ಜಿಲ್ಲಾಡಳಿತದಿಂದ ನಿರಾಶ್ರಿತ ಆದಿವಾಸಿಗಳ ನಿರ್ಲಕ್ಷ್ಯ

ಮೂಲ ಆದಿವಾಸಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಎನ್‌.ವಿಠಲ್ ಆರೋಪ

Team Udayavani, Sep 1, 2019, 4:55 PM IST

1-September-39

ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಬಿದರೆ ಗ್ರಾಪಂ ವ್ಯಾಪ್ತಿಯ ತ್ರಾಸ ಮಠದಲ್ಲಿ ನಿರಾಶ್ರಿತ ಆದಿವಾಸಿ ಕುಟುಂಬಕ್ಕೆ ಸಂಘದಿಂದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಬಾಳೆಹೊನ್ನೂರು: ಭದ್ರಾ ನದಿಯಲ್ಲಿ ಪ್ರವಾಹ ಉಂಟಾಗಿ 20 ದಿನ ಕಳೆದರೂ ನಿರಾಶ್ರಿತರಾದ ಆದಿವಾಸಿ ಕುಟುಂಬಗಳಿಗೆ ಜಿಲ್ಲಾಡಳಿತದ ವತಿಯಿಂದ ಯಾವುದೇ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಮೂಲ ಆದಿವಾಸಿ ವೇದಿಕೆ ರಾಜ್ಯಾಧ್ಯಾಕ್ಷ ಕೆ.ಎನ್‌.ವಿಠಲ್ ಆರೋಪಿಸಿದರು.

ಖಾಂಡ್ಯ ಹೋಬಳಿ ಬಿದರೆ ಗ್ರಾ.ಪಂ. ವ್ಯಾಪ್ತಿಯ ತ್ರಾಸ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಗ್ರಾಮದಲ್ಲಿ ವಾಸವಾಗಿರುವ ಲಕ್ಷ್ಮಿ , ಸೀತು ಹಾಗೂ ಸುಧಾಕರ್‌ ಕುಟುಂಬಗಳೇ ಇದಕ್ಕೆ ಸಾಕ್ಷಿಯಾಗಿವೆ. ಇದುವರೆಗೂ ಯಾವುದೇ ರೀತಿಯ ಪರಿಹಾರ ನೀಡದೇ ಇರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಅಧಿಕಾರಿಗಳ ವರ್ತನೆ ಖಂಡಿಸುವುದಾಗಿ ತಿಳಿಸಿದರು.

ಸರ್ಕಾರ ಆದೇಶಿಸಿದಂತೆ ನಿರಾಶ್ರಿತರಿಗೆ 10 ಸಾವಿರ ರೂ. ಪರಿಹಾರದ ಚೆಕ್‌ ಹಾಗೂ ಜಿಲ್ಲಾಡಳಿತದ ವತಿಯಿಂದ ಆಹಾರದ ಕಿಟ್ ವಿತರಿಸಬೇಕಿತ್ತು. ಆದರೆ, ಇದುವರೆಗೂ ನೀಡಿಲ್ಲ. ಭದ್ರಾ ಅಭಯಾರಣ್ಯ ಪ್ರದೇಶದಲ್ಲಿ ವಾಸವಾಗಿರುವ ಈ ಕುಟುಂಬಗಳು ಮೂಲಭೂತ ಸೌಕರ್ಯವಿಲ್ಲದೇ ಪರದಾಡುವ ಸ್ಥಿತಿ ಉಂಟಾಗಿದೆ. ಇಂದು ಆದಿವಾಸಿ ಕುಟುಂಬಗಳ ವತಿಯಿಂದ ಸಂಗ್ರಹಿಸಿದ ದೇಣಿಗೆಯಿಂದ ಅಗತ್ಯ ವಸ್ತುಗಳನ್ನು ತಾತ್ಕಾಲಿಕವಾಗಿ ವಿತರಿಸಲಾಗಿದೆ. ಜಿಲ್ಲಾಡಳಿತದ ನಿರ್ಲಕ್ಷ್ಯದ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಸಚಿವರ ಗಮನಕ್ಕೂ ತರಲಾಗುವುದೆಂದು ತಿಳಿಸಿದರು.

ನಿರಾಶ್ರಿತ ಸುಧಾಕರ್‌ ಮಾತನಾಡಿ, ಪ್ರವಾಹದ ನೀರು ಮನೆ ತುಂಬ ಸುತ್ತುವರೆದಿದ್ದು, ರಾತ್ರಿ ವೇಳೆಯಲ್ಲಿ ಹರಸಾಹಸಪಟ್ಟು ಪ್ರವಾಹದಿಂದ ಪಾರಾಗಿದ್ದೇವೆ. ಗ್ರಾ.ಪಂ. ಪಿಡಿಒ ಬಂದು ಮಾಹಿತಿ ಪಡೆದು ಹೋಗಿದ್ದು, ಯಾವುದೇ ಪರಿಹಾರ ನೀಡಿಲ್ಲ. ಮನೆಯೊಳಗೆ ನೀರು ನಿಂತಿದ್ದು, ಯಾವುದೇ ಕ್ಷಣದಲ್ಲೂ ಕುಸಿಯಬಹುದಾಗಿದೆ ಎಂದು ಅಳಲು ತೋಡಿಕೊಂಡರು.

ನಿರಾಶ್ರಿತೆ ಲಕ್ಷಿ ್ಮೕ ಮಾತನಾಡಿ, ಮಧ್ಯರಾತ್ರಿ ಹಠಾತ್‌ ಪ್ರವಾಹ ಏರಿಕೆಯಿಂದ ನಿತ್ಯ ಬಳಕೆ ವಸ್ತುಗಳು, ಆಹಾರ ಸಾಮಗ್ರಿಗಳು ಕೆಟ್ಟುಹೋಗಿವೆ. ಯಾವೊಬ್ಬ ಜನಪ್ರತಿನಿಧಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಶಾಸಕರಾಗಲಿ ಭೇಟಿ ನೀಡಿಲ್ಲ. ಮತ ಕೇಳಲು ಮಾತ್ರ ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ಈ ಕಡೆಗೆ ಭೇಟಿ ನೀಡುತ್ತಾರೆ. ನಂತರದ ದಿನಗಳಲ್ಲಿ ರಾಜಕಾರಣಿಗಳು ಇತ್ತ ಮುಖ ಮಾಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುಡಕಟ್ಟು ಕೃಷಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕೃಷ್ಣರಾಜು, ನ.ರಾ.ಪುರ ಸಂಘದ ಅಧ್ಯಕ್ಷ ಮಂಜುನಾಥ್‌, ಚಾಲಕ ಮಂಜು, ರಾಷ್ಟ್ರೀಯ ಆದಿವಾಸಿ ಆಂದೋಲನದ ಸಂಚಾಲಕಿ ಜ್ಯೋತಿ ಸೇರಿದಂತೆ ಸಂಘದ ಸದಸ್ಯರು, ನಿರಾಶ್ರಿತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.