ನೆರೆ ಸಂತ್ರಸ್ತರಿಗೆ 10 ಲಕ್ಷ ರೂ. ನೆರವು
Team Udayavani, Sep 29, 2019, 3:05 AM IST
ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಹೋಟೆಲ್ ಘಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಲು ನಿರ್ಧರಿಸಿದೆ.
ನೆರೆ ಸಂತ್ರಸ್ತರ ಸಹಾಯಾರ್ಥವಾಗಿ ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ಶನಿವಾರ ಜಯಕರ್ನಾಟಕ ಹೋಟೆಲ್ ಘಟಕದಿಂದ ಆಯೋಜಿಸಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಈ ನಿರ್ಧಾರ ಪ್ರಕಟಿಸಿ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡುವ ದೇಣಿಗೆಯ ಚೆಕ್ ಪ್ರದರ್ಶಿಸಲಾಯಿತು.
ಜಯಕರ್ನಾಟಕ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ಹೋಟೆಲ್ ಘಟಕದ ಅಧ್ಯಕ್ಷ ಉದಯ ಶೆಟ್ಟಿ, ಇಂಡೋ-ಮಿಮ್ ಸಂಸ್ಥೆಯ ಸುರೇಶ್ ಗೌಡ, ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದೇ ವೇಳೆ ತೆಂಕುತಿಟ್ಟು ಹಾಗೂ ಬಡಗು ತಿಟ್ಟು ಕಲಾವಿದರ ಸಮಾಗಮದಲ್ಲಿ, ಶ್ರೀ ಕ್ಷೇತ್ರ ಪಾವಂಜೆ (ಹಳೆಯಂಗಡಿ) ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಶ್ರೀತ ಸಂಚಾರಿ ಯಕ್ಷಗಾನ ಮಂಡಳಿಯಿಂದ “ಸಂಪೂರ್ಣ ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಭಾಗವತರಾದ ರವಿಚಂದ್ರ, ಸುರೇಶ್ ಶೆಟ್ಟಿ, ಯಕ್ಷ ಕಲಾವಿದರಾದ ಸಂತೋಷ್, ಶ್ರೀಧರ್ ಭಟ್, ರಕ್ಷಿತ್ ಶೆಟ್ಟಿ, ಸೀತಾರಾಮ್ ಕುಮಾರ್ ಸೇರಿ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.