ಸವಿತಾ ಸಮಾಜ ಅಭಿವೃದ್ಧಿಗೆ 100 ಕೋಟಿ ರೂ.

Team Udayavani, Feb 2, 2020, 10:41 AM IST

bng-tdy-2

ಬೆಂಗಳೂರು: ಸವಿತಾ ಸಮುದಾಯದ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜತೆ ಚರ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ, ವೃತ್ತಿ ತರಬೇತಿ, ವಿದ್ಯಾರ್ಥಿ ನಿಲಯ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸುತ್ತೇನೆ ಎಂದರು.

ಜಯಂತಿಗಳು ಜಾತಿ ಆಧಾರಿತವಾಗುತ್ತಿದ್ದು, ಜಯಂತಿಗಳ ಸ್ವರೂಪ ಬದಲಿಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು, ವಿವಿಧ ಸಮಾಜದ ಸ್ವಾಮೀಜಿಗಳು, ಮುಖಂಡರ ಅಭಿಪ್ರಾಯ ಪಡೆಯಲಾಗುವುದು ಎಂದರು. ಜಯಂತಿಗಳ ಆಚರಣೆ ಒಳ್ಳೆಯದು. ಆದರೆ, ಜಯಂತಿಗಳಲ್ಲಿರುವ ಜಾತೀಯತೆಯನ್ನು ಬಿಡಬೇಕು. ಜಾತಿಗಳ ಆಧಾರದ ಮೇಲೆ ಸ್ವರ್ಗದ ಬಾಗಿಲು ತೆರೆಯುವುದಿಲ್ಲ. ನಮ್ಮ ಅಂಗಾಂಗಗಳ ಕೆಲಸ ಭಿನ್ನವಾದರೂ ಶರೀರ ಒಂದೇ. ಅದೇ ರೀತಿ ಎಲ್ಲ ಸಮುದಾಯಗಳ ವೃತ್ತಿ ಭಿನ್ನವಾದರೂ ಸಮಾಜದಲ್ಲಿ ನಾವೆಲ್ಲಾ ಒಂದೇ ಎಂಬ ಭಾವನೆ ಹೊಂದಿರಬೇಕು ಎಂದು ತಿಳಿಸಿದರು.

ಕೊಂಚೂರು ಸವಿತಾ ಪೀಠದ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಸವಿತಾ ಸಮಾಜದವರನ್ನು ನೋಡಿದರೆ ದೋಷ ಎಂಬ ಭಾವನೆ ಸಮಾಜದಲ್ಲಿ ಜೀವಂತವಾಗಿದೆ. ಇಂದಿಗೂ ಸಮಾಜದವರನ್ನು ಕೀಳಾಗಿ ಕಾಣುತ್ತಿದ್ದಾರೆ. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮುದಾಯ ಹಿಂದುಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಸಿ. ವೇಣುಗೋಪಾಲ್‌ ಮಾತನಾಡಿ, ಸರ್ಕಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 2 ಕೋಟಿ ರೂ. ನೀಡಿರುವುದು ಸಂತಸದ ಸಂಗತಿ. ಆದರೆ, ನಿಗಮಕ್ಕೆ ಜಾಗ ನೀಡಿಲ್ಲ. ಶೀಘ್ರ ಜಾಗ ಸೇರಿದಂತೆ ಸಮುದಾಯದ ನಾಯಕರೊಬ್ಬರನ್ನು ಅಧ್ಯಕ್ಷರಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಜಿ. ಮಂಜುನಾಥ್‌ ಮತ್ತು ತಂಡದವರಿಂದ ನಾದಸ್ವರ ಕಾರ್ಯಕ್ರಮ ನಡೆಯಿತು. ಪ್ರೊ. ವೆಂಕಟಾಚಲಪತಿ ಅವರು ಬರೆದ ಕೇಶಶಿಲ್ಪಿಗಳು ಪುಸ್ತಕವನ್ನು ಸಚಿವ ಸಿ.ಟಿ.ರವಿ ಬಿಡುಗಡೆಗೊಳಿಸಿದರು. ಸಮಾರಂಭಕ್ಕೂ ಮೊದಲು ಪುರಭವನದಿಂದರವೀಂದ್ರ ಕಲಾಕ್ಷೇತ್ರದವರೆಗೆ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಉದಯ್‌ ಬಿ. ಗರುಡಾಚಾರ್‌, ಸವಿತಾ ಸಮಾಜದ ಅಧ್ಯಕ್ಷ ಸಂಪತ್‌ ಕುಮಾರ್‌, ಕಲಬುರಗಿ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.