ನುಡಿಹಬ್ಬಕ್ಕೆ ಶ್ರೀಗಳಿಗೆ ಆಹ್ವಾನ
28ರಂದು ಭಾಲ್ಕಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ
Team Udayavani, Jun 26, 2019, 4:22 PM IST
ಭಾಲ್ಕಿ: 5ನೇ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ತಾಲೂಕು ಅಧ್ಯಕ್ಷ ಶಶಿಧರ ಕೋಸಂಬೆ ನೇತೃತ್ವದಲ್ಲಿ ಡಾ| ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರನ್ನು ಅವರನ್ನು ಆಹ್ವಾನಿಸಲಾಯಿತು.
ಭಾಲ್ಕಿ: ಪಟ್ಟಣದಲ್ಲಿ ಜೂ.28ರಂದು ನಡೆಯಲಿರುವ ಐದನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ| ಬಸವಲಿಂಗ ಪಟ್ಟದ್ದೇವರು ಹಾಗೂ ಶ್ರೀ ಗುರುಬಸವ ಪಟ್ಟದ್ದೇವರು ಅವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಹ್ವಾನಿಸಲಾಯಿತು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಶಶಿಧರ ಕೋಸಂಬೆ ನೇತೃತ್ವದಲ್ಲಿ ಹಿರಿಯ ಸಾಹಿತಿಗಳು, ಪ್ರಮುಖರು, ಪದಾಧಿಕಾರಿಗಳು, ಕನ್ನಡ ಪ್ರೇಮಿಗಳು ಆಗಮಿಸಿ ಸಮ್ಮೇಳನದ ಸಾನ್ನಿಧ್ಯ ವಹಿಸಲಿರುವ ಡಾ| ಬಸವಲಿಂಗ ಪಟ್ಟದ್ದೇವರು ಹಾಗೂ ಶ್ರೀ ಗುರುಬಸವ ಪಟ್ಟದ್ದೇವರು ಅವರಿಗೆ ಶಾಲು ಹೊದಿಸಿ, ಹಾರ ಹಾಕಿ, ತಾಂಬೂಲ ನೀಡಿ ಆಹ್ವಾನಿಸಿದರು. ಹಿರಿಯ ಸಾಹಿತಿಗಳಾದ ಶರಣಯ್ಯ ಮಠಪತಿ, ವೀರಶೆಟ್ಟಿ ಬಾವುಗೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸುಭಾಷ ಹುಲಸೂರೆ, ಪ್ರಾಚಾರ್ಯ ಚಂದ್ರಕಾಂತ ಬಿರಾದಾರ್, ಕಸಾಪ ಗೌರವ ಕಾರ್ಯದರ್ಶಿ ರಮೇಶ ಚಿದ್ರಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಕಾರಾಮುಂಗೆ, ಕಾಶೀನಾಥ ಲದ್ದೆ, ವಕೀಲ ಮಹೇಶ ರಾಚೋಟೆ, ಮಹಾಂತೇಶ ಭಂಡೆ, ಗಿರೀಶ್ ಬಿರಾದಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.