21ರಿಂದ ಲಿಂ| ಪಟ್ಟದ್ದೇವರ ಸ್ಮರಣೋತ್ಸವ
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಲಹೆ ಉತ್ತಮ ವಾಗ್ಮಿಗಳಿಂದ ಸಭೆ
Team Udayavani, Apr 11, 2019, 3:48 PM IST
ಭಾಲ್ಕಿ: ಹಿರೇಮಠ ಸಂಸ್ಥಾನದಲ್ಲಿ ಲಿಂ| ಡಾ| ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ನಿಮಿತ್ತ ಡಾ| ಬಸವಲಿಂಗ ಪಟ್ಟದ್ದೇವರು ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಭಾಲ್ಕಿ: ಈ ಭಾಗದ ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಲಿಂ| ಡಾ| ಚನ್ನಬಸವ ಪಟ್ಟದ್ದೇವರ ಕೊಡುಗೆ ಅಪಾರವಾಗಿದ್ದು, ಏ.21 ಮತ್ತು 22ರಂದು ನಡೆಯಲಿರುವ ಲಿಂ| ಡಾ| ಚನ್ನಬಸವ ಪಟ್ಟದ್ದೇವರ 20ನೇ ಸ್ಮರಣೋತ್ಸವ
ಹಾಗೂ ವಚನ ಜಾತ್ರೆ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.
ಹಿರೇಮಠ ಸಂಸ್ಥಾನದಲ್ಲಿ ಲಿಂ| ಡಾ| ಚನ್ನಬಸವ ಪಟ್ಟದ್ದೇವರ 20ನೇ ಸ್ಮರಣೋತ್ಸವ ಹಾಗೂ ವಚನ ಜಾತ್ರೆ ನಿಮಿತ್ತ ಪ್ರಚಾರದ ಭಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಭವ್ಯ ಪ್ರಮಾಣದಲ್ಲಿ ಸ್ಮರಣೋತ್ಸವ ಹಾಗೂ ವಚನ ಜಾತ್ರೆ ಹಮ್ಮಿಕೊಳ್ಳಲಾಗುತ್ತಿದೆ.
ಜೊತೆಗೆ ಅನ್ನ ದಾಸೋಹವೂ ನೆರವೇರಲಿದೆ. ಉತ್ತಮ ವಾಗ್ಮಿಗಳಿಂದ ಮಕ್ಕಳಿಗೆ ಶೈಕ್ಷಣಿಕ ಪ್ರಚೋದನಕಾರಿ ಸಭೆಗಳು ಜರುಗಲಿವೆ ಎಂದು ತಿಳಿಸಿದರು.
ಹಿರೇಮಠ ಸಂಸ್ಥಾನ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ,
ಪ್ರಸಕ್ತ ಸಾಲಿನ ವಚನ ಜಾತ್ರೆ ಮತ್ತು ಲಿಂ| ಡಾ| ಚನ್ನಬಸವ ಪಟ್ಟದ್ದೇವರ 20ನೇ ಸ್ಮರಣೋತ್ಸವ ಸಂದರ್ಭದಲ್ಲಿ ಕೆಲವು ಮರಾಠಿ ಗ್ರಂಥಗಳು ಮತ್ತು ಸಿ.ಡಿ. ಲೋಕಾರ್ಪಣೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ 140 ಗ್ರಂಥಗಳು ಪ್ರಕಟವಾಗಿರುವುದು ಹೆಮ್ಮೆಯ ವಿಷಯ ಎಂದರು. ಈ ಸಂದರ್ಭದಲ್ಲಿ ರೈತ
ಸಂಘದ ತಾಲೂಕು ಅಧ್ಯಕ್ಷ ಸಿದ್ರಾಮಪ್ಪ ಅಣದೂರೆ, ರಾಜಪ್ಪ ಜಲ್ದೆ, ಸಂಜು ಕರಕಾಳೆ, ಸಂಗಮೇಶ ವಾಲೆ, ಕಪಲಾಪೂ ಗ್ರಾಮದ ಮಲಶೆಟ್ಟೆಪ್ಪ ಭಾಲ್ಕೆ, ಬಾಬು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.