಾರೆ. ಪರಿಶಿಷ್ಟ ಪಂಗಡ ಮೀಸಲು ಒಂದು ಸ್ಥಾನಕ್ಕೆ ಹುಚ್ಚಪ್ಪ ತಳವಾರ, ಪರಿಶಿಷ್ಟ ಜಾತಿ ಮೀಸಲು ಒಂದು ಸ್ಥಾನಕ್ಕೆ ಭೀಮರಾಯಪ್ಪ ಹರಿಜನ, ಮಹಿಳಾ ಮೀಸಲು 2 ಸ್ಥಾನಗಳಿಗೆ ಮಹಾದೇವಿ ಕುರುಬರ, ಶಾಂತಮ್ಮ ಯಾತಗಿರಿ ನಾಮಪತ್ರ ಸಲ್ಲಿಸಿದ್ದಾರೆ.
ಸಾಲಗಾರರಲ್ಲದ 1 ಸ್ಥಾನಕ್ಕೆ ಶ್ರೀಶೈಲಪ್ಪ ಗುಣಾರಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ವಾಪಸಿಗೆ ಡಿ.30 ಕೊನೆ ದಿನವಾಗಿದೆ. ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ವೆಂಕಟೇಶ ನಾಯಕ, ಮುಖಂಡರಾದ ಪಂಪನ ಗೌಡ ಮಾಲಿಪಾಟೀಲ, ಸಿದ್ದನಗೌಡ ಮಾಲಿಪಾಟೀಲ ಅಮರಯ್ಯಸ್ವಾಮಿ, ಅಮರಪ್ಪ ಲಕೋಜಿ, ಪರಮಣ್ಣ ಮೂಲಿಮನಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.