ಪತ್ರಕರ್ತರಿಗೆ ವಿಶೇಷ ರಕ್ಷಣೆ ಅಗತ್ಯ: ಫಾ| ಡಿಸೋಜಾ
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಕಾರ್ಯ ಮುಖ್ಯ
Team Udayavani, Jul 19, 2019, 4:06 PM IST
ಭಾಲ್ಕಿ: ಏಸು ನಿಲಯದಲ್ಲಿ ಆರ್ಬಿಟ್ ಸಂಸ್ಥೆಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರವನ್ನು ಏಸು ನಿಲಯದ ನಿರ್ದೇಶಕ ಫಾದರ್ ಕ್ಲೇರಿ ಡಿಸೋಜಾ ಉದ್ಘಾಟಿಸಿದರು.
ಭಾಲ್ಕಿ: ಪತ್ರಕರ್ತರು ಜೀವದ ಹಂಗು ತೊರೆದು ಕೆಲವು ಸಮಸ್ಯಾತ್ಮಕ ಸುದ್ದಿಗಳನ್ನು ಪ್ರಕಟಿಸುತ್ತಾರೆ. ಅಂತಹ ಸಂದರ್ಭದಲ್ಲಿ ಸರ್ಕಾರ ಪತ್ರಕರ್ತರಿಗೆ ವಿಶೇಷ ರಕ್ಷಣೆ ನಿಡುವುದು ಅಗತ್ಯ ಎಂದು ಏಸು ನಿಲಯದ ನಿರ್ದೇಶಕ ಫಾದರ್ ಕ್ಲೇರಿ ಡಿಸೋಜಾ ಹೇಳಿದರು.
ಪಟ್ಟಣದ ಏಸು ನಿಲಯದಲ್ಲಿ ಆರ್ಬಿಟ್ ಸಂಸ್ಥೆ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಕಾರ್ಯ ಶ್ರೇಷ್ಠವಾಗಿದೆ. ವರ್ತಮಾನ ಪತ್ರಿಕೆಗಳು ಸಮಾಜದ ಸಿಹಿ-ಕಹಿ ಘಟನೆಗಳನ್ನು ಯಥಾವತ್ತಾಗಿ ಪ್ರಕಟಿಸಿ ಸಮಾಜವನ್ನು ಜಾಗೃತಗೊಳಿಸುತ್ತವೆ. ಕಾರಣ ಪತ್ರಿಕೆಗಳು ಸಮಾಜದ ಕನ್ನಡಿಯಾಗಿವೆ ಎಂದರು. ಆರ್ಬಿಟ್ ಸಂಸ್ಥೆಯು ಸುಮಾರು 25 ವರ್ಷಗಳಿಂದ ಎಚ್ಐವಿ ಸೊಂಕು ಪೀಡಿತರಿಗೆ, ಮಾನಸಿಕ ಅಸ್ವಸ್ಥರಿಗೆ, ಅಂಗವಿಕಲರಿಗೆ, ಕುಷ್ಠರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕಾಗಿ ಸ್ವಸಹಾಯ ಸಂಘಗಳ ಸ್ಥಾಪನೆ, ನೀರಿನ ಬರ ನೀಗಿಸಲು ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದರು.
ನಿಲಯದ ಮೂಲಕ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ವ್ಯವಸ್ಥೆ ಮಾಡಲಾಗಿದೆ. ಚರ್ಚ್‌ನಲ್ಲಿ ನಡೆಯುವ ಧಾರ್ಮಿಕ ಕಾರ್ಯಗಳನ್ನು ಎಲ್ಲ ಪತ್ರಕರ್ತರು ಉತ್ತಮ ರೀತಿಯಿಂದ ಪ್ರಕಟಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ರಾಜೋಳೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸನ್ಮಾನ: ಇದೇ ವೇಳೆ ಪತ್ರಕರ್ತರಾದ ಚಂದ್ರಶೇಖರ ಎಮ್ಮೆ, ಗಣಪತಿ ಬೋಚರೆ, ರಾಜೇಶ ಮುಗಟೆ, ಪ್ರದೀಪ ಬಿರಾದಾರ, ದಿಲೀಪ ಜೋಳದಾಪ್ಕೆ, ಸಂತೋಷ ಹಡಪದ ಅವರನ್ನು ಆರ್ಬಿಟ್ ಸಂಸ್ಥೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಿಸ್ಟರ್ ಜ್ಯೋತಿ, ಸಿಸ್ಟರ್ ಮಿನಿ, ಫಾದರ್ ದೀಪಕ, ಫಾದರ ಪ್ರಭು, ಫಾದರ್ ಪ್ರವೀಣ ಉಪಸ್ಥಿತರಿದ್ದರು. ಸಿಸ್ಟರ್ ಶೋಭಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.