Bengaluru: ವಿಪತ್ತು ನಿರ್ವಹಣೆಗೆ 10 ಕೋಟಿ ರೂ.: ತುಷಾರ್
Team Udayavani, May 14, 2024, 11:00 AM IST
ಬೆಂಗಳೂರು: ಮುಂಗಾರು ಮಳೆಯ ಸಮರ್ಪಕ ನಿರ್ವಹಣೆಗೆ ಪಾಲಿಕೆ ಮೈಕೊಡವಿಕೊಂಡು ಎದ್ದಿದೆ. ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿ ವಿಪತ್ತು ನಿರ್ವಹಣೆಗಾಗಿ ಈ ಬಾರಿಯ ಆಯವ್ಯಯದಲ್ಲಿ 10 ಕೋಟಿ ರೂ. ಮೀಸಲಿಡಲಾಗಿದೆ. ಈ ಅನುದಾನವನ್ನು ಮಳೆಗಾಲದ ತುರ್ತು ಸಮಸ್ಯೆ ನಿರ್ವಹಣೆಗೆ ಬಳಸಿಕೊಳ್ಳಲಾಗುವುದು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ನಗರದಲ್ಲಿ ವಿಪತ್ತು ನಿರ್ವಹಣೆಗಾಗಿ ತೆಗೆದುಕೊಳ್ಳ ಬೇಕಾಗಿರುವ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು. ರಾಜಕಾಲುವೆಗಳ ಹೊಳೆತ್ತಲು ಪ್ರತಿ ವಾರ್ಡ್‌ಗೆ 30 ಲಕ್ಷ ರೂ. ಮೀಸರಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 225 ವಾರ್ಡ್ ಗಳಲ್ಲಿ ಸೈಡ್ ಡ್ರೆ„ನ್‌ಗಳಲ್ಲಿ ಹೂಳೆತ್ತುವ ಕೆಲಸ ಭರದಿಂದ ನಡೆಯುತ್ತಿದೆ. ಮಳೆಗಾಲದ ವೇಳೆ ಮಳೆ ನೀರು ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಕಾಲ-ಕಾಲಕ್ಕೆ ಹೂಳೆತ್ತುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
74 ಕಡೆಗೆ ಬೇಕು ಶಾಶ್ವತ ಪರಿಹಾರ: ನಗರದಲ್ಲಿ 198 ಪ್ರವಾಹ ಪೀಡಿತ ಪ್ರದೇಶಗಳಿದ್ದು, ಈ ಪೈಕಿ 124 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಶಾಶ್ವತ ಪರಿಹಾರವನ್ನು ಮಾಡಲಾಗಿದೆ. ಈ 124 ಸ್ಥಳಗಳಿಗೆ ವಲಯ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳಗಳಲ್ಲಿ ಏನಾದರೂ ಸಮಸ್ಯೆಯಿದ್ದರೆ ಕೂಡಲೇ ಕಾಮಗಾರಿ ಕೈಗೊಂಡು ಸರಿಪಡಿಸುವ ಕೆಲಸ ಮಾಡ ಬೇಕು. ಉಳಿದ 74 ಪ್ರದೇಶಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಶೀಘ್ರ ಶಾಶ್ವತ ಪರಿಹಾರ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು 124 ಕಡೆ ನೀರಿನ ಮಟ್ಟ ಅಳೆ ಯುವ ಸಂವೇದಕಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗ ದಲ್ಲಿ ಅಳವಡಿಸಲಾಗಿದೆ. ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್‌ನಲ್ಲಿ ಮೇಲ್ವಿಚಾ ರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮರಗಳನ್ನು ತ್ವರಿತವಾಗಿ ತೆರವುಗೊಳಿಸಿ: ನಗರದಲ್ಲಿ ಕಳೆದೊಂದು ವಾರದಿಂದ ಬೇರೆ ಬೇರೆ ಸ್ಥಳಗಳಲ್ಲಿ ಮಳೆಯಾಗುತ್ತಿದ್ದು, ಒಂದು ಕಡೆ ಒಂದೇ ರೀತಿಯಲ್ಲಿ ಸುರಿದಿದೆ. ಕೆಲವೆಡೆ ಸಾಮಾನ್ಯ, ಮಧ್ಯಮ ಹಾಗೂ ಇನ್ನೂ ಕೆಲವೆಡೆ ಹೆಚ್ಚು ಮಳೆಯಾಗಿರುವ ವರದಿ ಯಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದಾಗಿ ಸುಮಾರು 150 ಕಡೆ ನೀರು ನಿಂತಿದೆ. ನಿಂತ ನೀರು 2 ಗಂಟೆಯೊಳಗಾಗಿ ಹರಿದುಹೋಗಿದ್ದು, ಯಾವುದೇ ರೀತಿ ಸಮಸ್ಯೆಯಾಗಿಲ್ಲ ಎಂದು ಹೇಳಿದರು. ಮಳೆ ಪ್ರಾರಂಭವಾದಾಗಿನಿಂದ 325 ಮರಗಳು ಬಿದ್ದಿದ್ದು, ಅದರಲ್ಲಿ 320 ಮರಗಳನ್ನು ತೆರವುಗೊಳಿಸ ಲಾಗಿದೆ. 698 ರೆಂಬೆ ಕೊಂಬೆಗಳು ಬಿದ್ದಿದ್ದು, 650 ರೆಂಬೆ-ಕೊಂಬೆಗಳನ್ನು ಸಿಬ್ಬಂದಿ ತೆರವುಗೊಳಿಸಿದ್ದಾರೆ. ಉಳಿದ ಮರ, ರೆಂಬೆ ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಧರೆಗುರು ಳಿದ ಮರಗಳನ್ನು ತೆರವುಗೊಳಿಸಲು 39 ತಂಡಗಳು ಕಾರ್ಯನಿರ್ವ ಹಿಸುತ್ತಿದ್ದು, ಕಟಾವು ಮಾಡಿ ರಸ್ತೆ ಬದಿ ಹಾಕಿರುವಂತಹ ರೆಂಬೆ- ಕೊಂಬೆಗಳನ್ನು ತ್ವರಿತಗತಿ ಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಮೇಘ ಸಂದೇಶ, ವರುಣಮಿತ್ರದ ಮೂಲಕ ಮಳೆ ಮಾಹಿತಿ:
ಮೇಘ ಸಂದೇಶ, ವರುಣಮಿತ್ರದ ಮೂಲಕ ಮಳೆ ಮಾಹಿತಿ ಮಳೆ ಬಗ್ಗೆ ನಾಗರಿಕರಿಗೆ ಅಗತ್ಯ ಮಾಹಿತಿ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (IISc)ವತಿಯಿಂದ “ಬೆಂಗಳೂರು ಮೇಘ ಸಂದೇಶ “ಮೊಬೈಲ್ ಆಪ್ ( https://play.google.com/store/apps/detailsid=com. moserptech. meghasandesha&hl=en) ಬಿಡುಗಡೆ ಗೊಳಿಸಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
“ವರುಣಮಿತ್ರ” ಅಂತರ್ಜಾಲ ತಾಣ (http://varunamitra.karnataka.gov.in) ದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಉಂಟಾಗುವ ಪ್ರವಾಹವನ್ನು ತಡೆಲು ವಲಯವಾರು ನಕ್ಷೆ, ಮಳೆ ಮುನ್ಸೂಚನೆ, ಪ್ರವಾಹ ಮುನ್ಸೂಚನೆ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.